ಚುನಾವಣೆಯ ದಿನಾಂಕ ಸನಿಹವಾಗುತ್ತಿದ್ದು, ರಾಜ್ಯದ ಮೂರು ಉಪಚುನಾವಣಾ (By election) ಕಣ ದಿನೇ ದಿನೇ ರಂಗೇರುತ್ತಿದೆ. ಮೂರೂ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಳ್ಳುವ ಕಸರತ್ತು ನಡೆಸುತ್ತಿದ್ದು, ಇಂದಿನಿಂದ ಘಟಾನುಘಟಿ ನಾಯಕರು ಈ ಕ್ಷೇತ್ರಗಳಲ್ಲಿ ಮತಬೇಟೆಗೆ ಇಳಿಯಲಿದ್ದಾರೆ. ಇಂದು ಸಿಎಂ ಸಿದ್ದರಾಮಯ್ಯ (Cm siddaramaiah) ಮತ್ತು ಡಿಸಿಎಂ ಡಿ.ಕೆ ಶಿವಕುಮಾರ್ (Dcm dk shivakumar) ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಅಬ್ಬರದ ಪ್ರಚಾರ ಮಾಡಲಿದ್ದಾರೆ.

ಶಿಗ್ಗಾಂವಿಯಲ್ಲಿ ಎರಡು ದಿನಗಳ ಕಾಲ ಕಾಂಗ್ರೆಸ್ ಅಭ್ಯರ್ಥಿಯಾದ ಯಾಸೀರ್ ಖಾನ್ ಪಠಾಣ್ (Yasir khan patan) ಪರವಾಗಿ ಸಿದ್ದರಾಮಯ್ಯ ಬಿರುಸಿನ ಪ್ರಚಾರ ನಡೆಸಲಿದ್ದಾರೆ. ಇನ್ನು ಹೈವೋಲ್ವೇಜ್ ಕ್ಷೇತ್ರ ಚನ್ನಪಟ್ಟಣದಲ್ಲಿ (Channapattana) ಡಿಸಿಎಂ ಡಿ.ಕೆ ಶಿವಕುಮಾರ್ ಇಡೀ ದಿನ ಕಾಂಗ್ರೆಸ್ ಅಭ್ಯರ್ಥಿಯಾದ ಸಿ.ಪಿ.ಯೋಗೇಶ್ವರ್ (Cp yogeshwar) ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಇನ್ನು ಮಾಜಿ ಪ್ರಧಾನಿ ದೇವೇಗೌಡರು (Devegowda) ಕೂಡ ಮೊಮ್ಮಗನನ್ನು ಗೆಲ್ಲಿಸಿಕೊಂಡು ಬರಲು ಅಖಾಡಕ್ಕೆ ಎಂಟ್ರಿಕೊಡ್ತಿದ್ದಾರೆ. ಇಂದಿನಿಂದ ಚನ್ನಪಟ್ಟಣ ಕ್ಷೇತ್ರದಲ್ಲಿ ನಿಖಿಲ್ ಪರ ದೇವೇಗೌಡರು ಮತಯಾಚನೆ ಮಾಡಲಿದ್ದಾರೆ.