• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕೇಂದ್ರ ವಿಮಾನಯಾನ ಸಚಿವರನ್ನು ಬೇಟಿ ಮಾಡಿದ ಹೆಚ್.ಡಿ.ಕುಮಾರಸ್ವಾಮಿ.

ಪ್ರತಿಧ್ವನಿ by ಪ್ರತಿಧ್ವನಿ
January 17, 2025
in Top Story, ಅಂಕಣ, ಕರ್ನಾಟಕ, ರಾಜಕೀಯ, ವಾಣಿಜ್ಯ, ವಿದೇಶ, ವಿಶೇಷ, ಶೋಧ
0
Share on WhatsAppShare on FacebookShare on Telegram

ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣ ಕಾಮಗಾರಿ ತ್ವರಿತಗತಿಯಲ್ಲಿ ಪೂರ್ಣಗೊಳಿಸಲು ಮನವಿ

ADVERTISEMENT

ರಾಜ್ಯದಲ್ಲಿ ಸೀಪ್ಲೇನ್ ಸೇವೆ; ಐತಿಹಾಸಿಕ ಪ್ರವಾಸಿ ತಾಣಗಳಲ್ಲಿ ಪ್ರಾರಂಭಿಸಲು ಪ್ರಸ್ತಾವನೆ

ನವದೆಹಲಿ: ಕರ್ನಾಟಕದ ಮೂಲಸೌಕರ್ಯ ಮತ್ತು ಪ್ರವಾಸೋದ್ಯಮವನ್ನು ಉತ್ತೇಜಿಸುವ ಹಿನ್ನೆಲೆಯಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ನಾಗರಿಕ ವಿಮಾನಯಾನ ಸಚಿವ ರಾಮಮೋಹನ್ ನಾಯ್ಡು ಅವರ ಜತೆ ಮಹತ್ವದ ಮಾತುಕತೆ ನಡೆಸಿದರು.

ನವದೆಹಲಿಯಲ್ಲಿ ಶುಕ್ರವಾರ ನಾಗರಿಕ ವಿಮಾನಯಾನ ಸಚಿವಾಲಯದಲ್ಲಿ ನಾಯ್ಡು ಅವರನ್ನು ಭೇಟಿಯಾದ ಕುಮಾರಸ್ವಾಮಿ ಅವರು; ಎರಡು ಪ್ರಮುಖವಾದ ಮನವಿ ಪತ್ರಗಳನ್ನು ಸಲ್ಲಿಸಿದರು.

ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿರುವ ಕೃಷ್ಣರಾಜ ಸಾಗರ (ಕೆ ಆರ್ ಎಸ್) ಜಲಾಶಯದಲ್ಲಿ ಸೀಪ್ಲೇನ್ (ಸಮುದ್ರ ವಿಮಾನ ಸೇವೆ) ಆರಂಭಿಸುವ ಬಗ್ಗೆ ಸಚಿವರು, ವಿಮಾನಯಾನ ಸಚಿವರ ಜತೆ ಚರ್ಚೆ ನಡೆಸಿದರು.

ಸಮುದ್ರವಿಮಾನ ಸೇವೆ ಕರ್ನಾಟಕಕ್ಕೆ ಬಹಳ ಮುಖ್ಯವಾದದ್ದು. ಪ್ರವಾಸೋದ್ಯಮಕ್ಕೆ ಇದು ಹೆಚ್ಚು ಬಳ ತುಂಬಲಿದೆ ಎಂದು ಸಚಿವರಿಗೆ ಮನವರಿಕೆ ಮಾಡಿಕೊಟ್ಟ ಕುಮಾರಸ್ವಾಮಿ ಅವರು; ಮೈಸೂರು, ಮಂಡ್ಯ, ಬೈಂದೂರು, ಆಲಮಟ್ಟಿ, ಬೇಲೂರು-ಹಳೆಬೀಡು ಮತ್ತು ವಿಜಯನಗರ (ಹಂಪಿ) ಪ್ರವಾಸಿ ತಾಣಗಳನ್ನು ಸಂಪರ್ಕಿಸುವ ಸಮುದ್ರ ವಿಮಾನ ಸೇವೆಗಳನ್ನು ಪ್ರಾರಂಭಿಸುವ ಪ್ರಸ್ತಾವನೆ ಸಲ್ಲಿಸಿದರು.

ಐತಿಹಾಸಿಕ ಮತ್ತು ಸಾಂಸ್ಕೃತಿಕ ಮಹತ್ವ ಹೊಂದಿರುವ ಈ ಸ್ಥಳಗಳು ತ್ವರಿತ ಮತ್ತು ಸುಲಭ ಪ್ರಯಾಣದ ಆಯ್ಕೆಯಿಂದ ಹೆಚ್ಚಿನ ಲಾಭವನ್ನು ಪಡೆಯಬಹುದಾಗಿದೆ ಎಂದು ರಾಮಮೋಹನ್ ನಾಯ್ಡು ಅವರಿಗೆ ಸಚಿವರು ಮನವರಿಕೆ ಮಾಡಿಕೊಟ್ಟರು.

ಸಮುದ್ರ ವಿಮಾನ ಸೇವೆ ಪ್ರಯಾಣದ ಸಮಯವನ್ನು ಕಡಿಮೆ ಮಾಡುವುದರ ಜತೆಗೆ, ಕರ್ನಾಟಕದ ಪ್ರವಾಸೋದ್ಯಮಕ್ಕೆ ಅತಿದೊಡ್ಡ ಅವಕಾಶಗಳನ್ನು ತೆರೆಯಲಿದೆ. ಇದು ಪ್ರಧಾನಿ ನರೇಂದ್ರ ಮೋದಿ ಉಡಾನ್ ಯೋಜನೆ ಮತ್ತು ಆತ್ಮನಿರ್ಭರ ಭಾರತ್ ಪರಿಕಲ್ಪನೆಗೆ ಪೂರಕವಾಗಿವೆ ಎಂದು ಕುಮಾರಸ್ವಾಮಿ ಅವರು ವಿಮಾನಯಾನ ಸಚಿವರಿಗೆ ವಿವರಿಸಿದರು.

ಹಾಸನ ವಿಮಾನ ನಿಲ್ದಾಣ ಶೀಘ್ರ ಪೂರ್ಣಗೊಳಿಸಲು ಮನವಿ:

ಹಾಸನ ಗ್ರೀನ್‌ಫೀಲ್ಡ್ ವಿಮಾನ ನಿಲ್ದಾಣದ ನಿರ್ಮಾಣವನ್ನು ತ್ವರಿತಗತಿಯಲ್ಲಿ ಮುಗಿಸುವ ಬಗ್ಗೆ ವಿಮಾನಯಾನ ಸಚಿವರಲ್ಲಿ ಬೃಹತ್ ಕೈಗಾರಿಕೆ ಸಚಿವರು ಮನವಿ ಮಾಡಿದರು.

ಹಾಸನ ವಿಮಾನ ನಿಲ್ದಾಣದ ನಿರ್ಮಾಣ ಪೂರ್ಣವಾದರೆ ಪ್ರವಾಸೋದ್ಯಮಕ್ಕೆ ಅನುಕೂಲ ಆಗುವುದರ ಜತೆಗೆ ಕೃಷಿ, ಕೈಗಾರಿಕೆ, ಹೈನುಗಾರಿಕೆ ಸೇರಿದಂತೆ ಅನೇಕ ವಲಯಗಳ ಅಭಿವೃದ್ಧಿಗೆ ವೇಗ ದೊರೆಯಲಿದೆ. ಹಾಸನ ಶೈಕ್ಷಣಿಕ, ಕೃಷಿ ಮತ್ತು ಕೈಗಾರಿಕಾ ಕೇಂದ್ರವಾಗಿದ್ದು, ರಾಷ್ಟ್ರೀಯ ಪ್ರವಾಸಿ ಜಾಲದ ಅತಿ ಪ್ರಮುಖ ಕೊಂಡಿಯಾಗಿದೆ. ಮಾಜಿ ಪ್ರಧಾನಿ ಹೆಚ್.ಡಿ ಅವರ ಅಧಿಕಾರಾವಧಿಯಲ್ಲಿ ಪ್ರಾರಂಭವಾದ ವಿಮಾನ ನಿಲ್ದಾಣ ಯೋಜನೆ ವ್ಯೂಹಾತ್ಮಕವಾಗಿ ಬಹಳ ಮಹತ್ವದ್ದಾಗಿದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಾಸನ ವಿಮಾನ ನಿಲ್ದಾಣದ ಪ್ರಸ್ತುತ ಯೋಜನೆಗಳು ಈ ಭಾಗದ ಅಗತ್ಯಗಳನ್ನು ಪೂರೈಸಲು ಸಾಕಾಗುವುದಿಲ್ಲ. ಇದನ್ನು ಏರ್‌ಬಸ್ A320 ವಿಮಾನಗಳನ್ನು ನಿರ್ವಹಿಸುವಷ್ಟರ ಮಟ್ಟಿಗೆ ಅಭಿವೃದ್ಧಿಪಡಿಸುವುದು ಅನಿವಾರ್ಯವಾಗಿದೆ. ಇದರಿಂದ ಹಾಸನವು ಕರ್ನಾಟಕದ ಪರಂಪರೆ ಮತ್ತು ಕೈಗಾರಿಕಾ ವಲಯದ ಪ್ರವೇಶದ್ವಾರವಾಗುವಂತೆ ಮಾಡಬಹುದು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಕುಮಾರಸ್ವಾಮಿ ಅವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ವಿಮಾನಯಾನ ಸಚಿವರು; ಆದಷ್ಟು ಬೇಗ ತಮ್ಮ ಬೇಡಿಕೆಗಳನ್ನು ಈಡೇರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಹಾಸನ ವಿಮಾನ ನಿಲ್ದಾಣದ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಸಮುದ್ರ ವಿಮಾನ ಸೇವೆಗಳ ಮೂಲಸೌಕರ್ಯ ಕಾರ್ಯವನ್ನು ತ್ವರಿತಗತಿಯಲ್ಲಿ ಮುನ್ನಡೆಸಲು ನಾಗರಿಕ ವಿಮಾನಯಾನ ಸಚಿವಾಲಯ ಬದ್ಧವಾಗಿದೆ. ತಮ್ಮ ಮನವಿಗಳ ಕೂಡಲೇ ಪರಿಶೀಲಿಸಿ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ಕೊಡುತ್ತೇನೆ ಎಂದು ಅವರು ಕುಮಾರಸ್ವಾಮಿ ಅವರಿಗೆ ಭರವಸೆ ಕೊಟ್ಟರು.

ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ, ಕೋಲಾರ ಸಂಸದ ಮಲ್ಲೇಶ್ ಬಾಬು ಅವರು ಸಚಿವರ ಜತೆಯಲ್ಲಿ ಇದ್ದರು.

Tags: Airlines ministerairportCentral MinisterH d Kumar swamyHassanKRSMandya MPRamamohan naiduಎಚ್ ಡಿ ಕುಮಾರಸ್ವಾಮಿ
Previous Post

ಸಚಿವಾಲಯದ ಸಿಬ್ಬಂದಿಗಾಗಿ 2 ದಿನಗಳ ಇವಿ ಮೇಳ: ಇಂಧನ ಸಚಿವ ಕೆ.ಜೆ.ಜಾರ್ಜ್ ಚಾಲನೆ‌

Next Post

C M ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು 300 ಕೋಟಿ ರೂ. ಮೌಲ್ಯದ 142 ಆಸ್ತಿಗಳನ್ನು ಜಪ್ತಿ ಮಾಡಿದೆ. ED, Bangalore

Related Posts

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ
ಅಂಕಣ

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ-ನಾ ದಿವಾಕರ ಲೇಖನ

by ಪ್ರತಿಧ್ವನಿ
April 10, 2026
0

ಹೆಣ್ಣು ದನಿಗೆ ದನಿಯಾಗುವ ಸಾಹಿತ್ಯ ಹೂರಣ ಅದರ ಗರ್ಭದಲ್ಲಿರುವ ಕ್ಷೀಣ ದನಿಗಳನ್ನು ಸಮಾಜಕ್ಕೆ ಮರುಪರಿಚಯಿಸುವ ಸಾಹಿತ್ಯಿಕ ಕೃತಿ “ ಹಾಸನ ಮಣ್ಣಿನ ಹೆಣ್ಣು ದನಿಗಳು ” ನಾ...

Read moreDetails
ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

ಐಟಿ ದಾಳಿ ವೇಳೆ ಸಿಜೆ ರಾಯ್ ಆತ್ಮಹತ್ಯೆ: ಎಸ್‌ಐಟಿ ತನಿಖೆಯಲ್ಲಿ ಕಾರಣ ಬಹಿರಂಗ

April 10, 2026
ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

April 10, 2026
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
Next Post
C M  ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು 300 ಕೋಟಿ ರೂ. ಮೌಲ್ಯದ 142 ಆಸ್ತಿಗಳನ್ನು ಜಪ್ತಿ ಮಾಡಿದೆ. ED, Bangalore

C M ಸಿದ್ದರಾಮಯ್ಯ ವಿರುದ್ಧದ ಮುಡಾ ಹಗರಣದ ತನಿಖೆಯಲ್ಲಿ ಜಾರಿ ನಿರ್ದೇಶನಾಲಯವು 300 ಕೋಟಿ ರೂ. ಮೌಲ್ಯದ 142 ಆಸ್ತಿಗಳನ್ನು ಜಪ್ತಿ ಮಾಡಿದೆ. ED, Bangalore

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada