• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, August 7, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?

ಪ್ರತಿಧ್ವನಿ by ಪ್ರತಿಧ್ವನಿ
August 6, 2026
in Top Story, ಕರ್ನಾಟಕ, ರಾಜಕೀಯ
0
ಸಿಎಂ ನಿವಾಸದಲ್ಲಿ ಮಹತ್ವದ ಸಭೆ: ಸಭಾಪತಿ ಸ್ಥಾನ ತ್ಯಾಗಕ್ಕೆ ಒಪ್ಪಿದ್ರಾ ಬಸವರಾಜ್‌ ಹೊರಟ್ಟಿ?
Share on WhatsAppShare on FacebookShare on Telegram

ಬೆಂಗಳೂರು: ವಿಧಾನ ಪರಿಷತ್ ಸಭಾಪತಿ ಬಸವರಾಜ್‌ ಹೊರಟ್ಟಿ ಅವರ ರಾಜೀನಾಮೆ ವಿಚಾರಕ್ಕೆ ಸಂಬಂಧಿಸಿದ ರಾಜಕೀಯ ಬೆಳವಣಿಗೆಗಳು ತೀವ್ರಗೊಂಡಿವೆ. ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ನಿವಾಸದಲ್ಲಿ ನಿನ್ನೆ ತಡರಾತ್ರಿ ನಡೆದ ಮಹತ್ವದ ಸಭೆಯಲ್ಲಿ ಸಭಾಪತಿ ಸ್ಥಾನ ಸೇರಿದಂತೆ ಹಲವು ರಾಜಕೀಯ ಬೆಳವಣಿಗೆಗಳ ಕುರಿತು ಸುದೀರ್ಘ ಚರ್ಚೆ ನಡೆದಿದೆ.

ADVERTISEMENT
Chikkaballapur ಉಸ್ತುವಾರಿ ಸಚಿವನಾದ ಬಳಿಕ Byrathi Suresh ಹೇಳಿದ್ದೇನು..? #pratidhvani

ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂಬ ನಿಲುವಿನಲ್ಲಿ ಇದ್ದ ಬಸವರಾಜ್‌ ಹೊರಟ್ಟಿ ಅವರೊಂದಿಗೆ ಮುಖ್ಯಮಂತ್ರಿ ಸಂಧಾನ ಮಾತುಕತೆ ನಡೆಸಿದ್ದಾರೆ. ಸಭೆಯಲ್ಲಿ ವಿಧಾನ ಪರಿಷತ್ ಸಭಾಪತಿ ಮತ್ತು ಉಪಸಭಾಪತಿ ಚುನಾವಣೆ, ಮುಂಬರುವ ಅಧಿವೇಶನದ ಕಾರ್ಯತಂತ್ರ ಹಾಗೂ ಇತ್ತೀಚಿನ ರಾಜಕೀಯ ಬೆಳವಣಿಗೆಗಳ ಕುರಿತು ಚರ್ಚೆ ನಡೆಸಲಾಗಿದೆ ಎನ್ನಲಾಗಿದೆ.

 ಸಭೆಯಲ್ಲಿ ಕೆಲವು ನಾಯಕರು ಬಸವರಾಜ ಹೊರಟ್ಟಿ ಅವರನ್ನು ಸಭಾಪತಿ ಸ್ಥಾನದಲ್ಲೇ ಮುಂದುವರಿಸುವಂತೆ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಸತೀಶ್ ಜಾರಕಿಹೊಳಿ, ಚಲುವರಾಯಸ್ವಾಮಿ, ಜಮೀರ್ ಅಹ್ಮದ್ ಖಾನ್, ಯು.ಟಿ. ಖಾದರ್ ಹಾಗೂ ಎನ್.ಎ. ಹ್ಯಾರಿಸ್ ಅವರು ಹೊರಟ್ಟಿಯನ್ನು ಮುಂದುವರಿಸುವಂತೆ ಒತ್ತಾಯ ವ್ಯಕ್ತಪಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಪಕ್ಷದ ವರಿಷ್ಠರ ನಿರ್ಧಾರವನ್ನು ಬದಲಾಯಿಸಲು ಒಪ್ಪದ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅಂತಿಮವಾಗಿ ಪಕ್ಷದ ನಿರ್ಧಾರಕ್ಕೆ ಸಹಕರಿಸುವಂತೆ ಹೊರಟ್ಟಿ ಅವರಿಗೆ ಮನವಿ ಮಾಡಿ ಒಪ್ಪಿಸಿದ್ದಾರೆ ಎನ್ನಲಾಗಿದೆ.

ಸದ್ಯದ ಮಾಹಿತಿಯಂತೆ, ಆಗಸ್ಟ್ 14ರಂದು ವಿಧಾನ ಪರಿಷತ್ ಉಪಸಭಾಪತಿ ಸ್ಥಾನಕ್ಕೆ ಚುನಾವಣೆ ನಡೆಯುವ ಸಾಧ್ಯತೆ ಇದೆ. ಉಪಸಭಾಪತಿ ಆಯ್ಕೆ ಪ್ರಕ್ರಿಯೆ ಪೂರ್ಣಗೊಂಡ ಬಳಿಕ ಬಸವರಾಜ ಹೊರಟ್ಟಿ ಸಭಾಪತಿ ಸ್ಥಾನದಿಂದ ನಿರ್ಗಮಿಸುವ ನಿರ್ಧಾರಕ್ಕೆ ಬಂದಿದ್ದಾರೆ ಎಂದು ಮೂಲಗಳು ತಿಳಿಸಿವೆ. ಈ ಬೆಳವಣಿಗೆಯಿಂದ ವಿಧಾನ ಪರಿಷತ್‌ನಲ್ಲಿ ಹೊಸ ನಾಯಕತ್ವಕ್ಕೆ ದಾರಿ ತೆರೆಯುವ ಸಾಧ್ಯತೆ ಇದ್ದು, ಮುಂದಿನ ಅಧಿವೇಶನಕ್ಕೂ ಮುನ್ನ ರಾಜಕೀಯ ವಲಯದಲ್ಲಿ ಇನ್ನಷ್ಟು ಚಟುವಟಿಕೆಗಳು ನಡೆಯುವ ನಿರೀಕ್ಷೆಯಿದೆ.

Balakrishna ಮಾತಿಗೆ DK Shivakumar ರಿಯಾಕ್ಷನ್ ನೋಡಿ..! | Ramanagara karaga Utsava | pratidhvani

ಇನ್ನು ನಿನ್ನೆಯ ಮಹತ್ವದ ಸಭೆಯಲ್ಲಿ ಸಚಿವರಾದ ಸತೀಶ್ ಜಾರಕಿಹೊಳಿ, ಯು.ಟಿ. ಖಾದರ್, ಹೆಚ್.ಸಿ. ಬಾಲಕೃಷ್ಣ, ಚಲುವರಾಯಸ್ವಾಮಿ, ಜಮೀರ್ ಅಹ್ಮದ್ ಖಾನ್, ಶಾಸಕರಾದ ಕುಣಿಗಲ್ ರಂಗನಾಥ್, ಶರತ್ ಬಚ್ಚೇಗೌಡ, ಕದಲೂರು ಉದಯ್, ಎನ್.ಎ. ಹ್ಯಾರಿಸ್ ಹಾಗೂ ವಿಧಾನ ಪರಿಷತ್ ಸದಸ್ಯ ವಿನಯ್ ಕಾರ್ತಿಕ್ ಭಾಗವಹಿಸಿದ್ದರು.

Tags: Basavaraj HorattiBJPcongressDK ShivakumarKarnatakaPolitics
Previous Post

ರೇಣುಕಾಸ್ವಾಮಿ ಕೊ* ಕೇಸ್‌ಗೆ ಬಿಗ್ ಟ್ವಿಸ್ಟ್: ಕೋರ್ಟ್‌ಗೆ ಪ್ರದೋಷ್ ಹೊಸ ಅರ್ಜಿ..ದರ್ಶನ್‌ಗೆ ಸಂಕಷ್ಟ?

Next Post

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

Related Posts

ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್
Top Story

ಬಸವರಾಜ್‌ ಹೊರಟ್ಟಿ ರಾಜೀನಾಮೆ ಅಂಗೀಕಾರ..ಆ.14 ನೂತನ ಸಭಾಪತಿ ಆಯ್ಕೆ: ಸಿಎಂ ಡಿ.ಕೆ ಶಿವಕುಮಾರ್

by ಪ್ರತಿಧ್ವನಿ
August 7, 2026
0

ಬೆಂಗಳೂರು: ಹಿರಿಯ ರಾಜಕಾರಣಿ ಹಾಗೂ ವಿಧಾನ ಪರಿಷತ್ ಸದಸ್ಯ ಬಸವರಾಜ್‌ ಹೊರಟ್ಟಿ ಅವರು ಇಂದು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈ ಬಗ್ಗೆ...

Read moreDetails
BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

BREAKING NEWS: ವಿಧಾನ ಪರಿಷತ್ ಸಭಾಪತಿ ಸ್ಥಾನಕ್ಕೆ ಬಸವರಾಜ್‌ ಹೊರಟ್ಟಿ ರಾಜೀನಾಮೆ

August 7, 2026
ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?

ಸ್ಟಾಕ್ ಮಾರ್ಕೆಟ್ ವಂಚನೆ ಬಗ್ಗೆ ಪ್ರಶ್ನಿಸಿದ ಕನ್ನಡಿಗರನ್ನೇ ನಿಂದಿಸಿದ ಮಹಿಳೆ: ಮುಂದೇನಾಯ್ತು..?

August 7, 2026
Boss Movie Review: ಕೇಳಿದ ಕಥೆಯನ್ನು ನೋಡುವ ಮಜಾನೇ ಬೇರೆ!

Boss Movie Review: ಕೇಳಿದ ಕಥೆಯನ್ನು ನೋಡುವ ಮಜಾನೇ ಬೇರೆ!

August 7, 2026
ಬೆಂಗಳೂರು ಅಭಿವೃದ್ಧಿ ಸಚಿವರೇ ಇಲ್ನೋಡಿ..! ಖಾತೆ ಬದಲಾವಣೆಗೆ 40 ಸಾವಿರ ಲಂಚ..?

ಬೆಂಗಳೂರು ಅಭಿವೃದ್ಧಿ ಸಚಿವರೇ ಇಲ್ನೋಡಿ..! ಖಾತೆ ಬದಲಾವಣೆಗೆ 40 ಸಾವಿರ ಲಂಚ..?

August 7, 2026
Next Post
ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

ಕಲಬುರಗಿ ಕೇಂದ್ರಿಯ ವಿವಿಯಲ್ಲಿ ಮುಸುಕುಧಾರಿಗಳ ಅಟ್ಟಹಾಸ: ಸಿಸಿಟಿವಿ ಧ್ವಂಸ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada