• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 30, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಹುಣಸೂರಿನಲ್ಲಿ ಹನುಮ ಜಯಂತಿ: ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ

Any Mind by Any Mind
December 7, 2022
in ಕರ್ನಾಟಕ
0
ಹುಣಸೂರಿನಲ್ಲಿ ಹನುಮ ಜಯಂತಿ: ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ
Share on WhatsAppShare on FacebookShare on Telegram

ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 1700 ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಅಲ್ಲದೇ 9 ಡಿಎಆರ್‌, 8 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ. ಜೊತೆಗೆ ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ

ADVERTISEMENT


ಹುಣಸೂರಿನಲ್ಲಿ ಇಂದು 29ನೇ ವರ್ಷದ ಹನುಮ ಜಯಂತಿ ಆಚರಣೆ ಮಾಡಲಾಗುತ್ತಿದೆ. ಹನುಮಂತೋತ್ಸವ ಸಮಿತಿಯ ವತಿಯಿಂದ ಆಯೋಜಿಸಿರುವ ಹನುಮ ಜಯಂತಿ ಹಿನ್ನೆಲೆಯಲ್ಲಿ ಪಟ್ಟಣದಲ್ಲೆಡೆ ಸಂಭ್ರಮದ ವಾತಾವರಣ ಮನೆ ಮಾಡಿದೆ.


ಹನುಮ ಜಯಂತಿ ಹಿನ್ನೆಲೆಯಲ್ಲಿ ಇಂದು ಬೆಳಗ್ಗೆ 10ಕ್ಕೆ ಪಟ್ಟಣದ ರಂಗನಾಥ ಬಡಾವಣೆಯಿಂದ ಹನುಮಂತನ ವಿಗ್ರಹದೊಂದಿಗೆ ಹಾಗೂ ವಿವಿಧ ಕಲಾತಂಡಗಳು ಹಾಗೂ ಸ್ತಬ್ಧ ಚಿತ್ರಗಳ ಮರವಣಿಗೆ ನಡೆಯಲಿದೆ. ಹನುಮ ಜಯಂತಿ ಶೋಭಾಯಾತ್ರೆ ಹಿನ್ನೆಲೆಯಲ್ಲಿ ಪೊಲೀಸ್‌ ಇಲಾಖೆ ವತಿಯಿಂದ ಪಟ್ಟಣದೆಲ್ಲಡೆ ಅಗತ್ಯ ಮುನ್ನೆಚ್ಚರಿಕೆವಹಿಸಲಾಗಿದೆ. ಹನುಮ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರವಹಿಸಲಾಗಿದ್ದು, ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ 1700 ಪೊಲೀಸರನ್ನ ನಿಯೋಜನೆ ಮಾಡಲಾಗಿದೆ. ಅಲ್ಲದೇ 9 ಡಿಎಆರ್‌, 8 ಕೆಎಸ್‌ಆರ್‌ಪಿ ತುಕಡಿ ನಿಯೋಜಿಸಲಾಗಿದೆ. ಜೊತೆಗೆ ನಗರಸಭೆ ವತಿಯಿಂದ 70 ಪ್ರಮುಖ ಸ್ಥಳಗಳಲ್ಲಿ ಸಿಸಿ ಟಿವಿ ಅಳವಡಿಸಲಾಗಿದೆ.

ಹನುಮ ಜಯಂತಿ ಶೋಭಾಯಾತ್ರೆ

ಅಲ್ಲದೇ ತಾಲೂಕಿನಾದ್ಯಂತ ಮೂರು ದಿನ ಮದ್ಯ ಮಾರಾಟ ನಿಷೇಧ ಮಾಡಲಾಗಿದ್ದು, ಹುಣಸೂರಿನಲ್ಲಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಇದಲ್ಲದೇ ಪಟ್ಟಣದ ಜೆಎಲ್‌ಬಿ ರಸ್ತೆ, ಬಜಾರ್‌ ರಸ್ತೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದ್ದು, ಬೆಳಗ್ಗೆ 11ರಿಂದ ಸಂಜೆ 5 ಗಂಟೆವರೆಗೆ ನಿಷೇಧ ವಿಧಿಸಲಾಗಿದೆ. ಅಲ್ಲದೇ ಮೆರವಣಿಗೆಯಲ್ಲಿ ಕೇವಲ ಅನುಮತಿ ಪಡೆದ ವಾಹನಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಇನ್ನು ಮೆರವಣಿಗೆ ಸಂದರ್ಭದಲ್ಲಿ ಡಿಜೆ ಬಳಕೆಗೆ ಪೊಲೀಸರು ಅವಕಾಶವನ್ನ ನೀಡಿಲ್ಲ.

ಹನುಮ ಜಯಂತಿ ಮೆರವಣಿಗೆ ಹಿನ್ನೆಲೆಯಲ್ಲಿ ಜಿಲ್ಲಾ ಪೊಲೀಸ್‌ ವತಿಯಿಂದ ಎಲ್ಲಾ ಮುನ್ನೆಚ್ಚರಿಕೆವಹಿಸಲಾಗಿದೆ. ಮೆರವಣಿಗೆ ಸಾಗುವ ಎಲ್ಲಾ ಮಾರ್ಗಗಳ ಪರಿಶೀಲನೆ ಸಹ ಮಾಡಲಾಗಿದೆ. ಪ್ರಮುಖವಾಗಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ 30 ಮಂದಿ ಆರೋಪಿತರ ಪಟ್ಟಿಯನ್ನ ತಯಾರಿಸಿರುವ ಪೊಲೀಸರು, ಇವರುಗಳ ಚಲನವಲನದ ಮೇಲೆ ನಿಗಾವಹಿಸಿದ್ದಾರೆ. ಅಲ್ಲದೇ ಪಟ್ಟಣ ಪ್ರವೇಶಿಸುವ 6 ಕಡೆ, ಜಿಲ್ಲೆಯ ಎರಡು ಕಡೆಯಲ್ಲಿ ಚೆಕ್‌ಪೋಸ್ಟ್‌ ತೆರೆದು ವಾಹನಗಳ ತಪಾಸಣೆಯನ್ನ ಸಹ ಮಾಡಲಾಗುತ್ತಿದೆ.

ಸಾರ್ವಜನಿಕರು ಯಾವುದೇ ದೂರುಗಳಿದ್ದರೂ ಸಹಾಯವಾಣಿ ಸಂಖ್ಯೆ 112ಗೆ ಸಂಪರ್ಕಿಸುವಂತೆ ಮನವಿ ಮಾಡಲಾಗಿದೆ. ಜೊತೆಗೆ ನಗರಸಭೆಯ ಅನುಮತಿಯೊಂದಿಗೆ ನಿಗದಿತ ಸ್ಥಳದಲ್ಲಿ ಮಾತ್ರ ಬಾವುಟ, ಫ್ಲೆಕ್ಸ್‌ ಅಳವಡಿಕೆಗೆ ಅವಕಾಶ ನೀಡಲಾಗಿದೆ. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌. ಚೇತನ್‌ ಅವರು ಮೆರವಣಿಗೆ ಸಾಗಲಿರುವ ಮಾರ್ಗಗಳಲ್ಲಿ ಸೂಕ್ತ ಪರಿಶೀಲನೆ ನಡೆಸಿದ್ದಾರೆ.

Tags: ಜಿಲ್ಲಾ ಪೊಲೀಸ್‌ಶೋಭಾಯಾತ್ರೆಹನುಮ ಜಯಂತಿ
Previous Post

ಜಾಕ್‌ ಮಂಜು ನಿರ್ಮಾಣದ ಎರಡನೇ ಪ್ಯಾನ್‌ ಇಂಡಿಯಾ ಚಿತ್ರ ಘೋಷಣೆ

Next Post

ಎಚ್.ಡಿ.ಕೋಟೆ: ಸಾರ್ವಜನಿಕ ಸ್ಥಳದಲ್ಲೇ ಅಕ್ರಮ ಮದ್ಯ ಮಾರಾಟ ಆರೋಪ

Related Posts

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ
ಕರ್ನಾಟಕ

ಮಳೆಯಲ್ಲಿ ಮುಳುಗಿದ ಬೆಂಗಳೂರು: ಡಿಸಿಎಂ ವಿರುದ್ಧ ನಿಖಿಲ್ ಕುಮಾರಸ್ವಾಮಿ ಕಿಡಿ

by ಪ್ರತಿಧ್ವನಿ
April 30, 2026
0

ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಬೆಂಗಳೂರುನಲ್ಲಿ ಮಳೆಯ ಪರಿಣಾಮ ಉಂಟಾದ...

Read moreDetails
ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

ಬಿಸಿಲಿನ ಬೇಗೆಗೆ ತಂಪೆರೆದ ವರುಣ : ಬೆಂಗಳೂರಲ್ಲಿ ಗುಡುಗು ಮಿಂಚು ಸಹಿತ ಭಾರಿ ಮಳೆ..

April 29, 2026
“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

“ಖರ್ಗೆ AICC ಅಧ್ಯಕ್ಷರಾಗಿರೋದೆ ನಮ್ಮ ಸೌಭಾಗ್ಯ, ಅವ್ರು ರಾಜ್ಯದ ಸಿಎಂ ಆಗಲಿ”

April 29, 2026
ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

ಇವರು ಪಂಚರೋ..? ನೀಚರೋ..? : ಸಚಿವೆ ಹೆಬ್ಬಾಳ್ಕರ್‌ ಕ್ಷೇತ್ರದಲ್ಲೇ ಕುರುಬ ಸಮುದಾಯದ ಕುಟುಂಬಕ್ಕೆ ಸಾಮಾಜಿಕ ಬಹಿಷ್ಕಾರ..!

April 29, 2026
ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

ಸಿಎಂ ಬದಲಾವಣೆ ಚರ್ಚೆಗೆ ತೆರೆ? ಜಿ. ಪರಮೇಶ್ವರ್ ಸ್ಪಷ್ಟನೆ ಏನು

April 28, 2026
Next Post
ಎಚ್.ಡಿ.ಕೋಟೆ: ಸಾರ್ವಜನಿಕ ಸ್ಥಳದಲ್ಲೇ ಅಕ್ರಮ ಮದ್ಯ ಮಾರಾಟ ಆರೋಪ

ಎಚ್.ಡಿ.ಕೋಟೆ: ಸಾರ್ವಜನಿಕ ಸ್ಥಳದಲ್ಲೇ ಅಕ್ರಮ ಮದ್ಯ ಮಾರಾಟ ಆರೋಪ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada