• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home Top Story

ಶಾಸಕ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನಕ್ಕೆ HD ಕುಮಾರಸ್ವಾಮಿ ಖಂಡನೆ

ಪ್ರತಿಧ್ವನಿ by ಪ್ರತಿಧ್ವನಿ
December 20, 2024
in Top Story, ಇತರೆ / Others, ಕರ್ನಾಟಕ, ರಾಜಕೀಯ
0
ಶಾಸಕ ಸಿ.ಟಿ.ರವಿ ಮೇಲೆ ಹಲ್ಲೆ ಯತ್ನಕ್ಕೆ HD ಕುಮಾರಸ್ವಾಮಿ ಖಂಡನೆ
Share on WhatsAppShare on FacebookShare on Telegram

ನವದೆಹಲಿ: ಬೆಳಗಾವಿಯ ಸುವರ್ಣಸೌಧದಲ್ಲಿಯೇ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಅವರ ಮೇಲೆ ನಡೆದಿರುವ ಹಲ್ಲೆ ಯತ್ನವನ್ನು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಖಂಡಿಸಿದ್ದಾರೆ.ಈ ಬಗ್ಗೆ ಮಾಧ್ಯಮ ಹೇಳಿಕೆ ನೀಡಿರುವ ಕೇಂದ್ರ ಸಚಿವರು; ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು ಎಂದು ಕಿಡಿಕಾರಿದ್ದಾರೆ.

ADVERTISEMENT

ಕರ್ನಾಟಕದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ ಎನ್ನುವುದು ನನ್ನ ಅನುಮಾನ. ಪ್ರತಿಪಕ್ಷ ನಾಯಕರಿಗೇ ರಕ್ಷಣೆ ಇಲ್ಲ ಎಂದ ಮೇಲೆ ವಿಧಾನಮಂಡಲದಲ್ಲಿ ಯಾರ ಭಾವಚಿತ್ರ ಹಿಡಿದರೇನು ಫಲ? ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅವರ ಮೇಲೆ ಸುವರ್ಣಸೌಧದಲ್ಲಿಯೇ ಹಲ್ಲೆ ಯತ್ನ ನಡೆದಿರುವುದು ಖಂಡನೀಯ ಎಂದು ಅವರು ಹೇಳಿದ್ದಾರೆ.

ಗೌರವಾನ್ವಿತ ಸಚಿವೆ ಬಗ್ಗೆ ಸಿ.ಟಿ.ರವಿ ಅವರು ಅಶ್ಲೀಲ ಪದ ಬಳಸಿದ್ದರೆ ಅದನ್ನು ನಾನು ಸಮರ್ಥಿಸುವುದಿಲ್ಲ. ಅದಕ್ಕೆ ಪ್ರತಿಯಾಗಿ ಸಚಿವೆ ವರ್ತಿಸಿದ ರೀತಿ, ಅವರ ಬೆಂಬಲಿಗರ ಗೂಂಡಾಗಿರಿ ಅತಿರೇಖದ್ದು. ಎಲ್ಲದ್ದಕ್ಕೂ ಡಾ.ಅಂಬೇಡ್ಕರ್ ಅವರ ಸಂವಿಧಾನದಡಿಯಲ್ಲಿ ರೂಪಿತವಾದ ಕಾನೂನಿದೆ. ಸಭಾಪತಿಗಳೂ ರೂಲಿಂಗ್ ನೀಡಿದ್ದಾರೆ. ಆ ನಂತರವೂ ನಡೆಯುತ್ತಿರುವ ಘಟನಾವಳಿಗಳು, ಸಭಾಪತಿಗಳನ್ನೇ ನಿಂದಿಸುವ ಕೆಟ್ಟ ನಡವಳಿಕೆಗಳು ಆಘಾತಕಾರಿ. ಸರಕಾರದಲ್ಲಿರುವ ಕೆಲವರು ಈ ಘಟನೆಗೆ ಜ್ವಾಲೆ ಸ್ವರೂಪ ನೀಡಿ ಪ್ರಚೋದಿಸುತ್ತಿರುವ ಬಗ್ಗೆ ಕೇಂದ್ರ ಸಚಿವರು ಕಳವಳ ವ್ಯಕ್ತಪಡಿಸಿದ್ದಾರೆ.

ಮೀಸಲಾತಿಗಾಗಿ ಪಂಚಮಸಾಲಿ ಮುಖಂಡರು ಸುವರ್ಣಸೌಧದ ಮುಂದೆ ಪ್ರತಿಭಟಿಸಿದ್ದಕ್ಕೆ ಪೊಲೀಸರಿಂದ ಲಾಠಿಚಾರ್ಜ್ ಮಾಡಿಸಿ ಪೌರುಷ ಮೆರೆದಿತ್ತು ಕಾಂಗ್ರೆಸ್ ಸರಕಾರ. ಅಂದು ಪೊಲೀಸರ ಪ್ರತಾಪ ಹೇಳತೀರದು. ಗೇಟಿನಲ್ಲಿಯೇ ತಡೆದು ಆ ಪಂಚಮಸಾಲಿ ಜನರಿಗೆ ರಕ್ತ ಬರುವಂತೆ ಲಾಠಿ ಬೀಸಿದ ಪೊಲೀಸರೇ.., ಈ ಗೂಂಡಾಗಳು ಸುವರ್ಣಸೌಧದೊಳಕ್ಕೆ ಹೇಗೆ ಬಂದರು? ಅಥವಾ… ಅವರೇ ನಿಮ್ಮ ಕಣ್ತಪ್ಪಿಸಿ ಒಳ ನುಸಳಿದರೋ ಅಥವಾ ಸರಕಾರವೇ ಷಡ್ಯಂತ್ರ ಮಾಡಿ ಒಳ ನುಗ್ಗಿಸಿತೋ? ಇಲ್ಲವೇ ಯಾವುದಾದರೂ ಕಲ್ಲು ಬಂಡೆಯ ಕರಾಮತ್ತು, ಕುಮ್ಮಕ್ಕು ಇದೆಯಾ? ಎಂದು ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ.

Siddaramaiah: ಸಿ.ಟಿ ರವಿ ಬಗ್ಗೆ ಸಿಎಂ ಸಿದ್ದರಾಮಯ್ಯ  ಹೇಳಿದ್ದೇನು..! #ctravi #lakshmihebbalkar #pratidhvani

ಸದನದ ಕಾರಿಡಾರಿನಲ್ಲಿಯೇ ಆ ಗೂಂಡಾಗಳು ಶಾಸಕರನ್ನು ಅಟ್ಟಾಡಿಸುತ್ತಾರೆ, ಕೊಲೆಗೆತ್ನಿಸುತ್ತಾರೆ, ಮಾರ್ಷಲ್’ಗಳನ್ನು ಕೆಳಕ್ಕೆ ಕೆಡವಿ ಕ್ರಿಮಿನಲ್ ಪ್ರವೃತ್ತಿ ಮೆರೆಯುತ್ತಾರೆಂದರೆ ಬಂಡೆ ಬೆಂಬಲವಿದೆ ಎಂದೇ ಅರ್ಥ. ಆ ಗೌರವಾನ್ವಿತ ಸಚಿವೆಯ ಆಪ್ತ ಸಹಾಯಕ ಶಾಸಕರ ಮೇಲೇರಿ ಹೋಗುವ, ಕಾರಿಡಾರಿನ ಕಬ್ಬಿಣದ ಬಾಗಿಲನ್ನೇ ಮುರಿಯಲೆತ್ನಿಸಿ ಹಲ್ಲೆಗೆ ಯತ್ನಿಸುವ ದೃಶ್ಯಗಳು ದೃಶ್ಯ ಮಾಧ್ಯಮಗಳಲ್ಲಿ ಪ್ರಸಾರವಾಗಿವೆ. ರಾಜ್ಯದಲ್ಲಿ ಆಡಳಿತ ಸುರಕ್ಷಿತ ಕೈಗಳಲ್ಲಿ ಇಲ್ಲ ಎನ್ನುವುದಕ್ಕೆ ಆ ದೃಶ್ಯಗಳೇ ಸಾಕ್ಷಿ ಎಂದು ಅವರು ಹೇಳಿದ್ದಾರೆ.

ಸುವರ್ಣಸೌಧಕ್ಕೆ ನುಗ್ಗಿದ ಗೂಂಡಾಗಳನ್ನು ಕೂಡಲೇ ಬಂಧಿಸಿ, ಅವರ ವಿರುದ್ಧ ರೌಡಿಪಟ್ಟಿ ತೆರೆಯಬೇಕು. ಸಮಾಜದ ಶಾಂತಿಗೆ ಬೆದರಿಕೆಯಾಗಿರುವ ಆ ಕಿಡಿಗೇಡಿಗಳನ್ನು ಸುವರ್ಣಸೌಧ, ವಿಧಾನಸೌಧದಿಂದ ಶಾಶ್ವತವಾಗಿ ನಿರ್ಬಂಧಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದ್ದಾರೆ.

ಪೊಲೀಸರೇ.., ಇಡೀ ಪ್ರಕರಣದ ಬಗ್ಗೆ ನೀವು ಉತ್ತರಿಸಬೇಕಾಗುತ್ತದೆ. ಇಡೀ ರಾತ್ರಿ ಸಿ.ಟಿ.ರವಿ ಅವರನ್ನು ಪೊಲೀಸ್ ಜೀಪಿನಲ್ಲಿ ಸುತ್ತಿಸುತ್ತೀರಿ ಎಂದರೆ, ಇದಕ್ಕೆ ಯಾರ ಫರ್ಮಾನು ಕಾರಣ? ಈ ಗೂಂಡಾಗಳ ಗ್ಯಾಂಗ್ ಲೀಡರ್ ಯಾರು? ನಿಮಗೆ ಎಲ್ಲಾ ಮಾಹಿತಿ ಇರುತ್ತದೆ, ನೀವೂ ಸತ್ಯ ಹೇಳಬೇಕಾಗುತ್ತದೆ ಎಂದು ಅವರು ಗುಡುಗಿದ್ದಾರೆ.

Tags: attack on Vidhan Parishad member CT RaviBelgaum.BJPCongress Partykumaraswamy questioned.lathi-chargedNew DelhiSuvarnasaudhaUnion minister HD Kumaraswamy
Previous Post

ಮತ್ತೆ ಜೈಲಿಗೆ ಹೋದ ಚೈತ್ರಾ ಕುಂದಾಪುರ – ಈ ವಾರದ ಕ್ಯಾಪ್ಟನ್ ಯಾರು ಗೊತ್ತಾ?

Next Post

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

Related Posts

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
0

ಭೂ ಸ್ವಾಧೀನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅಂತಿಮ ಅಧಿಸೂಚನೆಯಾಗಿದ್ದು, ಈ ಬಗ್ಗೆ ಇರುವ ಕಾನೂನು ತೊಡಕುಗಳನ್ನು ನಿವಾರಿಸಿ ರೈತರ ಸಭೆ ಕರೆಯಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು...

Read moreDetails

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

July 4, 2025

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

July 4, 2025
Next Post
87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಚಾಲನೆ

Recent News

Top Story

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

by ಪ್ರತಿಧ್ವನಿ
July 4, 2025
Top Story

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

by ಪ್ರತಿಧ್ವನಿ
July 4, 2025
Top Story

Prajwal Devaraj: ಪೋಸ್ಟರ್ ರಿಲೀಸ್ ಮಾಡಿ ಪ್ರಜ್ವಲ್ ದೇವರಾಜ್ ಅವರಿಗೆ ಹುಟ್ಟುಹಬ್ಬದ ಶುಭಾಷಯ ತಿಳಿಸಿದ “ಮಾಫಿಯಾ” ಚಿತ್ರತಂಡ

by ಪ್ರತಿಧ್ವನಿ
July 4, 2025
Top Story

Darshan: ಚಾಮುಂಡಿ ತಾಯಿಯ ದರ್ಶನ ಪಡೆದ ದರ್ಶನ್ ದಂಪತಿ – ಆಷಾಢ ಶುಕ್ರವಾರದ ವಿಶೇಷ ಪೂಜೆಯಲ್ಲಿ ದಚ್ಚು ಭಾಗಿ 

by Chetan
July 4, 2025
Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 
Top Story

Siddaramaiah: ದೇವನಹಳ್ಳಿಯಲ್ಲಿ ಭೂಸ್ವಾದೀನಕ್ಕೆ ರೈತರ ತೀವ್ರವ ವಿರೋಧ – ಮನವೊಲಿಸಲು ಮುಂದಾದ ಸಿಎಂ ಸಿದ್ದು 

by Chetan
July 4, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

CM Siddaramaiah: ಕಾನೂನು ತೊಡಕು ನಿವಾರಿಸಿ ರೈತರ ಸಭೆ-ಮುಖ್ಯಮಂತ್ರಿ ಸಿದ್ದರಾಮಯ್ಯ

July 4, 2025

Lakshmi Hebbalkar: ಅಂಗನವಾಡಿ ನೇಮಕಾತಿ ಇನ್ನಷ್ಟು ಸರಳ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!