ಅಬಕಾರಿ ಇಲಾಖೆಯಿಂದ ಲೈಸೆನ್ಸ್ ಪಡೆದು ವ್ಯಾಪಾರವಹಿವಾಟು ನಡೆಸುವ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ಸಮಯದ ನಿಗದಿ ಇದೆ
ಎಚ್.ಡಿ. ಕೋಟೆಯಲ್ಲಿ ಅಕ್ರಮ ಮದ್ಯ ಮಾರಾಟ ಮಾಡುತ್ತಿರುವ ಆರೋಪ ಕೇಳಿ ಬಂದಿದ್ದು, ಸಾರ್ವಜನಿಕ ಸ್ಥಳದಲ್ಲೇ ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದರು ಅಬಕಾರಿ ಇಲಾಖೆ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂಬ ಬಗ್ಗೆ ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪಟ್ಟಣದ ಸರ್ಕಾರಿ ಬಸ್ ನಿಲ್ದಾಣದ ಎದುರು ದಿನನಿತ್ಯ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎಂದು ಆರೋಪಿಸಲಾಗಿದೆ. ಪ್ರತಿನಿತ್ಯ ಬೆಳಗ್ಗೆ 6 ಗಂಟೆಗೆ ಅಕ್ರಮ ಮದ್ಯ ಮಾರಾಟ ಆರಂಭವಾಗಲಿದ್ದು, ಇದನ್ನ ಖರೀದಿಸಲು ಮದ್ಯವೆಸನಿಗಳು ಮುಗಿಬೀಳುತ್ತಾರೆ ಎನ್ನಲಾಗಿದೆ. ಅಬಕಾರಿ ಇಲಾಖೆಯಿಂದ ಲೈಸೆನ್ಸ್ ಪಡೆದು ವ್ಯಾಪಾರವಹಿವಾಟು ನಡೆಸುವ ಬಾರ್ ಮತ್ತು ರೆಸ್ಟೋರೆಂಟ್‌ಗಳಲ್ಲಿ ಮದ್ಯ ಮಾರಾಟಕ್ಕೆ ಸಮಯದ ನಿಗದಿ ಇದೆ.
ಆದರೆ ಪಟ್ಟಣದ ಬಸ್ ನಿಲ್ದಾಣದ ಮುಂದೆ ಯಾವುದೇ ಅಡೆತಡೆ ಇಲ್ಲದೆ ಅಕ್ರಮ ಮದ್ಯ ಮಾರಾಟ ಮಾಡಲಾಗುತ್ತಿದೆ ಎನ್ನಲಾಗಿದೆ.ದಿನನಿತ್ಯವೂ ಸಾವಿರಾರು ಮಂದಿ ಓಡಾಡುವ ಸರ್ಕಾರಿ ಬಸ್ ನಿಲ್ದಾಣದ ಎದುರುನಲ್ಲೇ ಈ ಪರಿಸ್ಥಿತಿ ಇದ್ದರೆ, ಗ್ರಾಮೀಣ ಪ್ರದೇಶಗಳಲ್ಲಿನ ಪರಿಸ್ಥಿತಿ ಏನು? ಎಂಬುದು ಸಾರ್ವಜನಿಕರ ಪ್ರಶ್ನೆಯಾಗಿದೆ.
ಅಲ್ಲದೇ ಸಾರ್ವಜನಿಕ ಸ್ಥಳದಲ್ಲೇ ಈ ರೀತಿಯಾಗಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದ್ದರೂ, ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮಕೈಗೊಳ್ಳುತ್ತಿಲ್ಲ ಎಂಬ ಆರೋಪವಿದೆ. ದಿನನಿತ್ಯ ಕೂಲಿ ಮಾಡಿ ಜೀವನ ನಡೆಸುವ ಬಡ ಕೂಲಿ ಕಾರ್ಮಿಕರು ಈ ಅಕ್ರಮ ಮದ್ಯ ಖರೀದಿಗೆ ಮುಂದಾಗುತ್ತಿದ್ದು, ಇದರಿಂದ ಅವರುಗಳ ಆರೋಗ್ಯದ ಮೇಲೂ ಸಹ ದುಷ್ಪರಿಣಾಮ ಬೀರುತ್ತಿದೆ. ಹೀಗಾಗಿ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನವಹಿಸಿ ಅಕ್ರಮ ಮದ್ಯ ಮಾರಾಟಕ್ಕೆ ಕಡಿವಾಣ ಹಾಕಬೇಕಿದೆ ಎಂದು ಸ್ಥಳೀಯ ಸಾರ್ವಜನಿಕರು ಆಗ್ರಹಿಸಿದ್ದಾರೆ.












