• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ

Any Mind by Any Mind
June 6, 2023
in Top Story, ಇದೀಗ, ಕರ್ನಾಟಕ
0
5 ಜಿಲ್ಲೆಗಳ ಮುಖಂಡರ ಜತೆ ಸರಣಿ ಸಭೆ ನಡೆಸಿದ ಹೆಚ್.ಡಿ.ದೇವೇಗೌಡ ಹಾಗೂ ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram


ಆತ್ಮಾವಲೋಕನ ಸಭೆಯಲ್ಲಿ ಮುಖಂಡರಿಗೆ ಸ್ಥೈರ್ಯ ತುಂಬಿದ ವರಿಷ್ಠರು

ADVERTISEMENT

ಬೆಂಗಳೂರು: ಈ ಸೋಲು ಶಾಶ್ವತ ಅಲ್ಲ, ತಾತ್ಕಾಲಿಕ. ದೃತಿಗೆಡದೆ ಪಕ್ಷವನ್ನು ಮರಳಿ ಕಟ್ಟೋಣ. ನಿಮ್ಮ ಜತೆ ನಾವಿದ್ದೇವೆ, ನಿಮ್ಮ ಜತೆ ಹಗಲಿರುಳು ಶ್ರಮಿಸುತ್ತೇವೆ ಎಂದು ಜೆಡಿಎಸ್ ಪಕ್ಷದ ವರಿಷ್ಠ ನಾಯಕರಾದ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಧೈರ್ಯ ತುಂಬಿದರು.

ವಿಧಾನಸಭೆ ಫಲಿತಾಂಶದ ನಂತರ ಪಕ್ಷದ ಸಂಘಟನೆಯ ಕಡೆ ಗಮನ ನೀಡಿರುವ ಇಬ್ಬರೂ ನಾಯಕರು ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು, ರಾಮನಗರ ಜಿಲ್ಲೆಗಳ ಮುಖಂಡರ ಜತೆ ಆತ್ಮಾವಲೋಕನ ಸಭೆಗಳನ್ನು ನಡೆಸಿದರು. ಬೆಳಗ್ಗೆಯಿಂದಲೇ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಒಂದೊಂದೇ ಜಿಲ್ಲೆಯ ಸರಣಿ ಸಭೆಗಳನ್ನು ನಡೆಸಿದ ವರಿಷ್ಠರು, ಎಲ್ಲಾ ಜಿಲ್ಲಾ ಮುಖಂಡರಿಗೆ ಕೆಲ ಮಹತ್ವದ ಅಂಶಗಳ ಬಗ್ಗೆ ಕಿವಿಮಾತು ಹೇಳಿದರು.

ಮಾಜಿ ಪ್ರಧಾನಿಗಳು ಹೇಳಿಕೆ; ಮುಂದೆ ಲೋಕಸಭೆ ಚುನಾವಣೆ ಬರುತ್ತಿದೆ. ಜತೆಗೆ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆಯು ಬರುತ್ತದೆ. ಬೆಂಗಳೂರಿನಲ್ಲಿ ಬಿಬಿಎಂಪಿ ಚುನಾವಣೆಯೂ ನಡೆಯಲಿದೆ. ನಮ್ಮ ಗುರಿ ಈ ಚುನಾವಣೆಗಳೇ ಆಗಿರಬೇಕು. ಇದಕ್ಕೆ ಪೂರಕವಾಗಿ ಪಕ್ಷ ಸಂಘಟನೆ ಮಾಡಬೇಕು ಹಾಗೂ ಜನರ ಜತೆ ಇದ್ದು ಕೆಲಸ ಮಾಡಬೇಕು. ಆ ನಿಟ್ಟಿನಲ್ಲಿ ತಾಲೂಕು, ಜಿಲ್ಲಾ ಸಮಿತಿಗಳು ಬದ್ಧತೆಯಿಂದ ದುಡಿಮೆ ಮಾಡಬೇಕು.

ನಮ್ಮ ಪಕ್ಷಕ್ಕೆ ಎಲ್ಲಿ ನೆಲೆ ಇದೆ ಎನ್ನುವುದು ನಮಗೆ ಗೊತ್ತಿದೆ. ಆ ನೆಲೆಯನ್ನು ಭದ್ರ ಮಾಡಿಕೊಂಡು ಅದನ್ನು ವಿಸ್ತರಿಸಬೇಕು. ಅದಕ್ಕೆ ನಾವು ತುರ್ತಾಗಿ ಮಾಡಬೇಕಿರುವ ಕೆಲಸ ಎಂದರೆ ಹಿರಿಯರ ಜತೆಗೆ ಯುವಕರಿಗೂ ಜವಾಬ್ದಾರಿ ನೀಡಬೇಕು. ಪ್ರಮುಖ ಜವಾಬ್ದಾರಿಗಳನ್ನು ಯುವಕರಿಗೆ ನೀಡಬೇಕು. ಅಷ್ಟೇ ಅಲ್ಲ, ಯುವಕರ ಬಗ್ಗೆ ಹಿರಿಯರು ಪ್ರೀತಿ, ಔದಾರ್ಯತೆಯಿಂದ ವರ್ತಿಸಬೇಕು. ಜಿಲ್ಲಾ ಘಟಕಗಳಲ್ಲಿ ಮಾರ್ಪಾಡು ಹಾಗೂ ಸುಧಾರಣೆಗಳನ್ನು ನಾವು ತರಬೇಕಿದೆ.

ಈ ಸೋಲು ದೊಡ್ಡ ಗೆಲುವಿಗೆ ನಾಂದಿ: ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷಕ್ಕೆ ಹಿನ್ನೆಡೆ ಆಗಿದೆ ನಿಜ, ಆದರೆ; ಈ ಸೋಲು ಮುಂದೆ ದೊಡ್ಡ ಗೆಲುವಿಗೆ ನಾಂದಿ ಆಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಕಾಂಗ್ರೆಸ್ ಸರಕಾರ ಗ್ಯಾರಂಟಿಗಳನ್ನು ಹೇಳಿ ಜನರಿಗೆ ಯಾಮಾರಿಸುತ್ತಿದೆ. ಇದರ ವಿರುದ್ಧ ನಾವು ಹೋರಾಟ ಮಾಡಬೇಕಿದೆ. ಜನರ ಜತೆ ಪ್ರಾಮಾಣಿಕವಾಗಿ ನಿಂತರೆ ಅವರೇ ನಮ್ಮ ಪಕ್ಷಕ್ಕೆ ಶಕ್ತಿ ತುಂಬುತ್ತಾರೆ.

ಇಂಥ ಎಷ್ಟೋ ಸೋಲುಗಳನ್ನು ಪಕ್ಷ ಜೀರ್ಣಿಸಿಕೊಂಡಿದೆ. 1989ರಲ್ಲಿ ದೇವೇಗೌಡರು ಎರಡು ಕಡೆ ಸೋತರು. ಅದಾದ ಐದು ವರ್ಷದಲ್ಲಿ ಪಕ್ಷ ಪೂರ್ಣ ಪಡೆದು ಅವರು ಮುಖ್ಯಮಂತ್ರಿ ಆದರು. ಆಮೇಲೆ ಲೋಕಸಭೆ ಚುನಾವಣೆಯಲ್ಲಿ 16 ಕ್ಷೇತ್ರ ಗೆದ್ದು ದೇವೇಗೌಡರು ದೇಶದ ಪ್ರಧಾನಿಯೂ ಆದರು. 1999ರಲ್ಲಿ ನಮ್ಮ ಪಕ್ಷಕ್ಕೆ ಹತ್ತೇ ಕ್ಷೇತ್ರಗಳು ಬಂದವು. ನಂತರದ ಚುನಾವಣೆಯಲ್ಲಿ 58 ಶಾಸಕರನ್ನು ಗೆದ್ದಿತ್ತು. 2013ರಲ್ಲಿ 40 ಕ್ಷೇತ್ರಗಳಲ್ಲಿ ಪಕ್ಷ ಗೆದ್ದಿತ್ತು. ಇದೆಲ್ಲವನ್ನೂ ನಾವು ಅರ್ಥ ಮಾಡಿಕೊಳ್ಳಬೇಕು.

ಆತ್ಮಾವಲೋಕನ ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯ ಕೆ.ಎ.ತಿಪ್ಪೇಸ್ವಾಮಿ ಅವರು ಸೇರಿದಂತೆ ಅಷ್ಟೂ ಜಿಲ್ಲೆಗಳ ಶಾಸಕರು, ಪರಾಜಿತ ಅಭ್ಯರ್ಥಿಗಳು, ಜಿಲ್ಲಾಧ್ಯಕ್ಷರು, ತಾಲೂಕು ಅಧ್ಯಕ್ಷರು ಈ ಸಭೆಯಲ್ಲಿ ಭಾಗಿಯಾಗಿದ್ದರು.

Tags: BJPBJP GovernmentCongress PartycongressvsbjpHD DevegowdaHDKJDSjdskarnatakalatestnewsmeetings with the leaders of 5 districtsPMModi
Previous Post

ಅಹವಾಲು ಸ್ವೀಕರಿಸುವಂತೆ ಬಿಬಿಎಂಪಿ ಆಯುಕ್ತರಿಗೆ ಒತ್ತಾಯ

Next Post

ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ

ದಲಿತ, ಹಿಂದುಳಿದ ವರ್ಗಗಳ ಮಠಾಧೀಶರ ಒಕ್ಕೂಟದಿಂದ ಸಿಎಂಗೆ ಸನ್ಮಾನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada