• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, May 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಇದೀಗ

ಸೇಲಂ ಉಕ್ಕು ಸ್ಥಾವರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಯೋಗಾಸನ..!

ಪ್ರತಿಧ್ವನಿ by ಪ್ರತಿಧ್ವನಿ
June 21, 2025
in ಇದೀಗ, ರಾಜಕೀಯ, ವಿಶೇಷ
0
ಸೇಲಂ ಉಕ್ಕು ಸ್ಥಾವರದಲ್ಲಿ ಹೆಚ್.ಡಿ.ಕುಮಾರಸ್ವಾಮಿ ಯೋಗಾಸನ..!
Share on WhatsAppShare on FacebookShare on Telegram
ADVERTISEMENT

ಸೇಲಂ (ತಮಿಳುನಾಡು): ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಸೇಲಂ ಉಕ್ಕು ಸ್ಥಾವರದಲ್ಲಿ ನಡೆದ 11ನೇ ಅಂತಾರಾಷ್ಟ್ರೀಯ ಯೋಗ ದಿನ ಕಾರ್ಯಕ್ರಮದಲ್ಲಿ.ಪಾಲ್ಗೊಂಡರು.

ಕಾರ್ಖಾನೆಯ ಸಿಬ್ಬಂದಿ, ಅವರ ಕುಟುಂಬ ಸದಸ್ಯರು, ಹಿರಿಯ ಅಧಿಕಾರಿಗಳು, ಭಾರತೀಯ ಉಕ್ಕು ಪ್ರಾಧಿಕಾರ ಹಾಗೂ ಉಕ್ಕು ಸಚಿವಾಲಯದ ಉನ್ನತ ಅಧಿಕಾರಿಗಳ ಜೊತೆಯಲ್ಲಿ ಸಚಿವರು ಯೋಗಾಭ್ಯಾಸ ನಡೆಸಿದರು.

ಸೇಲಂ ಟೌನ್‌ಶಿಪ್‌ನಲ್ಲಿರುವ ಹಿಲ್ ವ್ಯೂ ಕ್ರೀಡಾಂಗಣದಲ್ಲಿ ಯೋಗ ಶಿಕ್ಷಕರ ಮಾರ್ಗದರ್ಶನದಲ್ಲಿ ಸಚಿವರು ಕೆಲ ಪ್ರಮುಖ, ಸರಳ ಆಸನಗಳನ್ನು ಹಾಗೂ ಪ್ರಾಣಾಯಾಮವನ್ನು ಹಾಗೂ ಪ್ರಾಣಾಯಾಮವನ್ನೂಅಭ್ಯಾಸ ಮಾಡಿದರು.

ಮೋದಿ ಅವರನ್ನು ಅಭಿನಂಧಿಸಿದ ಸಚಿವರು:

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಕುಮಾರಸ್ವಾಮಿ ಅವರು; ಯೋಗ ಎನ್ನುವುದು ನಮ್ಮ ಭಾರತದಲ್ಲಿ ಪ್ರಾಚೀನ ಕಾಲದಿಂದ ಬೆಳೆದುಬಂದ ಜೀವನಶೈಲಿಯಾಗಿದೆ. ಭಾರತಕ್ಕಷ್ಟೇ ಸೀಮಿತವಾಗಿದ್ದ ಯೋಗವನ್ನು ಹನ್ನೊಂದು ವರ್ಷಗಳ ಹಿಂದೆ ಪ್ರಧಾನಿಗಳಾಗಿ ಅಧಿಕಾರ ವಹಸಿಕೊಂಡ ನರೇಂದ್ರ ಮೋದಿ ಅವರು ಇಡೀ ಜಗತ್ತಿನ ವೇದಿಕೆಗೆ ತೆಗೆದುಕೊಂಡು ಹೋದರು. ಅದರ ಪರಿಣಾಮವಾಗಿ ಜಗತ್ತಿನ ಎಲ್ಲೆಡೆ ಜೂನ್‌ ೨೧ನೇ ದಿನವನ್ನು ಅಂತಾರಾಷ್ಟ್ರೀಯ ಯೋಗ ದಿನ ಎಂದು ಆಚರಿಸಲಾಗುತ್ತಿದೆ. ಇದರ ಸಂಪೂರ್ಣ ಹೆಗ್ಗಳಿಕೆ ಮೋದಿ ಅವರಿಗೆ ಸಲ್ಲಬೇಕು ಎಂದರು.

ಸೇಲಂ ಉಕ್ಕು ಸ್ಥಾವರದ ಸಿಬ್ಬಂದಿ, ಅಧಿಕಾರಿಗಳು, ಅವರ ಕುಟುಂಬ ಸದಸ್ಯರ ಜತೆ ಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವ ಅವಕಾಶ ನನಗೆ ಸಿಕ್ಕಿದೆ. ಇದು ನನಗೆ ಬಹಳ ಸಂತೋಷ ಉಂಟು ಮಾಡಿದೆ. ರಾಷ್ಟ್ರದ ಬೆನ್ನೆಲುಬಾಗಿರುವ ಉಕ್ಕು ಕ್ಷೇತ್ರದ ಕುಟುಂಬದೊಂದಿಗೆ ಯೋಗದ ಅನನ್ಯತೆ, ಅವಿಸ್ಮರಣೆಯ ಕ್ಷಣಗಳನ್ನು ಅನುಭವಿಸುವ ಭಾಗ್ಯ ನನ್ನದಾಯಿತು ಎಂದು ಸಚಿವರು ಹೇಳಿದರು.

ಯೋಗವು ಕೇವಲ ದೈಹಿಕ ವ್ಯಾಯಾಮವಲ್ಲ. ಇದು ಮಾನಸಿಕ ಶಾಂತಿ, ಮಾನಸಿಕ ಸ್ಪಷ್ಟತೆ, ದೈಹಿಕ ಸ್ವಾಸ್ತ್ಯತೆ ಮತ್ತು ಸಾಮೂಹಿಕ ಯೋಗಕ್ಷೇಮಕ್ಕೆ ಪರಿಣಾಮಕಾರಿ ಮಾರ್ಗವಾಗಿದೆ. ಪ್ರಧಾನಿಗಳಾದ ನರೇಂದ್ರ ಮೋದಿ ಅವರ ದೂರದೃಷ್ಟಿಯ ನಾಯಕತ್ವದಲ್ಲಿ ಯೋಗವು ಜಗತ್ತನ್ನೇ ಒಗ್ಗೂಡಿಸಿದೆ. ಜಗತ್ತಿನ ಯೋಗಕ್ಷೇಮಕ್ಕೆ ನಮ್ಮ ಪಾರಂಪರಿಕ ಯೋಗವು ಮಹೋನ್ನತ ಕೊಡುಗೆ ನೀಡುತ್ತಿದೆ ಎಂದು ಸಚಿವ ಕುಮಾರಸ್ವಾಮಿ ಅವರು ಹೇಳಿದರು.

ಭಾರತೀಯ ಉಕ್ಕು ಪ್ರಾಧಿಕಾರದ (ಸೈಲ್‌) ಅಧ್ಯಕ್ಷ ಅಮರೇಂದು ಪ್ರಕಾಶ್‌, ಉಕ್ಕು ಸಚಿವ ಸಚಿವಾಲಯದ ಜಂಟಿ ಕಾರ್ಯದರ್ಶಿ ಅಭಿಜಿತ್‌ ನರೇಂದ್ರ ಸೇರಿದಂತೆ ಸೇಲಂ ಉಕ್ಕು ಸ್ಥಾವರದ ಹಿರಿಯ ಅಧಿಕಾರಗಳು ಕೂಡ ಯೋಗಾಭ್ಯಾಸದಲ್ಲಿ ಭಾಗಿ ಆಗಿದ್ದರು.

HD Kumaraswamy: ಉಕ್ಕು ಕಾರ್ಖಾನೆಯಲ್ಲಿ ಯೋಗದಿನ ಆಚರಿಸಿದ ಕೇಂದ್ರ ಸಚಿವ HDK..!
Tags: congressDKShivakumarGuinnessRecordHD Kumaraswamyinternationalyogaday2025ModiMysuruPalaceyogaPmrahulgandhisiddaramaiahSuryaNamaskars
Previous Post

ನನ್ನ ಮನಸ್ಸು & ದೇಹ ಎರಡಕ್ಕೂ ಯೋಗ ಸಹಾಯ ಮಾಡಿದೆ – ಯೋಗದ ಮಹತ್ವ ಸಾರಿದ ಹೆಚ್.ಡಿ ದೇವೇಗೌಡರು 

Next Post

ಮಚ್ಚಿನಿಂದ ಹಸುವಿನ ಕೆಚ್ಚಲು ಕೊಚ್ಚಿ ವಿಕೃತಿ – ಬೆಂಗಳೂರಲ್ಲಿ ಮತ್ತೊಂದು ಹೀನ ಕೃತ್ಯ.. ಹಸು ಸಾವು !

Related Posts

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ
Top Story

BREAKING NEWS : ಶಾಲಾ, ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿ : ಸಚಿವ ಮಧು ಬಂಗಾರಪ್ಪ ಘೋಷಣೆ

by ಪ್ರತಿಧ್ವನಿ
May 13, 2026
0

ಬೆಂಗಳೂರು : ರಾಜ್ಯದ ಶಾಲಾ - ಕಾಲೇಜುಗಳಲ್ಲಿ ಧಾರ್ಮಿಕ ವಸ್ತ್ರ ಸಂಹಿತೆ ಜಾರಿಗೆ ತರುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿ, ರಾಜ್ಯಾದ್ಯಂತ ಎಲ್ಲ...

Read moreDetails
ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ : ಮೋದಿ ಸರ್ಕಾರದ ನಡೆಯನ್ನು ಸಮರ್ಥಿಸಿಕೊಂಡ “ಕೈ” ಸಚಿವ

May 13, 2026
ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

ದೀದಿ ವಿರುದ್ಧ ಗೆದ್ದಿರುವ ದಾದಾ ದಿಢೀರ್ ರಾಜೀನಾಮೆ : ಕಾರಣ ಏನಿರಬಹುದು..?

May 13, 2026
“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

“ತಂತ್ರಜ್ಞಾನ ನಾವೀನ್ಯತೆಗಳು ಬೆಂಗಳೂರಿಗೆ ಮಾತ್ರ ಸೀಮಿತವಾಗದೆ, ಕಲ್ಯಾಣ ಕರ್ನಾಟಕಕ್ಕೂ ವ್ಯಾಪಿಸಲಿ”

May 13, 2026
ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

ಬೆಂಗಳೂರಿಗರಿಗೆ ಡಿಕೆ ಶಿವಕುಮಾರ್‌‌ ಕೊಟ್ಟ ಗುಡ್‌ ನ್ಯೂಸ್ ಏನು..?

May 13, 2026
Next Post
ಮಚ್ಚಿನಿಂದ ಹಸುವಿನ ಕೆಚ್ಚಲು ಕೊಚ್ಚಿ ವಿಕೃತಿ – ಬೆಂಗಳೂರಲ್ಲಿ ಮತ್ತೊಂದು ಹೀನ ಕೃತ್ಯ.. ಹಸು ಸಾವು !

ಮಚ್ಚಿನಿಂದ ಹಸುವಿನ ಕೆಚ್ಚಲು ಕೊಚ್ಚಿ ವಿಕೃತಿ - ಬೆಂಗಳೂರಲ್ಲಿ ಮತ್ತೊಂದು ಹೀನ ಕೃತ್ಯ.. ಹಸು ಸಾವು !

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada