• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Thursday, April 23, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕಾಂಗ್ರೆಸ್ ಪಕ್ಷ ಸಿಂಬಲ್ ಮೇಲೆ ಮಾತ್ರ ನಿಂತಿಲ್ಲ, ಸಿದ್ಧಾಂತಗಳ ಮೇಲೆ ನಿಂತಿದೆ, ಬಿಜೆಪಿಯವರ ಸಿದ್ಧಾಂತ ಯಾವುದು? ಮನುವಾದವೇ? – ಸಿದ್ದರಾಮಯ್ಯ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
December 6, 2021
in ಕರ್ನಾಟಕ, ರಾಜಕೀಯ
0
ಡಿ.13ರಿಂದ ವಿಧಾನಮಂಡಲ ಅಧಿವೇಶನ; ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ಸಿದ್ದರಾಮಯ್ಯ ಸಿದ್ಧತೆ; ಕಾಂಗ್ರೆಸ್ ತಂತ್ರಕ್ಕೆ ಬೊಮ್ಮಾಯಿ ಪ್ರತಿತಂತ್ರ
Share on WhatsAppShare on FacebookShare on Telegram

ಕಾಂಗ್ರೆಸ್ ವಯಸ್ಸಾದ ಪಕ್ಷ ಅದನ್ನು ವಿಸರ್ಜಿಸಬೇಕು ಎಂದು ಬೊಮ್ಮಾಯಿ ಹೇಳಿದ್ದಾರೆ. ಅವರಿಗೆ ತಿಳಿಸಬಯಸುತ್ತೇನೆ.  ಪಕ್ಷಗಳು ಸಿಂಬಲ್ ಮೇಲೆ ಮಾತ್ರ ನಿಂತಿರುವುದಿಲ್ಲ. ಸಿದ್ಧಾಂತಗಳ ಮೇಲೆ ನಿಂತಿರುತ್ತವೆ. ಬಿಜೆಪಿಯವರ ಸಿದ್ಧಾಂತ ಯಾವುದು? ಮನುವಾದ ಅಲ್ಲವೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ADVERTISEMENT

ಈ ಸಿದ್ಧಾಂತವನ್ನು  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ರಚಿಸಿದ ನಮ್ಮ ಸಂವಿಧಾನವು ಸಂಪೂರ್ಣ ಅಳಿಸಿ ಹಾಕಿದೆ.  ಸಮಾನತೆ, ಭ್ರಾತೃತ್ವ, ನ್ಯಾಯ, ಸಾಮಾಜಿಕ ನ್ಯಾಯ, ಸರ್ವೋದಯ ತತ್ವ ಮುಂತಾದವುಗಳು ನಮ್ಮ ಸಂವಿಧಾನದ ಪ್ರಮುಖ ಆಶಯಗಳು. ಕನಿಷ್ಠ ಎರಡೂವರೆ ಸಾವಿರ ವರ್ಷಗಳಷ್ಟು ಓಬೀರಾಯನ ಕಾಲದ ಮನುವಾದವನ್ನು ಅಳವಡಿಸಿಕೊಂಡ ಬಿಜೆಪಿಯನ್ನು ವಿಸರ್ಜಿಸಬೇಕೋ, ಸಾಮಾಜಿಕ ನ್ಯಾಯವನ್ನು ಸಿದ್ದಾಂತವಾಗಿಸಿಕೊಂಡ ಕಾಂಗ್ರೆಸ್ ಪಕ್ಷವನ್ನು ವಿಸರ್ಜಿಸಬೇಕೊ ಎಂದು ಬೊಮ್ಮಾಯಿಯವರೇ ಹೇಳಲಿ ಎಂದಿದ್ದಾರೆ.

ಈ ಕಾಲಕ್ಕೆ ಹೊಂದಿಕೆಯಾಗದ ಪಳಿಯುಳಿಕೆಯಂಥ ಸಿದ್ಧಾಂತವನ್ನು ಹೊತ್ತುಕೊಂಡು ಓಡಾಡುತ್ತಿರುವ ಬಿಜೆಪಿಯನ್ನು ವಿಸರ್ಜನೆ ಮಾಡಬೇಕೆ ಹೊರತು ಯುಗಧರ್ಮದ ಜೊತೆ ಹೆಜ್ಜೆ ಹಾಕುತ್ತಿರುವ ಕಾಂಗ್ರೆಸ್ ಪಕ್ಷವನ್ನಲ್ಲ ಎಂದ ಹೇಳಿದ್ಧಾರೆ.

 ಬಾಬಾ ಸಾಹೇಬರು ಮನು ಸಿದ್ಧಾಂತವನ್ನು ತಿರಸ್ಕರಿಸಿ ಬೌದ್ಧರಾಗಿ ಪರಿನಿಬ್ಬಾಣಗೊಂಡ ಪವಿತ್ರ ದಿನ ಇಂದು.  ಅವರು ಯಾಕೆ ಬೌದ್ಧ ಧರ್ಮಕ್ಕೆ ಮತಾಂತರಗೊಂಡರು ಎಂದು ಇತಿಹಾಸದ ಪುಟಗಳನ್ನು ತಿರುವಿ ನೋಡಿ. ಸತ್ಯ ನಿಮಗೆ ತಿಳಿಯುತ್ತದೆ ಎಂದಿದ್ದಾರೆ.

ನೀವು ಕೂಡ  ಮನುಷ್ಯ ವಿರೋಧಿಯಾದ ಮನು ಸಿದ್ಧಾಂತವನ್ನು ತೊರೆದು ಹೊರ ಬನ್ನಿ ಎಂದು ತಿಳಿಸಬಯಸುತ್ತೇನೆ. ಕನಿಷ್ಟ ಪಕ್ಷ ಸುಳ್ಳು ಹೇಳುವುದನ್ನು ನಿಲ್ಲಿಸಿ; ಕಳಬೇಡ, ಕೊಲಬೇಡ, ಹುಸಿಯ ನಡಿಯಲು ಬೇಡ ಎಂದ ಬಸವಣ್ಣನವರ ತತ್ವವನ್ನು ಹಾಗೂ ಬಾಬಾ ಸಾಹೇಬರ ಸಾಮಾಜಿಕ ನ್ಯಾಯವನ್ನು ಎತ್ತಿ ಹಿಡಿಯಬೇಕೆಂದು  ಆಗ್ರಹಿಸುತ್ತೇನೆ ಎಂದಿ ಹೇಳಿದ್ದಾರೆ.

Tags: Basavaraj BommaiBJPCongress PartyCovid 19ಎಚ್ ಡಿ ಕುಮಾರಸ್ವಾಮಿಕೋವಿಡ್-19ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಸಿಎಂ ಬೊಮ್ಮಾಯಿ ನಮ್ಮ ನಿರೀಕ್ಷೆಗಳನ್ನೆಲ್ಲ ಸುಳ್ಳು ಮಾಡಿ ಬಿಜೆಪಿಯ ಬಹಳ ದೊಡ್ಡ ಸುಳ್ಳುಗಾರರಾಗಿದ್ದಾರೆ – ಸಿದ್ದರಾಮಯ್ಯ

Next Post

ನಗರದ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ!

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ನಗರದ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ!

ನಗರದ ಪ್ರತಿಷ್ಠಿತ ಮಂತ್ರಿ ಮಾಲ್​ಗೆ ಮತ್ತೆ ಬೀಗ!

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada