ವಿಧಾನಸಭಾ ಚುನಾವಣೆಯಲ್ಲಿ(karnataka assembly election 2023) ರಾಜಕೀಯ ನಾಯಕರು ತಾತ್ವಿಕ ಟೀಕೆಗಳನ್ನು ಮಾಡಿ, ತೀರಾ ವೈಯುಕ್ತಿಕ ಟೀಕೆಗಳನ್ನು ಮಾಡಬೇಡಿ ಅಂತ ಎಂಎಲ್ಸಿ ಹೆಚ್.ವಿಶ್ವನಾಥ್ ಮೈಸೂರಿನ ಪತ್ರಕರ್ತರ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ(npress meet) ಹೇಳಿಕೆ ನೀಡಿದ್ರು. ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಾಜಕೀಯ ನಾಯಕರು ಸಕಾರಾತ್ಮಕ, ತಾತ್ವಿಕ ಟೀಕೆಗಳನ್ನು ಮಾಡಬೇಕು.ತೀರಾ ವೈಯುಕ್ತಿಕ ಮಟ್ಟಕ್ಕೆ ಹೋಗಿ ಟೀಕೆಗಳನ್ನು ಮಾಡಬೇಡಿ ಅಂತ ರಾಜಕೀಯ ನಾಯಕರಿಗೆ ಹೆಚ್.ವಿಶ್ವನಾಥ್(H vishwanath) ಕಿವಿಮಾತು ಹೇಳಿದ್ರು. ʻರಾಜ್ಯದ ಹಲವೆಡೆ ತ್ರಿಕೋನ ಸ್ಪರ್ಧೆ ಮತ್ತೆ ಕೆಲವೆಡೆ ನೇರ ಸ್ಪರ್ಧೆ ಏರ್ಪಡುವ ಲಕ್ಷಣಗಳು ಕಂಡು ಬಂದಿವೆ.ಈ ಬಗ್ಗೆ ಮುಂದಿನ ದಿನಗಳಲ್ಲಿ ಸ್ಪಷ್ಟ ಚಿತ್ರಣ ಗೊತ್ತಾಗಲಿದೆ. ಆಡಳಿತಾರೂಢ ಬಿಜೆಪಿ(BJP) ಯಾವ ವಿಚಾರ ಮುಂದಿಟ್ಟುಕೊಂಡು ಚುನಾವಣೆ(election) ಎದುರಿಸುತ್ತಿದೆ ಎಂಬುದನ್ನು ತಿಳಿಸಿಲ್ಲ. ಅನ್ನ, ಅಕ್ಷರ, ಆರೋಗ್ಯದ ಬಗ್ಗೆ ಬಿಜೆಪಿ ನಿಲುವು ಏನು ಎಂಬುದನ್ನು ಸ್ಪಷ್ಟಪಡಿಸುತ್ತಿಲ್ಲ. ಅಭಿವೃದ್ಧಿ ವಿಚಾರಗಳನ್ನು ಪ್ರಸ್ತಾಪಿಸುತ್ತಿಲ್ಲ. ಈಗಲೂ ಭಾವನಾತ್ಮಕ ವಿಚಾರಗಳನ್ನು ಮುಂದಿಟ್ಟುಕೊಂಡು ಚುನಾವಣೆ ಎದುರಿಸಲು ಬಿಜೆಪಿ ಮುಂದಾಗಿದೆ. ಬಿಜೆಪಿ ಧರ್ಮಾಧಾರಿತ ರಾಜಕಾರಣ(politics) ಮಾಡುತ್ತಿದೆ ಅಂತ ಎಂಎಲ್ಸಿ ಹೆಚ್. ವಿಶ್ವನಾಥ್ ಮೈಸೂರಿನಲ್ಲಿ(mysore) ಹೇಳಿಕೆ ನೀಡಿದ್ರು.

ʻದಕ್ಷಿಣ ಭಾರತದ ಮೇಲೆ ಉತ್ತರ ಭಾರತದವರ ಯಜಮಾನಿಕೆ ಜಾಸ್ತಿಯಾಗುತ್ತಿದೆ. ಕರ್ನಾಟಕದ ಮೇಲೆ ಕೇಂದ್ರದ ಯಜಮಾನಿಕೆ ಹೆಚ್ಚಾಗುತ್ತಿದೆ. ಪ್ರತಿಯೊಂದು ವಿಚಾರಕ್ಕೂ ಜಿಎಸ್‌ಟಿ(GST) ಪಾವತಿ ಮಾಡಬೇಕಾಗಿದೆ. ಅಗತ್ಯ ವಸ್ತುಗಳ ಬೆಲೆ ಏರುತ್ತಿದ್ದು ಹೆಣ್ಣು ಮಕ್ಕಳು ಶಾಪ ಹಾಕುತ್ತಿದ್ದಾರೆ. ರಾಜ್ಯದ ಜಿಎಸ್‌ಟಿ ಪಾಲು ಸರಿಯಾಗಿ ಸಿಗುತ್ತಿಲ್ಲ. ನಮ್ಮ ರಾಜ್ಯದ ಜಿಎಸ್‌ಟಿ ಪಾಲು ಉತ್ತರದ ರಾಜ್ಯಗಳತ್ತ ಹರಿದು ಹೋಗುತ್ತಿದೆ. ನಮ್ಮ ಹೆಮ್ಮೆಯ ಅಸ್ಮಿತೆ ನಂದಿನಿಯ ಮೇಲೂ ಕಣ್ಣು ಬಿದ್ಧಿದೆ. ಉತ್ತರದವರ ಯಜಮಾನಿಕೆಯಿಂದ ನಾವು ತತ್ತರಿಸುವಂತಾಗಿದೆʼ ಅಂತ ಎಂಎಲ್ಸಿ ಹೆಚ್.ವಿಶ್ವನಾಥ್ ವಿಷಾದ ವ್ಯಕ್ತಪಡಿಸಿದ್ರು. ʻಪದೇ ಪದೇ ಕರ್ನಾಟಕಕ್ಕೆ ಬರುತ್ತಿರುವ ಪ್ರಧಾನಿ ನರೇಂದ್ರ ಮೋದಿ(narendra modi) ನಮ್ಮ ರಾಜ್ಯಕ್ಕೆ ನೀಡಿರುವ ಕೊಡುಗೆಯಾದ್ರೂ ಏನು? ಲಜ್ಜೆಗೆಟ್ಟಿರುವ ಕರ್ನಾಟಕದ ಭ್ರಷ್ಟ ಬಿಜೆಪಿಯನ್ನು ಮೊದಲು ಸರಿಪಡಿಸಲಿ. ಬೇರೆ ಬ್ಯಾಂಕುಗಳ ಜೊತೆ ವಿಲೀನಗೊಳಿಸಿರುವ ನಮ್ಮ ಬ್ಯಾಂಕುಗಳನ್ನು ವಾಪಸ್ ಕೊಡಿ. ಹಿಂದಿ ಹೇರಿಕೆಯನ್ನು ನಿಲ್ಲಿಸಿ. ನಂದಿನಿಯ ಅಸ್ತಿತ್ವಕ್ಕೆ ಧಕ್ಕೆ ತರಬೇಡಿ. ಯಾವುದೇ ಕಾರಣಕ್ಕೂ ಬಿಜೆಪಿ ರಾಜ್ಯದಲ್ಲಿ ಅಧಿಕಾರಕ್ಕೆ ಬರುವುದಿಲ್ಲ. ಮೋದಿ ಭೇಟಿಯಿಂದ ಯಾವುದೇ ಪರಿಣಾಮ ಬೀರುವುದಿಲ್ಲ. ನಮ್ಮಂತಹವರು, ಕುಮಾರಸ್ವಾಮಿ(HD kumaraswamy) ಅಂತಹವರ ನೆರವಿನಿಂದ ಬಿಜೆಪಿ ಅಧಿಕಾರಕ್ಕೆ ಬಂತು. ಇನ್ನೆಂದಿಗೂ ಕರ್ನಾಟಕ ಮಾತ್ರವಲ್ಲದೆ ಇಡೀ ದಕ್ಷಿಣ ಭಾರತದಲ್ಲೇ ಬಿಜೆಪಿ ಅಧಿಕಾರಕ್ಕೆ ಬರುವುದಿಲ್ಲ ಅಂತ ಬಿಜೆಪಿ ವಿರುದ್ಧ ಎಂಎಲ್ಸಿ ಹೆಚ್.ವಿಶ್ವನಾಥ್(H vishwanath) ಆಕ್ರೋಶ ವ್ಯಕ್ತಪಡಿಸಿದ್ರು.

ʻಪ್ರತಾಪ್ ಸಿಂಹ(pratap simha) ನಿನ್ನ ದರ್ಪ ತೋರಿಸಬೇಡ. ಮಾಧ್ಯಮದ ಮುಂದೆ ನಿನ್ನ ವರಸೆ ಸಲ್ಲದು. ನೀನೇನು ಬೆತ್ತಲೆ ಜಗತ್ತು ಬರೆಯೋದು. ನಿನ್ನನ್ನು ನಾನೇ ಬೆತ್ತಲೆ ಮಾಡುತ್ತೇನೆ. ನಿನ್ನ ಕರ್ಮಕಾಂಡ ನನ್ನ ಬಳಿಯಿದೆ. ಸುದ್ದಿಗೋಷ್ಠಿಯಲ್ಲಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಂಎಲ್ಸಿ ಹೆಚ್. ವಿಶ್ವನಾಥ್ ಕಿಡಿಕಾರಿದ್ರು. ಸೋಮಣ್ಣ, ಸಿದ್ದರಾಮಯ್ಯ(siddarmaiah) ನೆಲದಿಂದ ಮೇಲೆದ್ದು ಬಂದವರು. ಪಾಪ ಸೋಮಣ್ಣ ತಳ ಮಟ್ಟದಿಂದ ಬಂದವರು. ಸಮಾಜದ ಕಷ್ಟ ಸುಖ ಅರಿತು ಬಂದವರು. ಸುಳ್ಳು ಹೇಳಿ ಸೈಟ್ ತೆಗೆದುಕೊಂಡವ ನೀನು. ಅಂತ ಹೆಚ್.ವಿಶ್ವನಾಥ್ ಪ್ರತಾಪ್ ಸಿಂಹ(pratap simha) ವಿರುದ್ಧ ಗುಡುಗಿದರು.














