• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ದೇಶ

ಕೇಂದ್ರ ಸಚಿವರು ರೈತರಿಗೆ ಬೆದರಿಕೆ ಹಾಕದಿದ್ದರೆ ಲಖಿಂಪುರಿ ಹಿಂಸಾಚಾರ ನಡೆಯುತ್ತಿರಲಿಲ್ಲ: ಅಲಹಾಬಾದ್‌ ಹೈಕೋರ್ಟ್

Any Mind by Any Mind
May 9, 2022
in ದೇಶ
0
ಕೇಂದ್ರ ಸಚಿವರು ರೈತರಿಗೆ ಬೆದರಿಕೆ ಹಾಕದಿದ್ದರೆ ಲಖಿಂಪುರಿ ಹಿಂಸಾಚಾರ ನಡೆಯುತ್ತಿರಲಿಲ್ಲ: ಅಲಹಾಬಾದ್‌ ಹೈಕೋರ್ಟ್
Share on WhatsAppShare on FacebookShare on Telegram

ಅಲಹಾಬಾದ್: ಲಖಿಂಪುರ ಹಿಂಸಾಚಾರ ಪ್ರಕರಣದಲ್ಲಿ ಆಶಿಶ್ ಮಿಶ್ರಾ ಜೊತೆ ನಾಲ್ವರು ಆರೋಪಿಗಳ ಜಾಮೀನು ಅರ್ಜಿಯನ್ನು ಅಲಹಾಬಾದ್ ಹೈಕೋರ್ಟ್ ತಿರಸ್ಕರಿಸಿದೆ. ಸೋಮವಾರ ಲಕ್ನೋ ಪೀಠದಲ್ಲಿ ಜಾಮೀನು ಅರ್ಜಿಯ ವಿಚಾರಣೆ ನಡೆದಿದ್ದು, ರಾಜ್ಯ ಸರ್ಕಾರದ ಪರವಾಗಿ ಹೆಚ್ಚುವರಿ ಅಡ್ವೊಕೇಟ್ ಜನರಲ್ ವಿನೋದ್ ಶಾಹಿ ತಮ್ಮ ತಂಡದೊಂದಿಗೆ ಹಾಜರಾಗಿದ್ದರು. ಪ್ರಮುಖ ಆರೋಪಿ ಆಶಿಶ್ ಮಿಶ್ರಾ ಜಾಮೀನು ಅರ್ಜಿಯ ವಿಚಾರಣೆ ಮೇ 25 ರಂದು ನಡೆಯಲಿದೆ.

ADVERTISEMENT

ಕೇಂದ್ರ ಗೃಹ ಖಾತೆಯ ರಾಜ್ಯ ಸಚಿವರು ರೈತರನ್ನು ಲಖಿಂಪುರ ಖೇರಿಯಿಂದ ಓಡಿಸುವುದಾಗಿ ಬೆದರಿಕೆಯೊಡ್ಡುವ ಹೇಳಿಕೆಗಳನ್ನು ನೀಡದಿದ್ದರೆ ಈ ಘಟನೆ (ಹತ್ಯೆ) ನಡೆಯುತ್ತಿರಲಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿರುವುದಾಗಿ livelaw ವರದಿ ಮಾಡಿದೆ.

ಟಿಕುನಿಯಾ ಹಿಂಸಾಚಾರ ಪ್ರಕರಣದ ಆರೋಪಿಗಳಾದ ಅಂಕಿತ್ ದಾಸ್, ಲವ್ಕುಶ್, ಸುಮಿತ್ ಜೈಸ್ವಾಲ್ ಮತ್ತು ಶಿಶುಪಾಲ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿ ಡಿ.ಕೆ.ಸಿಂಗ್ ಈ ನಾಲ್ವರ ಅರ್ಜಿಯನ್ನು ವಜಾಗೊಳಿಸಿದ್ದಾರೆ.

 ಮತ್ತೊಂದೆಡೆ, ಲಖಿಂಪುರ ಖೇರಿಯ ಜಿಲ್ಲಾ ಅಧಿವೇಶನ ಮತ್ತು ನ್ಯಾಯಾಲಯದಲ್ಲಿ, ಟಿಕುನಿಯಾ ಹಿಂಸಾಚಾರ ಪ್ರಕರಣದಲ್ಲಿ ಆರೋಪಿಯಾಗಿರುವ ರೈತರಲ್ಲಿ ಒಬ್ಬರಾದ ವಿಚಿತ್ರಾ ಸಿಂಗ್ ಅವರು ಜಾಮೀನು ಅರ್ಜಿ ಸಲ್ಲಿಸಿದ್ದಾರೆ. ಇದಲ್ಲದೇ ಉಳಿದ ಮೂವರು ಆರೋಪಿಗಳು ಬಿಡುಗಡೆಗೆ ಅರ್ಜಿ ಸಲ್ಲಿಸಲು ಕಾಲಾವಕಾಶ ಕೋರಿದ್ದಾರೆ. ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ರೈತರ ಮೇಲಿನ ಆರೋಪಗಳನ್ನು ಇಂದು ನಿಗದಿ ಮಾಡಬೇಕಿತ್ತು.

ಇದಕ್ಕೂ ಮೊದಲು, ಅಲಹಾಬಾದ್ ಹೈಕೋರ್ಟ್‌ನ ಲಕ್ನೋ ಪೀಠದಿಂದ ಆಶಿಶ್ ಮಿಶ್ರಾಗೆ ಜಾಮೀನು ನೀಡಿದ ನಂತರ, ಪ್ರಕರಣವು ಸುಪ್ರೀಂ ಕೋರ್ಟ್‌ಗೆ ತಲುಪಿತ್ತು. ಹೈಕೋರ್ಟ್ ತೀರ್ಪಿಗೆ ಅಸಮಾಧಾನ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್ ಅವರ ಜಾಮೀನು ರದ್ದುಗೊಳಿಸಿದ್ದು, ಏಪ್ರಿಲ್ 25ರೊಳಗೆ ಶರಣಾಗುವಂತೆ ಆದೇಶಿಸಿತ್ತು. ಏಪ್ರಿಲ್ 24 ರಂದು ಆಶಿಶ್ ಮಿಶ್ರಾ ನ್ಯಾಯಾಲಯದ ಎದುರು ಶರಣಾಗಿದ್ದು, ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾರೆ.

ಕಳೆದ ವರ್ಷ ಅಕ್ಟೋಬರ್ 3 ರಂದು ಲಖಿಂಪುರ ಖೇರಿಯ ಟಿಕುನಿಯಾ ಪಟ್ಟಣದಲ್ಲಿ ನಡೆದ ಹಿಂಸಾಚಾರದಲ್ಲಿ ನಾಲ್ವರು ರೈತರು ಮತ್ತು ಪತ್ರಕರ್ತ ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದರು.  ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಟೆನಿ ಅವರ ಪುತ್ರ ಆಶಿಶ್ ಮಿಶ್ರಾ ಈ ಪ್ರಕರಣದ ಪ್ರಮುಖ ಆರೋಪಿಯಾಗಿದ್ದು, ಕೇಂದ್ರದ ಕೃಷಿ ಕಾನೂನನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಕೇಂದ್ರ ಸಚಿವರ ಪುತ್ರ ಕಾರು ಹತ್ತಿಸಿ ಹತ್ಯೆಗೈದಿದ್ದಾರೆ ಎಂದು ಪ್ರತ್ಯಕ್ಷದರ್ಶಿಗಳು ಆರೋಪಿಸಿದ್ದರು.

Previous Post

ತ್ರಿಶೂರ್‌ ಪೂರಂ ಛತ್ರಿಯಲ್ಲಿ ʼಸಾವರ್ಕರ್ʼ ಚಿತ್ರ : ಕೋಮುವಾದ ಮಾಡಬೇಡಿ ಎಂದು ಆಗ್ರಹಿಸಿದ ಕೇರಳಿಗರು!

Next Post

ಕೆಕೆಆರ್ ಗೆ ರೋಚಕ 52 ರನ್ ಜಯ. ಮುಂಬೈಗೆ 9ನೇ ಸೋಲು

Related Posts

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ  : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ
Top Story

ಹೊಸ ಪಕ್ಷವೊಂದು MGR ರೀತಿ ಆಗೋಕೆ ಹೊರಟಿದೆ, ಅದೆಲ್ಲ ಸಿನಿಮಾದಲ್ಲಿ ಕೈ ಬೀಸಲಷ್ಟೇ ಇಲ್ಲಿ ನಡೆಯಲ್ಲ : ಥಳಪತಿ ವಿಜಯ್‌ ವಿರುದ್ಧ ಡಿಕೆ ಶಿವಕುಮಾರ್‌ ವಾಗ್ದಾಳಿ

by ಪ್ರತಿಧ್ವನಿ
April 20, 2026
0

ಕೃಷ್ಣಗಿರಿ ತಮಿಳುನಾಡು : ನಾವೆಲ್ಲರೂ ಪರಸ್ಪರ ಅಣ್ಣ-ತಮ್ಮಂದಿರು. ಊರುಗಳಾಗಿ ಭಾಗವಾಗಿದ್ದೇವೆ ಅಷ್ಟೇ. ನಾವೆಲ್ಲರೂ ಇಂದು ದಕ್ಷಿಣ ಭಾರತದ ಸ್ವಾಭಿಮಾನ ಉಳಿಸಲು ಒಟ್ಟಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಕರ್ನಾಟಕದ...

Read moreDetails
ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

ಹ್ಯಾಕರ್‌ ಶ್ರೀಕಿ ನಂಟು, ನಲಪ್ಪಾಡ್‌ ಬುಡಕ್ಕೆ ಬಿಟ್‌ ಕಾಯಿನ್‌ ಬೆಂಕಿ : ಇಡಿ ರೇಡ್‌ಗೆ ಸಿಎಂ ಏನಂದ್ರು..?

April 20, 2026
ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

ಪ್ರಧಾನಿ ಕಿವಿಯಲ್ಲಿ ಏನು ಹೇಳಿದೆ ಅಂದ್ರೆ.. : ಮೋದಿ ಜೊತೆಗಿನ ಮಾತುಕತೆ ಗುಟ್ಟು ಬಿಚ್ಚಿಟ್ಟ ಸಿಎಂ..

April 20, 2026
ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

ಬಹಳ ದೂರದೃಷ್ಟಿಯುಳ್ಳ, ನಿಷ್ಠಾವಂತ ಡಾ.ಚೆಲ್ಲ ಕುಮಾರ್‌ ಬೆಂಬಲಿಸಿ : ತಮಿಳಿಗರಿಗೆ ಮೋಹನ್‌ ಕೊಂಡಜ್ಜಿ ಕರೆ

April 20, 2026
BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

BREAKING NEWS : ಕೈ ಶಾಸಕನಿಗೆ ಇ.ಡಿ. ಶಾಕ್‌ : ಹ್ಯಾರಿಸ್‌ ಮನೆ ಮೇಲೆ ದಿಢೀರ್ ದಾಳಿ, ದಾಖಲೆಗಳ ಶೋಧ..!

April 20, 2026
Next Post
ಕೆಕೆಆರ್ ಗೆ ರೋಚಕ 52 ರನ್ ಜಯ. ಮುಂಬೈಗೆ 9ನೇ ಸೋಲು

ಕೆಕೆಆರ್ ಗೆ ರೋಚಕ 52 ರನ್ ಜಯ. ಮುಂಬೈಗೆ 9ನೇ ಸೋಲು

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!