• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಚರ್ಚೆ!

Any Mind by Any Mind
October 4, 2023
in ಕರ್ನಾಟಕ, ರಾಜಕೀಯ
0
ಹಂಪಿ ವಿಶ್ವಪರಂಪರೆ ಪ್ರದೇಶದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಸಿಎಂ ಸಿದ್ದರಾಮಯ್ಯ ಚರ್ಚೆ!
Share on WhatsAppShare on FacebookShare on Telegram

ADVERTISEMENT

ವಿಶ್ವಪಾರಂಪರಿಕ ತಾಣವಾದ
ಹಂಪಿಯ ಸುತ್ತಲಿನ ಗ್ರಾಮಗಳ ಕುರಿತು ನ್ಯಾಯಾಲಯ ಆದೇಶ ನೀಡಿರುವಂತೆ ಹೋಮ್ ಸ್ಟೇಗಳನ್ನು ತಕ್ಷಣಕ್ಕೆ ನಿಲ್ಲಿಸಬೇಕು. ನ್ಯಾಯಾಲಯದ ತೀರ್ಪಿನ ಆಧಾರದ ಮೇಲೆ ಮುಂದಿನ ಕ್ರಮಕ್ಕೆ ತೀರ್ಮಾನ ತೆಗೆದುಕೊಳ್ಳುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಹಂಪಿ ವಿಶ್ವಪರಂಪರೆ ಪ್ರದೇಶ ನಿರ್ವಹಣಾ ಪ್ರಾಧಿಕಾರದ ವ್ಯಾಪ್ತಿಯ ಗ್ರಾಮಗಳ ಸಮಸ್ಯೆಗಳ ಕುರಿತಂತೆ ಚರ್ಚಿಸಲು ಮಾಜಿ ಸಂಸದ ವಿ.ಎಸ್.ಉಗ್ರಪ್ಪ ಅವರ ನೇತೃತ್ವದ ನಿಯೋಗವು ಇಂದು ಅವರನ್ನು ಭೇಟಿಯಾಗಿ ಚರ್ಚಿಸಿದ ಸಂದರ್ಭದಲ್ಲಿ ಅವರು ಮಾತನಾಡಿದರು.

ವಿಶ್ವಪಾರಂಪರಿಕ ತಾಣವಾದ ಹಂಪಿಯಲ್ಲಿ ಮಾದಕವಸ್ತುಗಳ ಬಳಕೆ, ವೇಶ್ಯಾವಾಟಿಕೆಗಳಂಥ ಕಾನೂನು ಬಾಹಿರ ಚಟುವಟಿಕೆಗಳನ್ನು ಗುರುತಿಸುವಂತೆ ನ್ಯಾಯಾಲಯ ಸೂಚಿಸಿದ್ದು, ಇದನ್ನು ಗುರುತಿಸಿ ನಿಲ್ಲಿಸುವ ಕೆಲಸವಾಗಬೇಕು ಮತ್ತು ಗ್ರಾಮಸ್ಥರಿಗೆ ವಿದ್ಯುತ್ ಮುಂತಾದ ಮೂಲಭೂತ ಸೌಕರ್ಯಗಳನ್ನು ಸ್ಥಗಿತಗೊಳಿಸಬಾರದು ಎಂದು ಅವರು ಪ್ರಾಧಿಕಾರದ ಅಧಿಕಾರಿಗಳಿಗೆ ತಿಳಿಸಿದರು.

ಹಂಪಿ ಪ್ರದೇಶದ 29 ಗ್ರಾಮಗಳಲ್ಲಿ 10 ಸಾವಿರ ಜನರಿದ್ದಾರೆ. 2009 ರಲ್ಲಿ ನಾಲ್ಕು ಸ್ವಾಮೀಜಿಗಳು ದಾವೆ ಹೂಡಿದ್ದು, ಅನಧಿಕೃತ ಚಟುವಟಿಕೆಗಳನ್ನು ಗುರುತಿಸುವ ಕೆಲಸ ಪ್ರಾಧಿಕಾರದ್ದು ಎಂದು ನ್ಯಾಯಾಲಯ ತೀರ್ಪು ನೀಡಿದೆ.
ಅದರ ಆಧಾರದ ಮೇಲೆ ಸ್ಥಳೀಯರಿಗೆ ಅಂಗಡಿ ಹಾಕಲು ಅವಕಾಶವಿಲ್ಲ. 230 ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಹಂಪಿ ಅಭಿವೃದ್ಧಿಗೆ ಪ್ರಾಚ್ಯವಸ್ತು ಇಲಾಖೆ ಕ್ರಮವಹಿಸಿಲ್ಲ. ಹಂಪಿಗೆ ಬರುವ ಜನರಿಗೆ ಈ ಕ್ರಮದಿಂದ ತೊಂದರೆಯಾಗಿದೆ.
ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಜನರು ತೊಂದರೆ ಅನುಭವಿಸುತ್ತಿದ್ದಾರೆ. ಅವರಿಗೆ ಮೂಲಭೂತ ಸೌಕರ್ಯಗಳನ್ನು
ನೀಡಬೇಕಿದೆ. ಕಾನೂನು ಬಾಹಿರ ಚಟುವಟಿಕೆಗಳು ನಡೆಯದಂತೆ, ಹಾಗೂ ಆರ್ಥಿಕ ಚಟುವಟಿಕೆ ಹಮ್ಮಿಕೊಳ್ಳಲು, ಹೋಮ್ ಸ್ಟೇ ನಡೆಸಲು ಅವಕಾಶ ಕಲ್ಪಿಸಲು ಅವಕಾಶ ನೀಡುವಂತೆ ಮಾಜಿ ಸಂಸದ ಉಗ್ರಪ್ಪ ಮನವಿ ಮಾಡಿದರು.

ದಿನನಿತ್ಯದ ಅವಶ್ಯಕತೆಗಳಿಗೆ 50 ಚಟುವಟಿಕೆಗಳನ್ನು ಗುರುತಿಸಲಾಗಿದೆ. ಹೋಮ್ ಸ್ಟೇ ಗೆ ಇದರಲ್ಲಿ ಅವಕಾಶ ಕಲ್ಪಿಸಿಲ್ಲ.

ಹಿಂದಿನ ಸರ್ಕಾರದ ಅವಧಿಯಲ್ಲಿ ಸರ್ಕಾರಿ ಜಾಗದಲ್ಲಿ ಸ್ಟಾರ್ ಹೋಟೆಲ್ ನಿರ್ಮಿಸಲು ಅನುಮತಿ ನೀಡಲಾಗಿದೆ.‌ ಜೈನರ ಆಶ್ರಮ, ಮಠವಿದೆ, ಖಾಸಗಿಯವರಿಗೆ ಹೋಮ್ ಸ್ಟೇ ನಿರ್ಮಾಣಕ್ಕೆ ಅವಕಾಶ ನೀಡಲಾಗಿದೆ. ಆದರೆ ಬಡವರಿಗೆ ಹೋಟೆಲು, ಹೋಮ್ ಸ್ಟೇ ನಡೆಸಲು ಅವಕಾಶವಿಲ್ಲ ಎಂದು ಉಗ್ರಪ್ಪ ಅವರು ವಿವರಿಸಿದರು.

ಹೋಮ್ ಸ್ಟೇ ವಾಣಿಜ್ಯ ಚಟುವಟಿಕೆ ಯಾಗಿದೆ ಎಂದು ನ್ಯಾಯಾಲಯ ಪರಿಗಣಿಸಿದೆ. ಸದ್ಯ ನ್ಯಾಯಾಲಯ ಸ್ಥಳ ಪರಿಶೀಲನೆ ಮಾಡಲು ಸೂಚಿಸಿದ್ದು,ಈ ಚಟುವಟಿಕೆಗಳಿಂದ ಪಾರಂಪರಿಕ ತಾಣಕ್ಕೆ ಹಾನಿಯಾಗುತ್ತದೆಯೇ ಎಂಬ ಅಂಶಗಳನ್ನು ಪರಿಶೀಲಿಸಲು ತಿಳಿಸಿದೆ ಎಂದು ಪ್ರಾಧಿಕಾರದ ಅಧಿಕಾರಿಗಳು ತಿಳಿಸಿದರು..

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

“ಅನ್ ಲಾಕ್ ರಾಘವ” ಚಿತ್ರ ತಂಡದಿಂದ “ಮೂಡ್ಸ್ ಆಫ್ ರಾಘವ” ಟೀಸರ್ ಬಿಡುಗಡೆ!

Next Post

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ

Related Posts

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ
Top Story

ಎಲ್ಲವೂ ಸರಿ ಇದೆಯೇ ʼSIRʼ? ಕರ್ನಾಟಕದ ಪ್ರಶ್ನೆ

by ನಾ ದಿವಾಕರ
August 29, 2026
0

ಭಾರತೀಯ ಪ್ರಜಾತಂತ್ರ ಎಲ್ಲಿಂದ ಎಲ್ಲಿಗೆ ಬಂದು ತಲುಪಿದೆ ? ವಸಾಹತು ಆಳ್ವಿಕೆಯಲ್ಲಿ , 1947ರ ಹೊಸ್ತಿಲಲ್ಲೂ ಸಹ ಶೇಕಡಾ 13ರಷ್ಟು ಭಾರತೀಯರು ಮಾತ್ರ ಮತದಾನದ ಹಕ್ಕು ಹೊಂದಿದ್ದರು....

Read moreDetails
‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

August 28, 2026
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
Next Post
ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ಮೂವರು ಆರೋಪಿಗಳು ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಹೈಕೋರ್ಟ್‌ ಆದೇಶ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada