• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!

ಪ್ರತಿಧ್ವನಿ by ಪ್ರತಿಧ್ವನಿ
April 16, 2026
in ರಾಜಕೀಯ
0
ಮದ್ಯ ತೆರಿಗೆ, ಶಿಕ್ಷಣ ಮತ್ತು ಸರ್ಕಾರದ ನೀತಿಗಳ ವಿರುದ್ಧ ಎಚ್. ವಿಶ್ವನಾಥ್ ವಾಗ್ದಾಳಿ- ಸಿಎಂ ಬಿಯರ್ ಗುಟ್ಟು-ರಟ್ಟು!
Share on WhatsAppShare on FacebookShare on Telegram

ಬೆಂಗಳೂರು:

ADVERTISEMENT

ರಾಜ್ಯ ಸರ್ಕಾರದ ಮದ್ಯ ತೆರಿಗೆ ನೀತಿ, ಶಿಕ್ಷಣ ವ್ಯವಸ್ಥೆ ಹಾಗೂ ಆರ್ಥಿಕ ಸ್ಥಿತಿಗತಿಗಳ ಕುರಿತು ಬಿಜೆಪಿ ಎಂಎಲ್‌ಸಿ ಎಚ್ ವಿಶ್ವನಾಥ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮದ್ಯದ ಮೇಲಿನ ತೆರಿಗೆ ಹೆಚ್ಚಳವನ್ನು ಟೀಕಿಸಿ, “ಹಿಂದೆ ನಾವು 2 ರೂಪಾಯಿ ಸೇರಿಸಿ ಬಿಯರ್ ಕುಡಿಯುತ್ತಿದ್ದೆವು, ಈಗ ಅದೇ ಬಿಯರ್‌ಗೆ ₹250 ಕೊಡುವ ಪರಿಸ್ಥಿತಿ ಬಂದಿದೆ” ಎಂದು ಹೇಳಿದರು.

PM Arrives at Adichunchanagiri Math : ಬಾಲಗಂಗಾಧರನಾಥ ಸ್ವಾಮೀಜಿ ಪ್ರತಿಮೆಗೆ ಪೂಜೆ ಸಲ್ಲಿಸಿದ ಮೋದಿ..!

ಯುವಕರಲ್ಲಿ ಬಿಯರ್ ಕುಡಿಯುವ ಪ್ರವೃತ್ತಿ ಹೆಚ್ಚುತ್ತಿರುವುದನ್ನು ಉಲ್ಲೇಖಿಸಿದ ಅವರು, ಹೆಚ್ಚಿನ ಬೆಲೆ ಕಾರಣದಿಂದ ಕೆಲವರು ಕಡಿಮೆ ದರದಲ್ಲಿ ಗಾಂಜಾ ಕಡೆ ತಿರುಗುತ್ತಿರುವುದು ಆತಂಕಕಾರಿ ಬೆಳವಣಿಗೆ ಎಂದು ಅಭಿಪ್ರಾಯಪಟ್ಟರು. ಅಲ್ಲದೆ, ಗೂಡಂಗಡಿಗಳಲ್ಲಿ ಮದ್ದಿನ ಮಾರಾಟ ನಡೆಯುತ್ತಿದೆ ಎಂಬ ಆರೋಪವನ್ನೂ ಮಾಡಿದರು.

ಗ್ಯಾರಂಟಿ ಯೋಜನೆಗಳ ಮೇಲೆ ಸರ್ಕಾರ ಹೆಚ್ಚು ವೆಚ್ಚ ಮಾಡುತ್ತಿದೆ ಎಂದು ಆರೋಪಿಸಿದ ಅವರು, “ಈ ಯೋಜನೆಗಳಿಗೆ ಖರ್ಚಾಗುತ್ತಿರುವ ಲಕ್ಷ ಕೋಟಿ ರೂಪಾಯಿಗಳನ್ನು ಕೃಷ್ಣಾ ಮೇಲ್ದಂಡೆ ಯೋಜನೆಗೆ ಬಳಸಿದ್ದರೆ ಅನೇಕ ಜನರಿಗೆ ಉದ್ಯೋಗ ಸೃಷ್ಟಿಯಾಗುತ್ತಿತ್ತು” ಎಂದು ಹೇಳಿದರು.

Bihar CM Samrat Choudhary Oath Ceremony : ಬಿಹಾರ ಸಿಎಂ ಆಗಿ ಸಾಮ್ರಾಟ್ ಚೌಧರಿ ಪ್ರಮಾಣ - ಹೊಸ ದಾಖಲೆ.!

ರಾಜ್ಯದ ಶಿಕ್ಷಣ ಸ್ಥಿತಿಗತಿಗಳ ಬಗ್ಗೆ ಮಾತನಾಡಿದ ವಿಶ್ವನಾಥ್, “ಈಗ ಶಿಕ್ಷಕರಿಗಿಂತ ವಿದ್ಯಾರ್ಥಿಗಳೇ ಹೆಚ್ಚು ಜಾಣರಾಗಿದ್ದಾರೆ. ಆದರೆ ಸರ್ಕಾರ ಮಕ್ಕಳನ್ನೇ ದಡ್ಡರನ್ನಾಗಿ ಮಾಡುತ್ತಿದೆ” ಎಂದು ಆರೋಪಿಸಿದರು. ಶಿಕ್ಷಣ ಸಚಿವರ ಮೇಲೂ ಟೀಕಿಸಿ, ಸರ್ಕಾರದ ಶಿಕ್ಷಣ ನೀತಿಯಲ್ಲಿ ದೋಷಗಳಿವೆ ಎಂದು ಹೇಳಿದರು.ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧವೂ ಅವರು ವಾಗ್ದಾಳಿ ನಡೆಸಿ, “ಎನ್‌ಇಪಿ ಬಗ್ಗೆ ಸಿಎಂಗೆ ಸ್ಪಷ್ಟ ಅರಿವು ಇಲ್ಲ. ಯಾರೋ ಬರೆದು ಕೊಟ್ಟದ್ದನ್ನು ಓದುತ್ತಾರೆ” ಎಂದು ಟೀಕಿಸಿದರು.

Narendra Modi visit Adichunchanagiri : ಆದಿ ಚುಂಚನಗಿರಿಯಲ್ಲಿ ಜೋರಾಯ್ತು ನಮೋ ಹವಾ..! #pratidhvani

ರಾಜ್ಯದ ಸಾಲದ ಪ್ರಮಾಣ ಹೆಚ್ಚುತ್ತಿರುವುದರ ಬಗ್ಗೆ ಚಿಂತನೆ ವ್ಯಕ್ತಪಡಿಸಿದ ಅವರು, “ರಾಜ್ಯದ ಒಟ್ಟು ಸಾಲ ₹9 ಲಕ್ಷ ಕೋಟಿಗೆ ತಲುಪಿದ್ದು, ಅದರಲ್ಲೂ ಬಹುಪಾಲು ಸಾಲ ಇತ್ತೀಚಿನ ಆಡಳಿತದಲ್ಲೇ ತೆಗೆದುಕೊಳ್ಳಲಾಗಿದೆ” ಎಂದು ಆರೋಪಿಸಿದರು. ಸರ್ಕಾರದ ನೀತಿಗಳು ಜನಸಾಮಾನ್ಯರಿಗೆ ಹಾನಿಕಾರಿಯಾಗಿವೆ ಎಂದು ಹೇಳಿದ ಎಚ್. ವಿಶ್ವನಾಥ್, ಆಡಳಿತ ಕ್ರಮಗಳಲ್ಲಿ ಬದಲಾವಣೆ ಅಗತ್ಯವಿದೆ ಎಂದು ಒತ್ತಾಯಿಸಿದರು.

 

Tags: bjp karnatakaEducation Systemguarantee schemesH VishwanathKarnataka PoliticsLiquor TaxpratidavanisiddaramaiahState Economy
Previous Post

ಎಸ್‌ಎಸ್‌ಎಲ್‌ಸಿ ಪರೀಕ್ಷೆ: ತೃತೀಯ ಭಾಷೆಗೆ ಅಂಕಗಳ ಬಗ್ಗೆ ಹೈಕೋರ್ಟ್ ನಿರ್ದೇಶನ ಇಲ್ಲಿದೆ

Next Post

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

Related Posts

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ
ರಾಜಕೀಯ

ಇಂದು ಸಂಸತ್ತಿನಲ್ಲಿ ಐತಿಹಾಸಿಕ ತಿದ್ದುಪಡಿ ವಿಧೇಯಕ ಮಂಡನೆ

by ಪ್ರತಿಧ್ವನಿ
April 16, 2026
0

ನವದೆಹಲಿ: ದೇಶದ ರಾಜಕೀಯ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ ತರಬಹುದಾದ ಎರಡು ಸಾಂವಿಧಾನಿಕ ತಿದ್ದುಪಡಿ ವಿಧೇಯಕಗಳನ್ನು ಕೇಂದ್ರ ಸರ್ಕಾರ ಇಂದು ಸಂಸತ್ತಿನಲ್ಲಿ ಮಂಡಿಸಿದೆ. ಈ ವಿಧೇಯಕಗಳು ಅಂಗೀಕಾರಗೊಂಡರೆ ಲೋಕಸಭೆಯ...

Read moreDetails
ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಅಂತಿಮ ತೀರ್ಪು: ಶಾಸಕ ವಿನಯ್ ಕುಲಕರ್ಣಿ ದೋಷಿ-ನಿರ್ದೋಷಿ ?

April 15, 2026
ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

ಸಿದ್ದರಾಮಯ್ಯ ಲವ್ ಸ್ಟೋರಿ ಮರುಚರ್ಚೆ: ‘ಭಾಗ್ಯ’ ಯೋಜನೆಗಳ ಅರ್ಥ ಏನು? ಸಿಎಂ ಸ್ಪಷ್ಟನೆ

April 14, 2026
ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

ಸಂಪೂರ್ಣವಾಗಿ ಸಮಾನತೆಯನ್ನು ಸಾಧಿಸಲಾಗಿಲ್ಲ ಎನ್ನುವುದು ನನ್ನ ನೋವಾಗಿದೆ : ಸಿಎಂ ಸಿದ್ದರಾಮಯ್ಯ ಬೇಸರ..!

April 14, 2026
ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

ಬಿಹಾರದಲ್ಲಿ ನಿತೀಶ್‌ ಯುಗಾಂತ್ಯ : ಸಿಎಂ ಸ್ಥಾನಕ್ಕೆ ಹಿರಿಯ ನಾಯಕನ ರಾಜೀನಾಮೆ..

April 14, 2026
Next Post
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada