ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ನಡೆದ ಸತ್ಸಂಗದಲ್ಲಿ ನಡೆದ ಭಾರೀ ಕಾಲ್ತುಳಿತದಲ್ಲಿ 121 ಜನರು ಸಾವನ್ನಪ್ಪಿದ ಬೆನ್ನಲ್ಲೇ ಯುಪಿ ಪೊಲೀಸರು ಗುರುವಾರ ಬೋಧಕ ಭೋಲೆ ಬಾಬಾ ಅವರ ಸಂಘಟನಾ ಸಮಿತಿಯ ಆರು ಸದಸ್ಯರನ್ನು ಬಂಧಿಸಿದ್ದಾರೆ. ಬಂಧನಕ್ಕೊಳಗಾದ ಎಲ್ಲಾ ಆರು ಜನರು ಸತ್ಸಂಗದಲ್ಲಿ ‘ಸೇವಾದಾರರು’ (ಸ್ವಯಂಸೇವಕರು) ಕೆಲಸ ಮಾಡುತಿದ್ದರು.
ಹರ್ತ್ರಾಸ್‌ನಲ್ಲಿರುವ ಬೋಧಕರ ಸಭೆಯಲ್ಲಿ ಕಾಲ್ತುಳಿತ ಸಂಭವಿಸಿದಾಗಿನಿಂದ ಆಶ್ರಮದ ಹೊರಗೆ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಏತನ್ಮಧ್ಯೆ, ಶುಕ್ರವಾರ ಬೆಳಿಗ್ಗೆ ಹತ್ರಾಸ್‌ಗೆ ಭೇಟಿ ನೀಡಿದ ರಾಹುಲ್ ಗಾಂಧಿ, ಅಲ್ಲಿ ಕಾಲ್ತುಳಿತದ ಸಂತ್ರಸ್ತರ ಕುಟುಂಬ ಸದಸ್ಯರನ್ನು ಭೇಟಿ ಮಾಡಿದರು. ಕೆಲವು ಸಂತ್ರಸ್ತ ಕುಟುಂಬಗಳನ್ನು ಭೇಟಿ ಮಾಡಲು ಅವರು ಅಲಿಘರ್‌ಗೂ ಭೇಟಿ ನೀಡಿದರು.
ಕಾಲ್ತುಳಿತ ಸಂತ್ರಸ್ತರ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ರಾಹುಲ್ ಗಾಂಧಿ, “ನಾನು ಇದನ್ನು ರಾಜಕೀಯ ದೃಷ್ಟಿಕೋನದಿಂದ ಹೇಳಲು ಬಯಸುವುದಿಲ್ಲ, ಆದರೆ ಆಡಳಿತದ ಕಡೆಯಿಂದ ಲೋಪಗಳಿವೆ ಮತ್ತು ಮುಖ್ಯ ವಿಷಯವೆಂದರೆ ಗರಿಷ್ಠ ಪರಿಹಾರವನ್ನು ನೀಡಬೇಕು. ಅವರು ಬಡ ಕುಟುಂಬಗಳಾಗಿದ್ದು, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ಮುಕ್ತ ಮನಸ್ಸಿನಿಂದ ಪರಿಹಾರ ನೀಡುವಂತೆ ಕೋರುತ್ತೇನೆ ಎಂದರು.
ಬೋಧಕ ಭೋಲೆ ಬಾಬಾ ಅವರ ಸತ್ಸಂಗದ ಸಂಘಟನಾ ಸಮಿತಿಯ ಆರು ಸದಸ್ಯರನ್ನು ಉತ್ತರ ಪ್ರದೇಶ ಪೊಲೀಸರು ಗುರುವಾರ ಬಂಧಿಸಿದ್ದಾರೆ. ಬಂಧಿತರಲ್ಲಿ ಇಬ್ಬರು ಮಹಿಳೆಯರು ಸೇರಿದ್ದಾರೆ. ಎಫ್‌ಐಆರ್‌ನಲ್ಲಿ ಹೆಸರಿಸಲಾದ ಏಕೈಕ ಆರೋಪಿ ತಲೆಮರೆಸಿಕೊಂಡಿದ್ದು, ನಾರಾಯಣ ಸಕರ್ ಹರಿ ಮತ್ತು ಭೋಲೆ ಬಾಬಾ ಎಂದೂ ಕರೆಯಲ್ಪಡುವ ಸೂರಜ್‌ಪಾಲ್‌ನನ್ನು ತನಿಖೆಯ ಸಮಯದಲ್ಲಿ ಅಗತ್ಯವಿದ್ದಲ್ಲಿ ಪ್ರಶ್ನಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ.
ಬಂಧಿತ ಎಲ್ಲ ಆರು ಮಂದಿ ಸತ್ಸಂಗದಲ್ಲಿ ಸೇವಾದಾರರಾಗಿ (ಸ್ವಯಂಸೇವಕರು) ಕೆಲಸ ಮಾಡುತಿದ್ದವರು ಎಂದು ಇನ್ಸ್‌ಪೆಕ್ಟರ್ ಜನರಲ್ ಆಫ್ ಪೋಲೀಸ್ (ಅಲಿಘರ್ ರೇಂಜ್) ಶಲಭ್ ಮಾಥುರ್ ಸುದ್ದಿಗಾರರಿಗೆ ತಿಳಿಸಿದರು. ತಲೆ ಮರೆಸಿಕೊಂಡಿರುವ ದೇವ್ ಪ್ರಕಾಶ್ ಮಾನಕರ್ ಬಂಧನಕ್ಕೆ ಸುಳಿವು ನೀಡುವವರಿಗೆ 1 ಲಕ್ಷ ಬಹುಮಾನವನ್ನು ಶೀಘ್ರದಲ್ಲೇ ಘೋಷಿಸಲಾಗುವುದು ಮತ್ತು ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ವಿರುದ್ಧ ಜಾಮೀನು ರಹಿತ ವಾರಂಟ್ (ಎನ್‌ಬಿಡಬ್ಲ್ಯು) ಸಹ ಹೊರಡಿಸಲಾಗುವುದು ಎಂದು ಅವರು ಹೇಳಿದರು. ಬಂಧಿತರನ್ನು ರಾಮ್ ಲಡೈತೆ (50), ಉಪೇಂದ್ರ ಸಿಂಗ್ ಯಾದವ್ (62), ಮೇಘ್ ಸಿಂಗ್ (61), ಮುಖೇಶ್ ಕುಮಾರ್ (38), ಮತ್ತು ಮಹಿಳೆಯರಾದ ಮಂಜು ಯಾದವ್ (30) ಮತ್ತು ಮಂಜು ದೇವಿ (40) ಎಂದು ಪೊಲೀಸರು ಗುರುತಿಸಿದ್ದಾರೆ.
ಬುಧವಾರ ರಾತ್ರಿ, ಪೊಲೀಸರು ಮೈನ್‌ಪುರಿಯಲ್ಲಿರುವ ಧಾರ್ಮಿಕ ಬೋಧಕ ಜಗತ್ ಗುರು ಸಾಕರ್ ವಿಶ್ವಹಾರಿ ಭೋಲೆ ಬಾಬಾ ಅವರ ಆಶ್ರಮಕ್ಕೆ ತೆರಳಿ ಶೋಧ ನಡೆಸಿದಾಗ ಬೋಲೆನಾಥ ಅವರು ಅಲ್ಲಿ ಇರಲಿಲ್ಲ . ಭದ್ರತಾ ವ್ಯವಸ್ಥೆಗಳನ್ನು ಪರಿಶೀಲಿಸಲು ಅವರು ಅಲ್ಲಿಗೆ ಹೋಗಿದ್ದರು ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಉತ್ತರ ಪ್ರದೇಶ ಸರ್ಕಾರವು ಹತ್ರಾಸ್ ದುರಂತದ ತನಿಖೆಗಾಗಿ ನಿವೃತ್ತ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ಮೂವರು ಸದಸ್ಯರ ನ್ಯಾಯಾಂಗ ಆಯೋಗವನ್ನು ರಚಿಸಿದ್ದು ಕಾಲ್ತುಳಿತದ ಹಿಂದೆ “ಪಿತೂರಿ” ಇರುವ ಸಾಧ್ಯತೆಯನ್ನು ಪರಿಶೀಲಿಸುತ್ತಿದೆ.
HD Devegowda: ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಯಲ್ಲಿ ಬುಕ್ ಓದುತ್ತ ಕುಳಿತ ದೇವೇಗೌಡ್ರು..!!
ಜ್ವರ ಹಾಗೂ ಯೂರಿನ್ ಸೋಂಕಿನಿಂದ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ್ರು ಚೇತರಿಸಿಕೊಂಡಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಮುಂದಿನ ಕೆಲವು ದಿನಗಳ...
Read moreDetails