
ಕೋಲಾರ : ಪತ್ನಿ ಮನೆಯವರ ಕಿರುಕುಳಕ್ಕೆ ಬೇಸತ್ತು (Family Dispute) ವ್ಯಕ್ತಿಯೊಬ್ಬ ಆತ್ಮಹತ್ಯೆಗೆ (Self Harming) ಶರಣಾಗಿದ್ದಾರೆ. ತನ್ನ ಪತ್ನಿ ಮನೆಯವರ ವಿರುದ್ಧ ವಿಡಿಯೊ ಮಾಡಿಟ್ಟು ಮರಕ್ಕೆ ನೇಣು ಬಿಗಿದುಕೊಂಡು ಮೃತಪಟ್ಟಿದ್ದಾರೆ. ಕೋಲಾರ ತಾಲೂಕಿನ ಮುದುವತ್ತಿ ಗ್ರಾಮದಲ್ಲಿ ಘಟನೆ ನಡೆದಿದೆ.ಶ್ರೀಕಾಂತ್ (31) ಮೃತ ದುರ್ದೈವಿ.

ತನ್ನ ಪತ್ನಿ ಪಾವನ ಹಾಗೂ ಅವರ ತಂದೆ ತರಕಾರಿ ಯಲ್ಲಪ್ಪ ಕುಟುಂಬಸ್ಥರಿಂದ ಕಿರುಕುಳ ಹಾಗೂ ಜೀವ ಬೆದರಿಕೆ ಇದೆ ಎಂದು ಆರೋಪಿಸಲಾಗಿದೆ. ಶ್ರೀಕಾಂತ್ ಮಾರ್ಕಂಡೇಶ್ವರ ಬೆಟ್ಟದಲ್ಲಿ ನೇಣುಬಿಗಿದು ಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೋಲಾರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯನ್ನು ಮುಂದುವರಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.