ಬಾಬಾ ಸಾಹೇಬ್ ಅಂಬೇಡ್ಕರ್ ಭಾವಚಿತ್ರವಿರುವ ಪೋಸ್ಟರ್ ಮೇಲೆ ಕೆಲವು ಕಿಡಿಗೇಡಿಗಳು ಹನುಮ ಜಯಂತಿಯ ಪೋಸ್ಟರ್ ಅಂಟಿಸಿ ಉದ್ದಂಟತನ ಮೆರೆದಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರಿನಲ್ಲಿ ನಡೆದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ತಳಕ್ಕೆ ದೌಡಾಯಿಸಿದ ದಲಿತ ಸಂಘಟನೆಯ ಸದಸ್ಯರು ಅಂಬೇಡ್ಕರ್ಗೆ ಅಪಮಾನ ಮಾಡಲೆಂದೇ ಯಾರೋ ಕಿಡಿಗೇಡಿಗಳು ಈ ರೀತಿ ಮಾಡಿ ವಿಕೃತಿ ಮೆರೆದಿದ್ದಾರೆ ಕೂಡಲೇ ಅಂತಹವರನ್ನು ಬಂಧಿಸಬೇಕು ಎಂದು ಆಗ್ರಹಿಸಿ ಪ್ರತಿಭಟನೆ ನಡೆಸಿದ್ದವು.
ಮಂಗಳವಾರ ಬೆಂಗಳೂರಿನಲ್ಲಿ ಐಕ್ಯತಾ ಸಮಾವೇಶವಿರುವ ಹಿನ್ನಲೆಯಲ್ಲಿ ತಾಲ್ಲೂಕಿನಾದ್ಯಂತ ಪೋಸ್ಟರ್ಗಳನ್ನು ಅಂಟಿಸಲಾಗಿತ್ತು. ಡಿಸೆಂಬರ್ 7ರಂದು ಹುಣಸೂರಿನಲ್ಲಿ ಹನುಮ ಜಯಂತಿ ಕಾರ್ಯಕ್ರಮ ನಡೆಯುವ ಹಿನ್ನಲೆಯಲ್ಲಿ ಅಂಬೇಡ್ಕರ್ ಭಾವಚಿತ್ರವಿರುವ ಪೋಸ್ಟರ್ಗಳ ಮೇಲೆ ಹನುಮ ಜಯಂತಿಯ ಪೋಸ್ಟರ್ಗಳನ್ನು ಅಂಟಿಸಲಾಗಿದೆ.
ಪೊಲೀಸರು ಕಿಡಿಗೇಡಿಗಳನ್ನು ಬಂಧಿಸದಿದ್ದರೆ ಬುಧವಾರ ನಡೆಯುವ ಹನುಮ ಜಯಂತಿ ಕಾರ್ಯಕ್ರಮದಲ್ಲಿ ಸಮುದಾಯದ ಯುವಕರ ಯಾರು ಭಾಗವಹಿಸದಂತೆ ಮತ್ತು ಉತ್ಸವವನ್ನ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ.