ಐಪಿಎಲ್ ನಲ್ಲಿ ಪಂಜಾಬ್ ಕಿಂಗ್ಸ್ ತಂಡದ ವಿರುದ್ಧ ಚೆನ್ನೈ ಸೂಪರ್ ಕಿಂಗ್ಸ್ ಭರ್ಜರಿ ಜಯ ಸಾಧಿಸಿದೆ. ಈ ಮೂಲಕ ಪ್ಲೇ ಆಫ್ ಹಾದಿ ಸುಗಮಗೊಳಿಸಿದೆ. ಈ ಮಧ್ಯೆ ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಹರ್ಭಜನ್ ಸಿಂಗ್ ಧೋನಿ ವಿರುದ್ಧ ಕಿಡಿಕಾರಿದ್ದಾರೆ.
ಸತತ ವಿಕೆಟ್ ಗಳ ಮಧ್ಯೆಯೂ ಧೋನಿ ಮೇಲಿನ ಕ್ರಮಾಂಕದಲ್ಲಿ ಬಾರದಿರುವುದಕ್ಕೆ ಧೋನಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಚೆನ್ನೈ ತಂಡ 101 ರನ್ ಗಳಿಗೆ 5 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತ್ತು. ಹೀಗಾಗಿ ಧೋನಿ ಬರುತ್ತಾರೆ ಎಂದು ಎಲ್ಲರೂ ನಿರೀಕ್ಷಿಸಿದ್ದರು. ಆದರೆ, ಧೋನಿ ಸ್ಯಾಂಟ್ನರ್ ಅವರನ್ನು ಕಳಿಸಿ, ಅವರು ಔಟ್ ಆಗುತ್ತಿದ್ದಂತೆ, ಠಾಕೂರ್ ಅವರನ್ನು ಕಳಿಸಿದರು. ಈ ಇಬ್ಬರ ವಿಕೆಟ್ ಪತನದ ಬಳಿಕ ಧೋನಿ 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದರು. ಇದು ಭಜ್ಜಿ ಅಸಮಾಧಾನಕ್ಕೆ ಕಾರಣವಾಗಿದೆ.
ಹೀಗಾಗಿ ಆಕ್ರೋಶ ವ್ಯಕ್ತಪಡಿಸಿದ ಭಜ್ಜಿ, ಈ ಸೀಸನ್ನಲ್ಲಿ ಧೋನಿ ಸಿಎಸ್ಕೆ ಪರ ವೇಗವಾಗಿ ರನ್ ಗಳಿಸಿದ್ದಾರೆ. ಆದರೆ ಪಂಜಾಬ್ ಕಿಂಗ್ಸ್ ವಿರುದ್ಧದ ಮಹತ್ವದ ಪಂದ್ಯದಲ್ಲಿ ಅವರು 9ನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬರುವ ಅವಶ್ಯಕತೆ ಇರಲಿಲ್ಲ. ಈ ಪಂದ್ಯದಲ್ಲಿ ಚೆನ್ನೈ ಗೆದ್ದಿರಬಹುದು. ಆದರೆ, ಧೋನಿ ಮಾಡಿದ್ದು ತಪ್ಪು ಎಂದೇ ಹೇಳುತ್ತೇನೆ ಎಂದು ಹೇಳಿದ್ದಾರೆ. ಈ ಪಂದ್ಯದಲ್ಲಿ ಧೋನಿ ಮೊದಲ ಬೌಲಿಂಗ್ ನಲ್ಲಿಯೇ ಬೋಲ್ಡ್ ಆಗಿದ್ದರು.