• Home
  • About Us
  • ಕರ್ನಾಟಕ
Wednesday, October 29, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಇದೀಗ

ಡಿಸಿಎಂ ಡಿಕೆ ಶಿವಕುಮಾರ್ ವಿರುದ್ಧ ಎಚ್.ಡಿ.ಕುಮಾರಸ್ವಾಮಿ ವಾಗ್ದಾಳಿ

ಪ್ರತಿಧ್ವನಿ by ಪ್ರತಿಧ್ವನಿ
August 22, 2023
in ಇದೀಗ, ಕರ್ನಾಟಕ, ರಾಜಕೀಯ
0
ಎಚ್‌.ಡಿ ಕುಮಾರಸ್ವಾಮಿ

ಎಚ್‌.ಡಿ ಕುಮಾರಸ್ವಾಮಿ ಮತ್ತು ಡಿ.ಕೆ.ಶಿವಕುಮಾರ್‌

Share on WhatsAppShare on FacebookShare on Telegram

ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ದೇವೇಗೌಡರ ಕುಟುಂಬವನ್ನು ಬಿಟ್ಟು ಯಾರನ್ನು ಬೇಕಾದರೂ ಖರೀದಿ ಮಾಡುವ ಶಕ್ತಿ ಇದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ನೇರ ಆರೋಪ ಮಾಡಿದರು.

ADVERTISEMENT

ಯಶವಂತಪುರದಲ್ಲಿ ಜೆಡಿಎಸ್ ಕಾರ್ಯಕರ್ತರ ಸಭೆಯಲ್ಲಿ ಭಾಗಹಿಸುವುದಕ್ಕೆ ಮುನ್ನ ಮಾಧ್ಯಮಗಳ ಜತೆ ಮಾತನಾಡಿದರು ಅವರು. ಈ ಸಂದರ್ಭದಲ್ಲಿ ಅವರು ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ತಮ್ಮ ವಿರುದ್ಧ ದಾಖಲೆ ಬಿಡುಗಡೆ ಮಾಡಿದರೆ ಭಯ ಇಲ್ಲ ಎಂದು ಭಂಡತನದ ಹೇಳಿಕೆ ನೀಡಿದ ಡಿ.ಕೆ.ಶಿವಕುಮಾರ್ ಅವರ ಹೇಳಿಕೆಯ ಬಗ್ಗೆ ಖಾರವಾಗಿ ಪ್ರತಿಕ್ರಿಯಿಸಿದ ಮಾಜಿ ಮುಖ್ಯಮಂತ್ರಿ ಅವರು; ” ಅವರು ಯಾರಿಗೂ ಹೆದರಲ್ಲ. ಅವರು ಯಾರನ್ನು ಬೇಕಾದರೂ ಖರೀದಿ ಮಾಡುತ್ತಾರೆ. ಬಿಜೆಪಿಯ ದೆಹಲಿಯ ನಾಯಕರನ್ನೇ ಖರೀದಿ ಮಾಡಿದ್ದರೂ ಅಚ್ಚರಿ ಇಲ್ಲ. ಯಾರನ್ನು ಬೇಕಾದರೂ ಅವರು ಖರೀದಿ ಮಾಡಬಹುದು, ಅವರಿಗೆ ಆ ಶಕ್ತಿ ಇದೆ ಎಂದು ಮಾರ್ಮಿಕವಾಗಿ ಹೇಳಿದರು.

ಬಿಚ್ಚೊದು ಬಿಚ್ಚೊದು ಎಂದು ಅವರು ಪದೇಪದೆ ಹೇಳುತ್ತಿದ್ದಾರೆ. ಹೊರಗೆ ಬರಬೇಕಾದದ್ದು ಬಂದೇ ಬರುತ್ತದೆ. ಈವರೆಗೂ ಮಾಡಿಕೊಂಡಿದ್ದು ಸಾಕು. ಇನ್ನಾದರೂ ಲೂಟಿ ಹೊಡೆಯೊದು ನಿಲ್ಲಿಸಿ, ಅಣ್ಣ ಅಂತಿರಲ್ಲ. ಅಣ್ಣನಾಗಿ ಹೇಳುತ್ತೇನೆ. ಇನ್ನಾದರೂ ಈ ಲೂಟಿ ನಿಲ್ಲಿಸಿ. ಈ ಕಿವಿಮಾತು ಕೇಳಿದರೆ ನಿಮ್ಮನ್ನು ತಮ್ಮ ಎಂದು ಒಪ್ಪಿಕೊಳ್ಳುತ್ತೇನೆ ಎಂದು ಡಿಸಿಎಂ ಡಿಕೆಶಿ ಅವರ ವಿರುದ್ಧ ಕುಮಾರಸ್ವಾಮಿ ಅವರು ವಾಗ್ದಾಳಿ ನಡೆಸಿದರು.

ನೈಸ್ ಅಕ್ರಮಗಳ ದಾಖಲೆ ಶೀಘ್ರವೇ ಬಿಡುಗಡೆ ಮಾಡುತ್ತೇನೆ. ಇದರಲ್ಲಿ ಸಂಶಯ ಇಲ್ಲ. ಈ ಯೋಜನೆ ಹೆಸರಲ್ಲಿ ಏನೇನು ಆಗಿದೆ? ಎಷ್ಟೆಲ್ಲ ಅಕ್ರಮ ನಡೆದಿದೆ? ಯಾರೆಲ್ಲಾ ಫಲಾನುಭವಿಗಳು ಇದ್ದಾರೆ? ಎಲ್ಲವನ್ನೂ ಜನರ ಮುಂದೆ ಇಡುತ್ತೇನೆ. ಕೆಲವರ ಹಣೆಬರಹ ಆಚೆಗೆ ಬರುತ್ತದೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ದಾಖಲೆ ಬಿಡುಗಡೆ ಸಮಸ್ಯೆ ಇದೆ. ಬುಧವಾರ ಚಂದ್ರಯಾನ -3 ರೋವರ್ ಚಂದ್ರನ ಮೇಲೆ ಇಳಿಯಲಿದೆ. ಎಲ್ಲರಂತೆ ನನಗೂ ಕುತೂಹಲ ಇದೆ. ಪ್ರತಿಯೊಬ್ಬರ ಗಮನವೂ ಆ ಕಡೆಯೇ ಇರುತ್ತದೆ. ಹೀಗಾಗಿ ಕೆಲ ದಿನದಲ್ಲಿ ದಾಖಲೆಗಳನ್ನು ಬಿಡುಗಡೆ ಮಾಡುತ್ತೇನೆ ಎಂದರು ಅವರು.

ಕೆಲವರು ನೈಸ್ ಯೋಜನೆ ದೇವೇಗೌಡರ ಪಾಪದ ಕೂಸು ಎಂದು ಹೇಳಿದ್ದಾರೆ. ಅವರಿಗೆ ಗೊತ್ತಿರಲಿ, ಯೋಜನೆಯ ಮೂಲ ಒಪ್ಪಂದ ಎನಿದೆ? ಅದನ್ನು ಅವರು ಓದಿಕೊಳ್ಳಬೇಕು. ಅದನ್ನು ಪೂರ್ಣವಾಗಿ ತಿಳಿದು ಮಾತನಾಡಿದರೆ ಚೆನ್ನಾಗಿರುತ್ತದೆ ಎಂದರು ಅವರು.

ದೇವೇಗೌಡರು ಒಪ್ಪಂದ ಮಾಡಿಕೊಂಡಿದ್ದು ರಸ್ತೆ ಮಾಡಲಿ ಎಂದು, ಬೆಂಗಳೂರು ಮತ್ತು ಮೈಸೂರು ನಡುವೆ ಓಡಾಡುವ ಜನರಿಗೆ ಒಳ್ಳೆಯದಾಗಲಿ ಎಂದು. ಈ ಮಹಾನುಭಾವರು ಮಾಡಿದ್ದೇನು? ಮೂಲ ಒಪ್ಪಂದವನ್ನು ಹೇಗೆಲ್ಲ ತಿರುಚಿದರು, ಇವರ ಮಹಾನ್ ಸಾಧನೆಗಳನ್ನೆಲ್ಲ ಬಿಡುಗಡೆ ಮಾಡುತ್ತೇನೆ ಎಂದು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ನಾನು ಟಿ.ಬಿ.ಜಯಚಂದ್ರ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ. ಅವರು ಯೋಜನೆ ಅಕ್ರಮದ ಬಗ್ಗೆ ಮಾತಾಡಿದ್ದಾರೆ. ಈ ಅಕ್ರಮದ ಬಗ್ಗೆ ವರದಿ ಕೊಟ್ಟ ಸದನ ಸಮಿತಿಯ ನೇತೃತ್ವ ವಹಿಸಿದವರು ಕೂಡ ಅವರೇ. ಅದಕ್ಕಾಗಿಯೇ ನಾನು ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುತ್ತೇನೆ. ನೀವು ರೈತರ ಪರವಾಗಿ ಇದ್ದರೆ, ತಕ್ಷಣ ನೈಸ್ ಹೆಚ್ಚುವರಿ ಜಮೀನು ವಾಪಸ್ ಪಡೆದು ಮೂಲ ರೈತರಿಗೆ ನೀಡಿ ಎಂದರು.

ಕಾವೇರಿ ಸರ್ವಪಕ್ಷ ಸಭೆ ಹಾಜರಾಗುತ್ತೇನೆ:

ಕಾವೇರಿ ವಿಚಾರದ ಬಗ್ಗೆ ಚರ್ಚೆ ನಡೆಸಲು ಕರೆಯಲಾಗುವ ಸರ್ವಪಕ್ಷ ಸಭೆಯಲ್ಲಿ ಭಾಗಿಯಾಗುತ್ತೆನೆ. ಅಲ್ಲಿ ನಮ್ಮ ಪಕ್ಷದ ನಿಲುವನ್ನು ಸ್ಪಷ್ಟವಾಗಿ ಹೇಳಲಾಗುವುದು ಎಂದು ಕುಮಾರಸ್ವಾಮಿ ಅವರು ತಿಳಿಸಿದರು.

ಸರ್ವಪಕ್ಷ ಸಭೆಗೆ ಹೋಗಬೇಕಾದದ್ದು ನನ್ನ ಕರ್ತವ್ಯ. ತಮಿಳುನಾಡಿಗೆ ನೀರು ಬಿಟ್ಟ ಕೂಡಲೇ ಮೊದಲು ದನಿ ಎತ್ತಿದವನೇ ನಾನು. ಸರ್ವಪಕ್ಷ ಸಭೆ ಕರೆಯಬೇಕು ಎಂದು ಒತ್ತಾಯ ಮಾಡಿದವನು ಕೂಡ ನಾನೇ ಎಂದು ಅವರು ಹೇಳಿದರು.

ಆದರೆ, ರಾಜ್ಯದ ಹಿತ ಪರಿಗಣನೆಗೆ ಕ್ರಮ ಕೈಗೊಳ್ಳಬೇಕಾದ ಜಲಸಂಪನ್ಮೂಲ ಸಚಿವರೂ ಆದ ಉಪ ಮುಖ್ಯಮಂತ್ರಿ ಅವರು, ಯಾವುದೋ ಹಳೆಯ ಟ್ವಿಟ್ ಪ್ರಸ್ತಾಪ ಮಾಡಿದ್ದಾರೆ. ಆ ಟ್ವೀಟ್ ನಲ್ಲಿ ಏನು ಹೇಳಿದ್ದೇನೆ? ಎರಡೂ ರಾಜ್ಯಗಳ ಜನರು ಅಣ್ಣತಮ್ಮಂದಿರ ರೀತಿ ಇರಬೇಕೆಂದು ಹೇಳಿದ್ದೇನೆ. ಕಾನೂನು ವ್ಯಾಪ್ತಿಯಲ್ಲಿ ನೂರಾರು ವರ್ಷ ಹೋರಾಟ ಮಾಡಿ ಆಗಿದೆ. ಈಗ ಕೊಟ್ಟು ತೆಗೆದುಕೊಳ್ಳುವ ಮನಸ್ಸು ಇರಬೇಕು. ತಮಿಳುನಾಡಿನ ರೈತರಿಗೆ ನಾವು ಎಂದೂ ದ್ರೋಹ ಮಾಡಿಲ್ಲ, ನಮ್ಮ ರಾಜ್ಯದ ರೈತರಿಗೆ ಅನ್ಯಾಯ ಮಾಡಬೇಡಿ ಅಂತ ಹೇಳಿದ್ದೇನಿ. ಸ್ಟಾಲೀನ್ ಅವರಿಗೆ ಈ ಮಾತು ಹೇಳಿದ್ದೀನಿ. ಇದರಲ್ಲಿ ಹುಳುಕು ಹುಡುಕುವಂತಹ ಅಂಶ ಏನಿದೆ? ಎಂದು ಆಕ್ರೋಶ ವ್ಯಕ್ತಪಡಿಸಿದರು ಕುಮಾರಸ್ವಾಮಿ ಅವರು.

ಸುಳ್ಳು ಹೇಳಿಕೊಂಡು ರಾಜಕಾರಣ ಮಾಡಬೇಡಿ. ನಾನು ನನ್ನ ಟೈಟ್ ನಲ್ಲಿ ಎಲ್ಲಾದರೂ ನೀರು ಬಿಡ್ತೀನಿ ಅಥವಾ ಬಿಡಿ ಎಂದು ಹೇಳಿದ್ದೀನಾ? ಉನ್ನತ ಸ್ಥಾನದಲ್ಲಿ ಇದ್ದೀರಾ, ಹೀಗೆ ಸುಳ್ಳು ಹೇಳುವುದಾ? ಪೆನ್ ಪೆನ್ ಕೊಡಿ ಎಂದು ನಾನು ಜನರನ್ನು ಕೆಳಿದೆನಾ? ನಮ್ಮ ರಾಜ್ಯವನ್ನು ಹಾಳು ಮಾಡಲು ಪೆನ್ ಕೇಳಿದಿರಾ ನೀವು? ಹುಡುಗಾಟ ಆಡಬೇಡಿ, ಆ ಸ್ಥಾನದ ಗಾಂಭೀರ್ಯತೆ ಕಾಪಾಡಿಕೊಳ್ಳಿ. ಆ ಸ್ಥಾನದ ಗೌರವವನ್ನು ಉಳಿಸಿಕೊಳ್ಳಿ ಎಂದು ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರ ಹೆಸರೇಳದೇ ಟೀಕಾಪ್ರಹಾರ ನಡೆಸಿದರು.

ಜೆಡಿಎಸ್ ಶಾಸಕರು ಪಕ್ಷ ಬಿಡಲ್ಲ:

ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷದ ಶಾಸಕರನ್ನು ಸೆಳೆಯುತ್ತಿದೆಯಲ್ಲ ಎನ್ನುವ ಪ್ರಶ್ನೆಗೆ ಖಾರವಾಗಿ ಉತ್ತರಿಸಿದ ಅವರು, ನಮ್ಮ ಶಾಸಕರು ಪಕ್ಷ ಬಿಡುವ ಸಾಧ್ಯತೆ ಇಲ್ಲ. ಕಾಂಗ್ರೆಸ್ ನವರು ಯಾಕೆ ಈ ರೀತಿಯ ಚರ್ಚೆ ಹುಟ್ಟುಹಾಕಿದ್ದಾರೆ ಎಂದರೇ ಅವರದೇ ಪಕ್ಷದ 30 ಶಾಸಕರು ಪಕ್ಷ ಬಿಡಲು ಮುಂದಾಗಿದ್ದಾರೆ. ಅದನ್ನು ಸರಿ ಮಾಡಿಕೊಳ್ಳಲು ಸಾಧ್ಯ ಅಗದ ಕಾಂಗ್ರೆಸ್ ನವರು ಬೇರೆ ಪಕ್ಷಗಳ ಶಾಸಕರು ಬರುತ್ತಿದ್ದಾರೆ ಎಂದು ಗುಲ್ಲು ಹಬ್ಬಿಸುತ್ತಿದ್ದಾರೆ. ಕಾಂಗ್ರೆಸ್ ಶಾಸಕರು ಪಕ್ಷ ಬಿಡುವುದನ್ನ ತಡೆಯಲು ಈ ಗುಮ್ಮ ಬಿಟ್ಟುಕೊಂಡು ತಿರುಗಾಡುತ್ತಿದ್ದಾರೆ ಎಂದು ತಿರುಗೇಟು ಕೊಟ್ಟರು.

ಇಂಥ ವಾತಾವರಣದಲ್ಲಿ ಮೊದಲನೇ ಘರ್ ವಾಪಸ್ಸಿ ಮಾಡಿಕೊಂಡಿದ್ದಾರೆ. ಆದರೆ, ನಾನು ಹೋಗಲ್ಲ ಎಂದ ಸೋಮಶೇಖರ್ ಹೇಳುತ್ತಿದ್ದಾರೆ. ಅವರು ಮೈಸೂರು ಉಸ್ತುವಾರಿ ಸಚಿವರಾಗಿದ್ದರು. ಮಂತ್ರಿಯಾಗಿ ಅವರು ಕಲ್ಲೇಳಿದ್ದಕ್ಕೆಲ್ಲಾ ಸಹಿ ಹಾಕಿದ್ದರು ಅಲ್ಲವೇ? ಅಭಿವೃದ್ಧಿಗಾಗಿ ಕಾಂಗ್ರೆಸ್ ಗೆ ಹೋಗ್ತಾ ಇದ್ದೀನಿ ಅಂತ ಹೇಳ್ತಾ ಇದ್ದಾರೆ. ಹಾಗಾದರೆ ಇವರು ಸಂಪೂರ್ಣವಾಗಿ ಅಭಿವೃದ್ಧಿ ಕೆಲಸ ಮಾಡಿಲ್ಲ ಅಂತ ಆಯ್ತು ಅಲ್ಲವೇ?ಮೂರು ವರ್ಷಗಳಿಂದ ಈ ಕ್ಷೇತ್ರಕ್ಕೆ ಅವರು ಏನು ಮಾಡಿದರು? ಕ್ಷೇತ್ರದ ಅಭಿವೃದ್ಧಿ ಮಾಡಿಲ್ಲ ಅಲ್ಲವೇ? ಎಂದು ಮಾಜಿ ಮುಖ್ಯಮಂತ್ರಿ ಅವರು ಟಾಂಗ್ ಕೊಟ್ಟರು.

ಚೆಲುವರಾಯಸ್ವಾಮಿ ವಿರುದ್ಧದ ಆರೋಪಗಳ ಬಗ್ಗೆಯೂ ತನಿಖೆ ಮಾಡಿ:

ಕೃಷಿ ಸಚಿವ ಚೆಲುವರಾಯ ಸ್ವಾಮಿ ಅವರ ವಿರುದ್ಧ ಅಧಿಕಾರಿಗಳ ಬರೆದಿರುವ ದೂರಿನ ಪತ್ರದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರ ನೀಡಿದ ಅವರು; ಯಾಕೆ ಆ ಪತ್ರ ಬರೆಯಲಾಗಿದೆ? ಸಿಐಡಿ ಅವರು ಆ ಪತ್ರ ನಕಲಿನಾ? ಅಸಲಿನಾ ಅಂತ ತನಿಖೆ ಮಾಡ್ತಾ ಇದ್ದಾರೆ. ಆದರೆ, ಪತ್ರದಲ್ಲಿ ಉಲ್ಲೇಖ ಮಾಡಿರುವ ಅಂಶಗಳ ಬಗ್ಗೆ ಅವರು ತನಿಖೆ ಮಾಡುತ್ತಿಲ್ಲ. ಅಧಿಕಾರಿಗಳು ದುಡ್ಡು ಕೊಟ್ಟಿರುವ ಬಗ್ಗೆ ಹೇಳೋಕೆ ಆಗುತ್ತೆಯೇ? ಈ ಲಂಚ ವ್ಯವಹಾರದ ವಿಚಾರದ ಸತ್ಯವನ್ನು ಜನರ ಮುಂದೆ ಇಡಿ. ನಾನು ಇದು ಚಲುವರಾಯಸ್ವಾಮಿ ಅವರ ವಿಚಾರ ಅಂತ ಹೇಳುತ್ತಿಲ್ಲ ಎಂದರು.

Tags: DK ShivakumarHD KumaraswamyJDSಎಚ್‌.ಡಿ.ಕುಮಾರಸ್ವಾಮಿಕಾಂಗ್ರೆಸ್‌ಜೆಡಿಎಸ್‌ಡಿ.ಕೆ.ಶಿವಕುಮಾರ್‌
Previous Post

ಓಲಾ, ಉಬರ್‌ ವಿರುದ್ಧ ಪ್ರಕರಣ ದಾಖಲಿಸುವಂತೆ ಸಾರಿಗೆ ಆಯುಕ್ತರಿಗೆ ಪತ್ರ

Next Post

ಗ್ರಾಮ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮೋಜಿನಿ ವ್ಯವಸ್ಥೆ ಸೇವೆಗಳು ಲಭ್ಯ: ಪ್ರಿಯಾಂಕ್ ಖರ್ಗೆ

Related Posts

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
0

“ಬೆಂಗಳೂರಿನ ಸಂಚಾರ ದಟ್ಟಣೆ ನಿವಾರಣೆಗೆ ಸಂಸದ ತೇಜಸ್ವಿ ಸೂರ್ಯ ಅವರು ಕೊಟ್ಟ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ. ಆದರೂ ಅವರ ಸಲಹೆಗಳನ್ನು ಗೌರವಿಸುತ್ತೇನೆ. ಅವುಗಳನ್ನು ಪರಿಶೀಲಿಸಲು ಅಧಿಕಾರಿಗಳಿಗೆ...

Read moreDetails
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

October 28, 2025

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

October 28, 2025
ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

ಈ ವಾರ ತೆರೆಗೆ ಬಹು ನಿರೀಕ್ಷಿತ “ಬ್ರ್ಯಾಟ್”(BRAT). .

October 28, 2025
Next Post
ಪ್ರಿಯಾಂಕ್‌ ಖರ್ಗೆ

ಗ್ರಾಮ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಮೋಜಿನಿ ವ್ಯವಸ್ಥೆ ಸೇವೆಗಳು ಲಭ್ಯ: ಪ್ರಿಯಾಂಕ್ ಖರ್ಗೆ

Please login to join discussion

Recent News

Top Story

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

by ಪ್ರತಿಧ್ವನಿ
October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ
Top Story

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

by ಪ್ರತಿಧ್ವನಿ
October 28, 2025
ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ
Top Story

ಕಲಾಲೋಕ ಮಳಿಗೆಗೆ ನವೆಂಬರಿನಲ್ಲಿ ಚಾಲನೆ: ಎಂ ಬಿ ಪಾಟೀಲ

by ಪ್ರತಿಧ್ವನಿ
October 28, 2025
Top Story

ಕರ್ನಾಟಕದಾದ್ಯಂತ ಹಾಗೂ ವಿದೇಶದಲ್ಲಿಯೂ ಬಿಡುಗಡೆಗೆ ಸಿದ್ದವಾದ “ಹೇ ಪ್ರಭು” ಚಿತ್ರ..

by ಪ್ರತಿಧ್ವನಿ
October 28, 2025
ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ
Top Story

ಬೀದಿ ನಾಯಿಗಳಿಗೆ ಬ್ರೇಕ್ ಹಾಕಲು ಮುಂದಾದ ಗದಗ-ಬೆಟಗೇರಿ ನಗರಸಭೆ

by ಪ್ರತಿಧ್ವನಿ
October 28, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

DK Shivakumar: ತೇಜಸ್ವಿ ಸೂರ್ಯ ಅವರ ಸಲಹೆಗಳಲ್ಲಿ ಪರ್ಯಾಯ ಪರಿಹಾರಗಳು ಕಾಣಲಿಲ್ಲ: ಡಿ.ಕೆ. ಶಿವಕುಮಾರ್

October 28, 2025
ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

ಅಂತಿಮ ಅಧಿಸೂಚನೆಗೆ ಶಾಸಕ ಶರತ್ ಬಚ್ಚೇಗೌಡ ಮನವಿ

October 28, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada