ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರಿಗೆ ತೀವ್ರ ಜ್ವರ ಕಾಣಿಸಿಕೊಂಡಿದ್ದು ಅವರನ್ನು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು ಅವರ ಆರೋಗ್ಯ ಸ್ಥಿರವಾಗಿದೆ ಎಂದು ಜಯನಗರ ಅಪೊಲೊ ಆಸ್ಪತ್ರೆ ತಿಳಿಸಿದೆ.
ಈ ಕುರಿತು ಬುಧವಾರ (ಆಗಸ್ಟ್ 30) ಪ್ರಕಟಣೆ ಹೊರಡಿಸಿರುವ ಆಸ್ಪತ್ರೆ, ತೀವ್ರ ಜ್ವರ ಹಿನ್ನೆಲೆ ಹೆಚ್ಚಿನ ಚಿಕಿತ್ಸೆ ಸಲುವಾಗಿ ಕುಮಾರಸ್ವಾಮಿ ಅವರನ್ನು ತೀವ್ರ ನಿಗಾ ಘಟಕದಲ್ಲಿರಿಸಲಾಗಿದೆ. ಕುಮಾರಸ್ವಾಮಿ ಅವರ ಆರೋಗ್ಯದ ಮೇಲೆ ತೀವ್ರ ನಿಗಾ ವಹಿಸಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಬಳಲಿಕೆ ಮತ್ತು ಅಸ್ವಸ್ಥೆತೆಯಿಂದ ಬೆಳಗಿನ ಜಾವ 3.40ರ ಸುಮಾರಿಗೆ ಕುಮಾರಸ್ವಾಮಿ ಆಸ್ಪತ್ರೆಗೆ ದಾಖಲಾದರು. ಕೂಡಲೇ ತಪಾಸಣೆ ನಡೆಸಿ, ಚಿಕಿತ್ಸೆ ನೀಡಲಾಗಿದೆ. ಚಿಕಿತ್ಸೆಗೆ ಕುಮಾರಸ್ವಾಮಿ ಉತ್ತಮವಾಗಿ ಸ್ಪಂದಿಸುತ್ತಿದ್ದಾರೆ ಎಂದು ಆಸ್ಪತ್ರೆ ತಿಳಿಸಿದೆ.
ಸದ್ಯ, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದ್ದು, ಈ ಸಂಬಂಧ ಕಾಲ ಕಾಲಕ್ಕೆ ಮಾಹಿತಿ ನೀಡಲಾಗುವುದು ಎಂದೂ ತಿಳಿಸಲಾಗಿದೆ.