• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, September 16, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?

ಪ್ರತಿಧ್ವನಿ by ಪ್ರತಿಧ್ವನಿ
September 15, 2026
in Top Story
0
100 ದಿನಗಳ ಕಾರ್ಯಕ್ರಮದಲ್ಲಿ ಹರಿಪ್ರಸಾದ್ ಗೈರು: ಸಿಎಂ ಡಿಕೆಶಿ ಕೊಟ್ಟ ಸ್ಪಷ್ಟನೆ ಏನು?
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಸರ್ಕಾರದ 100 ದಿನಗಳ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ವಿಧಾನ ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್ ಗೈರಾಗಿರುವುದು ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಕಾರ್ಯಕ್ರಮಕ್ಕೆ ಹರಿಪ್ರಸಾದ್ ಅವರನ್ನು ಆಹ್ವಾನಿಸಿರಲಿಲ್ಲವೇ ಎಂಬ ಪ್ರಶ್ನೆ ಮೂಡಿರುವ ಬೆನ್ನಲ್ಲೇ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸ್ಪಷ್ಟನೆ ನೀಡಿದ್ದಾರೆ.

ADVERTISEMENT

 

ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ, “ಹರಿಪ್ರಸಾದ್ ಅವರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿಲ್ಲ ಎಂದು ಹೇಳಿದವರು ಯಾರು? ವಿರೋಧ ಪಕ್ಷಗಳ ಶಾಸಕರು ಸೇರಿದಂತೆ ಎಲ್ಲರನ್ನೂ ಆಹ್ವಾನಿಸಿದ್ದೇವೆ. ವೇದಿಕೆ ಮೇಲೆ ನಮ್ಮದೇ ಆದ ಶಿಷ್ಟಾಚಾರ ಇರುತ್ತದೆ. ಅವರು ನಮ್ಮ ಪಕ್ಷದ ಅಧ್ಯಕ್ಷರು. ಪಕ್ಷದೊಂದಿಗೆ ಸೇರಿಕೊಂಡೇ ನಾವು ಕೆಲಸ ಮಾಡುತ್ತೇವೆ” ಎಂದು ಹೇಳಿದರು.

ರಾಜ್ಯದಲ್ಲಿ ಈ ಬಾರಿ ತೀವ್ರ ಬರ ಪರಿಸ್ಥಿತಿ ಎದುರಾಗಿದ್ದು, 200ಕ್ಕೂ ಹೆಚ್ಚು ತಾಲೂಕುಗಳು ಬರದ ಹೊಡೆತಕ್ಕೆ ಸಿಲುಕಿವೆ ಎಂದು ಸಿಎಂ ತಿಳಿಸಿದರು. ಕೇಂದ್ರ ಸರ್ಕಾರದ ನಿಯಮಾವಳಿಗಳ ಪ್ರಕಾರ ಬರಪೀಡಿತ ತಾಲೂಕುಗಳನ್ನು ಘೋಷಿಸಲಾಗುವುದು ಎಂದರು.

 

ಈಗಾಗಲೇ 102 ತಾಲೂಕುಗಳನ್ನು ಬರಪೀಡಿತ ಎಂದು ಘೋಷಿಸಲಾಗಿದ್ದು, ಉಳಿದ ಪ್ರದೇಶಗಳಲ್ಲಿ ಪರಿಶೀಲನೆ ನಡೆಯುತ್ತಿದೆ. “ಯಾರೂ ಆತುರ ಪಡಬೇಕಿಲ್ಲ. ಶೀಘ್ರದಲ್ಲೇ ಬರ ಘೋಷಣೆ ಮಾಡಲಾಗುವುದು” ಎಂದು ಅವರು ಹೇಳಿದರು.ಹಲವು ಪ್ರದೇಶಗಳಲ್ಲಿ ಬೆಳೆ ನಾಶವಾಗಿದ್ದು, ಅಂತರ್ಜಲ ಮಟ್ಟ ಕುಸಿದಿದೆ. ಮುಂದಿನ ದಿನಗಳಲ್ಲಿ ಕುಡಿಯುವ ನೀರು ಹಾಗೂ ವಿದ್ಯುತ್ ಸಮಸ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ ಎಂದು ಆತಂಕ ವ್ಯಕ್ತಪಡಿಸಿದರು.

JP Nadda Entry BJP Office : ಕೇಂದ್ರ ಆರೋಗ್ಯ ಸಚಿವರಿಗೆ ಭರ್ಜರಿ ವೆಲ್ ಕಮ್ ಮಾಡಿದ ರಾಜ್ಯ ಬಿಜೆಪಿ ನಾಯಕರು..!

ಕಳೆದ ವಾರ ವಿದ್ಯುತ್ ಬೇಡಿಕೆ 19,000 ಮೆಗಾವ್ಯಾಟ್‌ಗಿಂತ ಹೆಚ್ಚಾಗಿತ್ತು. ದುಬಾರಿ ದರದಲ್ಲಿ ವಿದ್ಯುತ್ ಖರೀದಿಸುವ ಅನಿವಾರ್ಯತೆ ಎದುರಾಗಿದೆ. ನೆರೆ ರಾಜ್ಯಗಳೊಂದಿಗೆ ವಿದ್ಯುತ್‌ ವಿಚಾರವಾಗಿ ಚರ್ಚಿಸಲು ಸಚಿವರಿಗೆ ಸೂಚಿಸಿರುವುದಾಗಿ ಸಿಎಂ ತಿಳಿಸಿದರು.

ಸೆಪ್ಟೆಂಬರ್‌ 18ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಭಾಗದ ಜನರು ಉದ್ಯೋಗಕ್ಕಾಗಿ ಹೊರ ಜಿಲ್ಲೆ ಹಾಗೂ ರಾಜ್ಯಗಳಿಗೆ ತೆರಳುವುದನ್ನು ತಡೆಯಲು ಸ್ಥಳೀಯ ಪ್ರಾಕೃತಿಕ ಸಂಪನ್ಮೂಲಗಳನ್ನು ಬಳಸಿಕೊಂಡು ಉದ್ಯೋಗ ಸೃಷ್ಟಿಸುವ ಕುರಿತು ಹಲವು ಹೊಸ ಯೋಜನೆಗಳನ್ನು ಘೋಷಿಸಲಾಗುವುದು ಎಂದು ಶಿವಕುಮಾರ್ ಹೇಳಿದರು.ಬರ ಪರಿಸ್ಥಿತಿ ಎದುರಿಸಲು ವಿದ್ಯುತ್ ಉತ್ಪಾದನೆ ಹೆಚ್ಚಿಸುವ ಅಗತ್ಯವಿದೆ. ಕಲ್ಲಿದ್ದಲು ನಿಕ್ಷೇಪ ಇರುವ ಪ್ರದೇಶಗಳಲ್ಲೇ ತುರ್ತಾಗಿ ಥರ್ಮಲ್ ವಿದ್ಯುತ್ ಘಟಕಗಳನ್ನು ಸ್ಥಾಪಿಸುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ ಎಂದರು.

ರೈತರ ಸಮಸ್ಯೆಗಳು ಹಾಗೂ ಕಸ್ತೂರಿರಂಗನ್ ವರದಿ ಕುರಿತು ಚರ್ಚಿಸಲು ಸೆಪ್ಟೆಂಬರ್‌ 21ರಿಂದ 23ರವರೆಗೆ ಮೂರು ದಿನಗಳ ವಿಶೇಷ ಅಧಿವೇಶನ ಕರೆಯಲಾಗಿದೆ ಎಂದು ಸಿಎಂ ತಿಳಿಸಿದರು. “ಬರದ ವಿಚಾರದಲ್ಲಿ ರಾಜಕಾರಣ ಮಾಡುವ ಅಗತ್ಯವಿಲ್ಲ. ರೈತರ ಸಮಸ್ಯೆ ಬಗ್ಗೆ ಚರ್ಚೆ ನಡೆಯಲಿದೆ. ಬರ ಘೋಷಣೆ ಶೀಘ್ರದಲ್ಲೇ ಪ್ರಕಟಿಸಲಾಗುವುದು” ಎಂದು ಅವರು ಹೇಳಿದರು.

Vijayanand Kashappanavar : ಯಾವಾಗ ಬಂದಿ ದಾನಯ್ಯಾ, ಉಮೇಶ್ ಕಾರ್ ಹತ್ತಪ್ಪಾ..#pratidhvani #bjp #karnataka

ಭಾನುವಾರ ಹಾಸ್ಟೆಲ್‌ಗೆ ಭೇಟಿ ನೀಡಿ ವಿದ್ಯಾರ್ಥಿಗಳೊಂದಿಗೆ ಚರ್ಚಿಸಿರುವುದಾಗಿ ತಿಳಿಸಿದ ಸಿಎಂ, ವಿವಿಧ ಜಿಲ್ಲೆಗಳ ವಿದ್ಯಾರ್ಥಿಗಳು ಇಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಾರೆ ಎಂದರು. ಮಕ್ಕಳು ತಪ್ಪು ದಾರಿಗೆ ಹೋಗದಂತೆ ಪೋಷಕರು ಹಾಗೂ ಸಮಾಜ ನಿಗಾ ವಹಿಸಬೇಕು ಎಂದು ಸಲಹೆ ನೀಡಿದರು.ಜನಸೇವೆ ಇಲಾಖೆ ಹಾಗೂ ಕಾರ್ಯಕ್ರಮಗಳಲ್ಲಿ ಶಾಸಕರು ಭಾಗವಹಿಸುತ್ತಿಲ್ಲ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಜನರು ಮತ್ತು ಜನಪ್ರತಿನಿಧಿಗಳ ನಡುವಿನ ಅಂತರ ಕಡಿಮೆ ಮಾಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಈ ಕುರಿತು ಕೆಲವರಿಗೆ ಇನ್ನಷ್ಟು ತರಬೇತಿ ಹಾಗೂ ಅರಿವು ಅಗತ್ಯವಿದೆ ಎಂದು ಹೇಳಿದರು.

 

 

Tags: 100 Days GovernmentB K HariprasadCabinet MeetingCongress GovernmentD K ShivakumarDakshina KannadaDrought DeclarationDrought In KarnatakaElectricity CrisisFarmers IssuesKarnataka CongressKarnataka DroughtKarnataka Governmentkarnataka newsKarnataka PoliticsKasturirangan Reportpolitical newsSpecial Assembly Session
Previous Post

ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

Next Post

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

Related Posts

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು
Top Story

ಸತೀಶ್ ಜಾರಕಿಹೊಳಿ ವಿರುದ್ಧದ ED ದಾಳಿ ಹಿಂದೆ ಕಾಂಗ್ರೆಸ್ ಕೈವಾಡ? ಕುಮಾರಸ್ವಾಮಿ ಆರೋಪ; ಡಿಕೆಶಿ ಸವಾಲು

by ಪ್ರತಿಧ್ವನಿ
September 16, 2026
0

ಬೆಂಗಳೂರು: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನಡುವಿನ ವಾಕ್ಸಮರ ಮತ್ತಷ್ಟು ತೀವ್ರಗೊಂಡಿದೆ. ಸಚಿವ ಸತೀಶ್ ಜಾರಕಿಹೊಳಿ ಅವರ ನಿವಾಸ ಹಾಗೂ ಸಂಬಂಧಿತ...

Read moreDetails
ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

ಬಿಗ್‌ಬಾಸ್ ಮನೆಯಲ್ಲಿ ಓಂ ಪ್ರಕಾಶ್ ಆರೋಗ್ಯ ಕೈಕೊಟ್ಟಿದ್ದೇಕೆ?‌ ವ್ಯವಸ್ಥೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ ಪ್ರಕಾಶ್!

September 16, 2026
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

September 15, 2026
ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

ಹಿಮಾಲಯಕ್ಕೆ ಕಾದಿದೆಯೇ ದೊಡ್ಡ ಅಪಾಯ?ದಕ್ಷಿಣ ಏಷ್ಯಾದ ನೀರಿನ ಭದ್ರತೆಗೆ ಎದುರಾಯ್ತು ಹೊಸ ಸವಾಲು!

September 15, 2026
ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

ಕರ್ನಾಟಕ ಪ್ರವಾಸೋದ್ಯಮದಲ್ಲಿ ಹೂಡಿಕೆಗೆ ಯುಎಇ ಕನ್ನಡಿಗ ಉದ್ಯಮಿಗಳಿಗೆ ಸಚಿವ ಕೆ.ಜೆ. ಜಾರ್ಜ್ ಆಹ್ವಾನ..

September 15, 2026
Next Post
‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

‘ಮುಡಾ ದೂರು ಕೊಟ್ಟಿದ್ದು ಕಾಂಗ್ರೆಸ್‌ನವರೇ’! ಸ್ವಪಕ್ಷೀಯರ ವಿರುದ್ಧ ರಾಜಣ್ಣ ಸ್ಫೋಟಕ ಹೇಳಿಕೆ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada