ಸರ್ಕಾರದಿಂದ ಜಿಂದಾಲ್ಗೆ ಭೂಮಿ ಮಾರಾಟ- ದಾಖಲೆಸಲ್ಲಿಸುವಂತೆ ಹೈಕೋರ್ಟ್ ಆದೇಶ

ಕರ್ನಾಟಕ ಸರ್ಕಾರದಿಂದ ಜಿಂದಾಲ್ ಸ್ಟೀಲ್  ಕಂಪನಿಗೆ 3,677 ಎಕರೆ ಭೂಮಿ ಮಾರಾಟ ಮಾಡುವ ನಿರ್ಧಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ರಾಜ್ಯ ಸರ್ಕಾರದಿಂದ ಸ್ಪಷ್ಟನೆ ಕೋರಿದೆ. ಈ ಸಂಬಂಧ ದಾಖಲೆಗಳನ್ನು ಸಲ್ಲಿಸುವಂತೆ  ನಿರ್ದೇಶಿಸಿದೆ.

ನಗರದ ಬಿಎಂ ಲೇಔಟ್‌ನ ನಿವಾಸಿ ಕೆ.ಎ.ಪಾಲ್ ಅವರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಓಕಾ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರ ವಿಭಾಗೀಯ ಪೀಠ ಈ ಆದೇಶವನ್ನು  ಹೊರಡಿಸಿದೆ.

ಸರ್ಕಾರದ  ಮುಖ್ಯ ಕಾರ್ಯದರ್ಶಿ, ಹಣಕಾಸು, ಗೃಹ, ಕಂದಾಯ ಇಲಾಖೆಗಳ ಹೆಚ್ಚುವರಿ ಮುಖ್ಯ ಕಾರ್ಯದರ್ಶಿಗಳಿಗೆ ಹಾಗು ಕಾನೂನು, ಗಣಿ ಮತ್ತು ಭೂವಿಜ್ಞಾನ, ಅರಣ್ಯ, ಪರಿಸರ ವಿಜ್ಞಾನ ವಿಭಾಗಗಳ ಪ್ರಧಾನ ಕಾರ್ಯದರ್ಶಿಗಳಿಗೆ ನ್ಯಾಯಾಲಯ ನೋಟಿಸ್ ಜಾರಿಗೊಳಿಸಿದೆ.

3,677 ಎಕರೆ ಭೂಮಿಯನ್ನು ಬಳ್ಳಾರಿಯ  ಜಿಂದಾಲ್‌ ಕಂಪನಿಗೆ ಎಕರೆಗೆ 1.22 ಲಕ್ಷ ರೂ.ಗಳ ಕಡಿಮೆ ಬೆಲೆಗೆ ಮಾರಾಟ ಮಾಡುವ ಸರ್ಕಾರದ ನಿರ್ಧಾರವನ್ನು ಅರ್ಜಿದಾರರು ಪ್ರಶ್ನಿಸಿದ್ದರು.

ಮೂಲ- NIE

Related posts

Latest posts

ಬಡವರಿಗೆ ನೆರವಾಗುವುದನ್ನು ತಡೆಯುವ ಪೊಲೀಸ್ ಅಧಿಕಾರಿಗಳಿಗೆ ಬಿಜೆಪಿ ಬ್ಯಾಡ್ಜ್, ಬಾವುಟ ಕೊಡಿ; ಸರಕಾರದ ವಿರುದ್ಧ ಡಿಕೆಶಿ ಗರಂ

'ಬಿಜೆಪಿ ನಾಯಕರು ಜನರ ತೆರಿಗೆ ಹಣದಲ್ಲಿ ನೀಡುವ ಸರ್ಕಾರಿ ಆಹಾರ ಕಿಟ್, ಔಷಧಿ ಮೇಲೆ ತಮ್ಮ ಹಾಗೂ ಪ್ರಧಾನಿ ಫೋಟೋ ಹಾಕಿಕೊಂಡು ಪ್ರಚಾರ ಪಡೆಯುತ್ತಿದ್ದರೆ, ಕಾಂಗ್ರೆಸ್ ನಾಯಕರು, ಕಾರ್ಯಕರ್ತರು ತಮ್ಮ ಶ್ರಮಪಟ್ಟು ದುಡಿದ...

ಸುರಕ್ಷಿತವಾಗಿ ಲಾಕ್‌ಡೌನ್ ತೆರವುಗೊಳಿಸಲು ಸರ್ಕಾರಕ್ಕೆ 10 ಶಿಫಾರಸು ನೀಡಿದ ತಜ್ಞರ ತಂಡ SAGE

ಕರ್ನಾಟಕದಲ್ಲಿ ಕರೋನಾ ನಿಯಂತ್ರಿಸಲು ಹೇರಿರುವ ಲಾಕ್‌ಡೌನ್ ಅನ್ನು ಹೇಗೆ ಸುರಕ್ಷಿತವಾಗಿ ಹಾಗೂ ಸೂಕ್ತವಾಗಿ ತೆರವುಗೊಳಿಸಬಹುದೆಂದು ತಜ್ಞರ ತಂಡವು ಸರ್ಕಾರಕ್ಕೆ ಹತ್ತು ಶಿಫಾರಸುಗಳನ್ನು ನೀಡಿದೆ. ಕೋವಿಡ್ ವಿಪತ್ತಿನ ವಿರುದ್ಧದ ಹೋರಾಟಕ್ಕೆ ರೂಪುಗೊಂಡ SAGE (ಸಮಾಜಮುಖಿ ಕಾರ್ಯಪ್ರವೃತ್ತ...

ಬೆಲೆ ಏರಿಕೆ ಮಾಡಿ ಸರ್ಕಾರ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದೆ- ಡಿ.ಕೆ ಶಿವಕುಮಾರ್

 ಇಂಧನ ಬೆಲೆ ಏರಿಕೆ ಹಿನ್ನೆಲೆ,  ರಾಜ್ಯಾದ್ಯಂತ ಜೂನ್‌ 11 ರಿಂದ 15 ರವರೆಗೆ '100 ನಾಟ್ ಔಟ್' ಹೆಸರಲ್ಲಿ ಕಾಂಗ್ರೆಸ್‌ ಪಕ್ಷದಿಂದ ಆಂದೋಲನ ನಡೆಸಲಾಗುತ್ತಿದೆ. ರಾಜ್ಯಾದ್ಯಂತ ಇಂದು 900ಕ್ಕೂ ಹೆಚ್ಚು ಜಿ.ಪಂ, ಹೋಬಳಿ...