ಚಂಡಿಗಢ:ಲೈಂಗಿಕ ಕಿರುಕುಳ ಹಾಗೂ ಬೆದರಿಕೆ ಆರೋಪದ ಹಿನ್ನೆಲೆ ಹರ್ಯಾಣ ಕ್ರೀಡಾ ಸಚಿವ ಸಂದೀಪ್ ಸಿಂಗ್ ರಾಜೀನಾಮೆ ನೀಡಿದ್ದಾರೆ ಎಂದು ವರದಿ ತಿಳಿಸಿದೆ.
ಸಂದೀಪ್ ಸಿಂಗ್ ವಿರುದ್ಧ ಜೂನಿಯರ್ ಅಥ್ಲೆಟಿಕ್ಸ್ ಕೋಚ್ ದೂರು ನೀಡಿದ್ದರು.ಚಂಡಿಗಢ ಪೊಲೀಸರು ಸಂದೀಪ್ ಸಿಂಗ್ ವಿರುದ್ದ ಪ್ರಕರಣ ದಾಖಲಿಸಿದ್ದರು.
ತನ್ನ ಮೇಲಿನ ಆರೋಪದ ಬಗ್ಗೆ ಪ್ರತಿಕ್ರಿಯಿಸಿದ ಸಂದೀಪ್ ಸಿಂಗ್, ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆ ಆಗಬೇಕು. ಆರೋಪದ ಹಿಂದೆ ಷಡ್ಯಂತರವಿದೆ ಎಂದು ಆರೋಪಿಸಿದ್ದಾರೆ.
ನನ್ನ ಇಮೇಜ್ ಹಾಳು ಮಾಡುವ ಯತ್ನ ನಡೆಯುತ್ತಿದೆ. ನನ್ನ ವಿರುದ್ಧ ಹೊರಿಸಲಾಗಿರುವ ಸುಳ್ಳು ಆರೋಪಗಳ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಸಂದೀಪ್ ಆಗ್ರಹಿಸಿದ್ದಾರೆ.