• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 14, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಇಂದು ಸಿಂಧಗಿ, ಹಾನಗಲ್ ಉಪಚುನಾವಣೆ ಫಲಿತಾಂಶ : ಕೈ – ದಳ ಕಿತ್ತಾಟದಿಂದ ಬಿಜೆಪಿಗೆ ಆಗುತ್ತಾ ಲಾಭ?

ಕರ್ಣ by ಕರ್ಣ
November 2, 2021
in ಕರ್ನಾಟಕ, ರಾಜಕೀಯ
0
ಇಂದು ಸಿಂಧಗಿ, ಹಾನಗಲ್ ಉಪಚುನಾವಣೆ ಫಲಿತಾಂಶ : ಕೈ – ದಳ ಕಿತ್ತಾಟದಿಂದ ಬಿಜೆಪಿಗೆ ಆಗುತ್ತಾ ಲಾಭ?
Share on WhatsAppShare on FacebookShare on Telegram

ಹಾನಗಲ್ ಮತ್ತು ಸಿಂಧಗಿ ಕ್ಷೇತ್ರದ ಉಪ ಚುನಾವಣೆ ಮುಗಿದು ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ನವೆಂಬರ್ 2ರ ಮಂಗಳವಾರ ಮತ ಎಣಿಕೆ ನಡೆಯಲಿದ್ದು, ಮಧ್ಯಾಹ್ನದ ವೇಳೆಗೆ ಫಲಿತಾಂಶದ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಹಾವೇರಿ ಜಿಲ್ಲೆಯ ಹಾನಗಲ್ ಕ್ಷೇತ್ರದಲ್ಲಿ 13 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಶನಿವಾರ ಹಾವೇರಿ ಜಿಲ್ಲೆಯ ಹಾನಗಲ್‌ ಕ್ಷೇತ್ರದಲ್ಲಿ 83.44ರಷ್ಟು ಮತದಾನವಾಗಿದೆ. ವಿಜಯಪುರ ಜಿಲ್ಲೆಯ ಸಿಂಧಗಿಯಲ್ಲಿ 6 ಅಭ್ಯರ್ಥಿಗಳು ಕಣದಲ್ಲಿದ್ದು, ಶೇ 69.41ರಷ್ಟು ಮತದಾನ ನಡೆದಿದೆ.

ADVERTISEMENT

ಹಾನಗಲ್‌ನಲ್ಲಿ ಶಾಸಕ ಸಿ. ಎಂ. ಉದಾಸಿ ನಿಧನದಿಂದ ಮತ್ತು ಸಿಂಧಗಿಯಲ್ಲಿ ಶಾಸಕ ಎಂ. ಸಿ. ಮುನಗೂಳಿ ನಿಧನದಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆದಿತ್ತು. ಈ ಉಪಚುನಾವಣೆಯ ಫಲಿತಾಂಶ ಮೂರು ಪಕ್ಷಗಳಿಗೆ ಪ್ರತಿಷ್ಠೆಯಾಗಿದೆ. ವೈಯಕ್ತಿಕ ಟೀಕೆಗಳಗೂ ಚುನಾವಣಾ ಪ್ರಚಾರ ಸಾಕ್ಷಿಯಾಗಿತ್ತು. ಎರಡೂ ಕ್ಷೇತ್ರದಲ್ಲಿ ಶಾಂತಿಯುತವಾಗಿ ಮತದಾನ ನಡೆದಿತ್ತು. ಕೋವಿಡ್ ಮಾರ್ಗಸೂಚಿ ಪ್ರಕಾರ ಆಶಾ ಕಾರ್ಯಕರ್ತೆಯರು, ಆರೋಗ್ಯ ಇಲಾಖೆ ಸಿಬ್ಬಂದಿ ಮತದಾರರ ಥರ್ಮಲ್ ಸ್ಕ್ಯಾನಿಂಗ್ ಮಾಡಿ ಮತದಾನಕ್ಕೆ ಅವಕಾಶ ಮಾಡಿಕೊಟ್ಟಿದ್ದರು.

ಉಪ ಚುನಾವಣೆಯಲ್ಲಿ ರಾಜ್ಯದ ಆಡಳಿತ ಪಕ್ಷ ಬಿಜೆಪಿಯ ಅಭ್ಯರ್ಥಿಗಳು ಸೋತರೂ ಸರ್ಕಾರಕ್ಕೆ ಯಾವುದೇ ರೀತಿಯ ಧಕ್ಕೆ ಆಗುವುದಿಲ್ಲ. ಆದರೂ ಬಿಜೆಪಿಗೆ ಉಪ ಚುನಾವಣೆ ಪ್ರತಿಷ್ಠೆಯ ಪ್ರಶ್ನೆಯಾಗಿದೆ. ಜುಲೈ 26ರಂದು ಮುಖ್ಯಮಂತ್ರಿ ಸ್ಥಾನಕ್ಕೆ ಬಿ. ಎಸ್. ಯಡಿಯೂರಪ್ಪ ರಾಜೀನಾಮೆ ನೀಡಿದ ಬಳಿಕ ನಡೆಯುತ್ತಿರುವ ಮೊದಲ ಚುನಾವಣೆ ಇದಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಗೆ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವುದು ಮೊದಲ ಸವಾಲು ಆಗಿದೆ.

ಹಾನಗಲ್ ಕ್ಷೇತ್ರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿನಿಧಿಸುವ ಕ್ಷೇತ್ರದ ಪಕ್ಕದ ಕ್ಷೇತ್ರವಾಗಿದೆ. ಆದ್ದರಿಂದ ಉಪ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಗೆಲ್ಲಿಸಬೇಕು ಎಂದು ಹಾನಗಲ್‌ನಲ್ಲಿಯೇ ಹಲವು ದಿನಗಳ ಕಾಲ ಮುಖ್ಯಮಂತ್ರಿ ಬೊಮ್ಮಾಯಿ ಪ್ರಚಾರ ನಡೆಸಿದ್ದರು. ಉಪ ಚುನಾವಣೆಯಲ್ಲಿ ಸಿಂಧಗಿ ಕ್ಷೇತ್ರದಿಂದ ಕಾಂಗ್ರೆಸ್‌ನಿಂದ ಅಶೋಕ್ ಮನಗೂಳಿ, ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್‌ನಿಂದ ನಾಜಿಯಾ ಶಕೀಲಾ ಅಂಗಡಿ ಕಣದಲ್ಲಿರುವ ಪ್ರಮುಖ ಅಭ್ಯರ್ಥಿಗಳು. ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್‌ನಿಂದ ಶ್ರೀನಿವಾಸ ಮಾನೆ, ಬಿಜೆಪಿಯಿಂದ ಶಿವರಾಜ್ ಸಜ್ಜನರ, ಜೆಡಿಎಸ್‌ ಪಕ್ಷದಿಂದ ನಿಯಾಜ್ ಶೇಕ್ ಪ್ರಮುಖ ಅಭ್ಯರ್ಥಿಗಳು. 2018ರ ಚುನಾವಣೆಯಲ್ಲಿ ಹಾನಗಲ್‌ನಲ್ಲಿ ಬಿಜೆಪಿ, ಸಿಂಧಗಿಯಲ್ಲಿ ಜೆಡಿಎಸ್ ಗೆದ್ದಿತ್ತು.

ಬಿಜೆಪಿ ಮತ್ತು ಜೆಡಿಎಸ್ 2018ರ ಚುನಾವಣೆಯಲ್ಲಿ ಗೆದ್ದಿದ್ದ ಕ್ಷೇತ್ರವನ್ನು ಉಳಿಸಿಕೊಳ್ಳಲು ಹೋರಾಟ ಮಾಡುತ್ತಿವೆ. ಎರಡೂ ಕ್ಷೇತ್ರಗಳಲ್ಲಿ ತ್ರಿಕೋನ ಸ್ಪರ್ಧೆ ಇದೆ ಎನ್ನಲಾಗುತ್ತಿದೆ. ಆದ್ದರಿಂದ ಉಪ ಚುನಾವಣೆ ಫಲಿತಾಂಶ ಕುತೂಹಲಕ್ಕೆ ಕಾರಣವಾಗಿದೆ. ಕೇಂದ್ರ ಸರ್ಕಾರದ ಜನವಿರೋಧಿ ಆಡಳಿತ, ಅಗತ್ಯ ವಸ್ತುಗಳ ಬೆಲೆ ಏರಿಕೆ, ಕರ್ನಾಟಕದ ಸರ್ಕಾರದ ಆಡಳಿತ ಮುಂತಾದವುಗಳನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಉಪ ಚುನಾವಣೆಯಲ್ಲಿ ಪ್ರಚಾರ ನಡೆಸಿದೆ. ಇದೇ ಅಲೆಯಲ್ಲಿ ಗೆಲ್ಲುವ ನಿರೀಕ್ಷೆಯಲ್ಲಿದೆ ಕಾಂಗ್ರೆಸ್. ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಗೆ ಎರಡಲ್ಲಿ ಒಂದು ಕ್ಷೇತ್ರವನ್ನಾದರೂ ಗೆದ್ದು ಕೈ ಹೈಕಮಾಂಡ್ ಗೆ ಸಂದೇಶ ರವಾನೆ ಮಾಡುವ ಅಗತ್ಯವಿದೆ. 

ಸಿಂಧಗಿಯಲ್ಲಿ 2018ರಲ್ಲಿ ಗೆದ್ದಿದ್ದ ಜೆಡಿಎಸ್‌ನ ಎಂ. ಸಿ. ಮನಗೂಳಿ ಪುತ್ರನನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತಂದು ಉಪ ಚುನಾವಣೆಯಲ್ಲಿ ಟಿಕೆಟ್ ನೀಡಲಾಗಿದೆ. ಆದ್ದರಿಂದ ಕ್ಷೇತ್ರದಲ್ಲಿ ಗೆದ್ದೇ ಗೆಲ್ಲುತ್ತೇವೆ ಎಂಬ ನಿರೀಕ್ಷೆಯಲ್ಲಿ ಕಾಂಗ್ರೆಸ್ ನಾಯಕರು ಇದ್ದಾರೆ. ಸಿಂಧಗಿ ಕ್ಷೇತ್ರದಲ್ಲಿ ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಒಂದು ವಾರಕ್ಕೂ ಅಧಿಕ ಕಾಲ ಪ್ರಚಾರ ಮಾಡಿದ್ದು, ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಪಣತೊಟ್ಟಿದ್ದರು. ಮತದಾರರು ತಮ್ಮ ತೀರ್ಪು ನೀಡಿದ್ದಾಗಿದೆ. ಅಭ್ಯರ್ಥಿಗಳ ಭವಿಷ್ಯ ಮತಯಂತ್ರದಲ್ಲಿ ಭದ್ರವಾಗಿದೆ. ಇಂದು ಫಲಿತಾಂಶ ಹೊರ ಬೀಳುತ್ತಿದೆ. 

ನವೆಂಬರ್ 2ರಂದು ಬೆಳಗ್ಗೆ 8 ಗಂಟೆಗೆ ಮತಎಣಿಕೆ ಆರಂಭವಾಗಲಿದೆ. ಮತದಾನಕ್ಕೆ ಇವಿಎಂ ಬಳಕೆ ಮಾಡಿರುವುದರಿಂದ ಮಧ್ಯಾಹ್ನ 12 ಗಂಟೆ ವೇಳೆಗೆ ಯಾರಿಗೆ ಗೆಲುವು ಎಂಬ ಸ್ಪಷ್ಟ ಚಿತ್ರಣ ಸಿಗಲಿದೆ.

Tags: BJPByElectionbypollCongress PartyCovid 19hanagalsindhagiಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿಸಿದ್ದರಾಮಯ್ಯ
Previous Post

66ನೇ ಕರ್ನಾಟಕ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ವಿಧಾನಸೌಧಕ್ಕೆ ವಿದ್ಯುತ್ ದೀಪಾಲಂಕಾರ

Next Post

ಉಪ ಚುನಾವಣೆ ಮತ ಎಣಿಕೆ ಆರಂಭ: ಮತದಾರ ತೀರ್ಪು ಯಾರಿಗೆ ವರ? ಯಾರಿಗೆ ಶಾಪ?

Related Posts

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?
Top Story

ಹರಿಹರ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಚಾಟನೆ : ಯತ್ನಾಳ್‌ ಹೀಗ್ಯಾಕಂದ್ರು..?

by ಪ್ರತಿಧ್ವನಿ
April 14, 2026
0

ಬೆಂಗಳೂರು : ಪಂಚಮಸಾಲಿ ಸಮಾಜದ ಎರಡು ಟ್ರಸ್ಟ್ ಸ್ವಂತ ಆಸ್ತಿಯಾಗಿವೆ, ಇದರಿಂದ ಸಮಾಜ ಹಾಗೂ ಜನರಿಂದ ನಂಬಿಕೆಗೆ ಅನರ್ಹವಾಗಿವೆ. ವಚನಾನಂದ ಶ್ರೀಗಳ ಉಚ್ಚಾಟನೆ ಅಷ್ಟೇನೂ ವಿಶೇಷ ಎಂದು...

Read moreDetails
ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

ಕೈ ಅಲ್ಪಸಂಖ್ಯಾತ ನಾಯಕರ ಬುಡ ಅಲ್ಲಾಡಿಸುತ್ತಿರುವ ದಾವಣಗೆರೆ ದಂಗಲ್‌ : ಜಬ್ಬಾರ್‌, ನಜೀರ್‌ ಆಯ್ತು ಮುಂದೆ ಜಮೀರ್..?

April 14, 2026
“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

“SIR” ಹೆಸರಲ್ಲಿ ಮತದಾನದ ಹಕ್ಕನ್ನು ಕಿತ್ತುಕೊಳ್ಳುವುದು ಒಪ್ಪಲು ಸಾಧ್ಯವಿಲ್ಲ : ಚುನಾವಣಾ ಆಯೋಗಕ್ಕೆ ಸುಪ್ರೀಂ ಚಾಟಿ :

April 14, 2026
ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

ಪ್ರಧಾನಿ ಮೋದಿ ಭೇಟಿ ಹಿನ್ನೆಲೆ ಆದಿಚುಂಚನಗಿರಿ ಕಟ್ಟು ನಿಟ್ಟಿನ ಭದ್ರತೆ: ಸಿದ್ಧತೆ-ಭದ್ರತೆ ಹೀಗಿದೆ!

April 14, 2026
ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

ಮಂತ್ರಾಲಯ ರಾಯರ ಜಪದ ಕಟ್ಟೆ ಸಮೀಪ ಭೂ ವಿವಾದ ತೀವ್ರ; ಸರ್ವೆ ವೇಳೆ ಗಲಾಟೆ

April 14, 2026
Next Post
ಉಪ ಚುನಾವಣೆ ಮತ ಎಣಿಕೆ ಆರಂಭ: ಮತದಾರ ತೀರ್ಪು ಯಾರಿಗೆ ವರ? ಯಾರಿಗೆ ಶಾಪ?

ಉಪ ಚುನಾವಣೆ ಮತ ಎಣಿಕೆ ಆರಂಭ: ಮತದಾರ ತೀರ್ಪು ಯಾರಿಗೆ ವರ? ಯಾರಿಗೆ ಶಾಪ?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada