ಚನ್ನಪಟ್ಟಣ ಉಪ ಚುನಾವಣೆಯಲ್ಲಿ (Channapattana bypoll) ಕಾಂಗ್ರೆಸ್ ನಿಂದ ಗೆದ್ದು ಶಾಸಕರಾಗಿರುವ ಸಿಪಿ ಯೋಗೇಶ್ವರ್ (Cp Yogeshwar) ಇತ್ತೇಚೆಗೆ ಜೆಡಿಎಸ್ ಶಾಸಕರನ್ನ ಕಾಂಗ್ರೆಸ್ ಗೆ ಕರೆ ತರುವುದಾಗಿ ಸಿಪಿ ಯೋಗೇಶ್ವರ್ ಹೇಳಿದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD Kumaraswamy) ಅಲರ್ಟ್ ಆಗಿದ್ದಾರೆ.
ಹೀಗಾಗಿ ಜೆಡಿಎಸ್ ಶಾಸಕರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಲು ಕುಮಾರಸ್ವಾಮಿ ಮುಂದಾಗಿದ್ದಾರೆ.ನಾಳೆ ಹೆಚ್‌ಡಿಕೆ ಬಿಡದಿಯ ತೋಟದ ಮನೆಯಲ್ಲಿ ಜೆಡಿಎಸ್ ಶಾಸಕರ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ಸಿ.ಪಿ ಯೋಗೇಶ್ವರ್ ಹೇಳಿಕೆ, ಜೊತೆಗೆ ಟಿ.ದೇವೇಗೌಡರ ಅಸಮಾಧಾನ, ಜೆಡಿಎಸ್ ಪಕ್ಷ ಸಂಘಟನೆ ಕುರಿತು ಹೆಚ್‌ಡಿಕೆ ಚರ್ಚಿಸಲಿದ್ದಾರೆ. ಇದರ ಜೊತೆಗೆ ಚನ್ನಪಟ್ಟಣ ಉಪಚುನಾವಣೆಯಲ್ಲಿ ನಿಖಿಲ್ ಪರ ಕೆಲಸ ಮಾಡಿದ್ದ ನಾಯಕರಿಗೆ ಧನ್ಯವಾದ ತಿಳಿಸಲಿದ್ದಾರೆ.