ವಿದ್ಯಾರ್ಥಿಗಳು ತಮ್ಮ ತಲೆಯನ್ನು ಮುಚ್ಚಿಕೊಳ್ಳಲು ಸಮವಸ್ತ್ರದ ಜೊತೆಗೆ ಹಿಜಾಬ್ (ದುಪಟ್ಟಾ) ಬಳಸಲು ಅವಕಾಶ ನೀಡುವಂತೆ ಕೋರಿ ಅರ್ಜಿದಾರರೊಬ್ಬರು ಸಲ್ಲಿಸಿದ ಅರ್ಜಿಗೆ ಪ್ರತಿಕ್ರಿಯಿಸಲು ಕರ್ನಾಟಕ ಹೈಕೋರ್ಟ್ ಬುಧವಾರ ರಾಜ್ಯ ಸರ್ಕಾರಕ್ಕೆ ಎರಡು ದಿನಗಳ ಕಾಲಾವಕಾಶವನ್ನು ನೀಡಿದೆ.
ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಬುಧವಾರ ರಾಜ್ಯ ವಿಧಾನಸಭೆಯಲ್ಲಿ ಮಾತನಾಡಿದ್ದು, ಹಿಜಾಬ್ ಕುರಿತು ಹೈಕೋರ್ಟ್ ಮಧ್ಯಂತರ ಆದೇಶಕ್ಕೆ ತಮ್ಮ ಸರ್ಕಾರ ಬದ್ಧವಾಗಿರುತ್ತದೆ. ನಮ್ಮ ಸರ್ಕಾರವು ಹೈಕೋರ್ಟ್ ಆದೇಶವನ್ನು ಪಾಲಿಸುತ್ತದೆ ಎಂದು ಅವರು ಹೇಳಿದರು.