• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, May 20, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಗೃಹಲಕ್ಷ್ಮಿ‌ ಯೋಜನೆಯ ₹5000 ಕೋಟಿ ಹಣ ಎಲ್ಲಿ ಹೋಯ್ತು..? ಸಿಎಂಗೆ ಹೆಚ್‌ಡಿಕೆ ಪ್ರಶ್ನೆ

ಪ್ರತಿಧ್ವನಿ by ಪ್ರತಿಧ್ವನಿ
December 22, 2025
in Top Story, ಕರ್ನಾಟಕ, ರಾಜಕೀಯ
0
ಗೃಹಲಕ್ಷ್ಮಿ‌ ಯೋಜನೆಯ ₹5000 ಕೋಟಿ ಹಣ ಎಲ್ಲಿ ಹೋಯ್ತು..? ಸಿಎಂಗೆ ಹೆಚ್‌ಡಿಕೆ ಪ್ರಶ್ನೆ
Share on WhatsAppShare on FacebookShare on Telegram

ಹಾಸನ: ರಾಜ್ಯದ ಮಹಿಳೆಯರ ಬ್ಯಾಂಕ್ ಖಾತೆಗೆ ಜಮಾ ಆಗಬೇಕಿದ್ದ ಎರಡು ತಿಂಗಳ ಗೃಹಲಕ್ಷ್ಮಿ(Gruhalakshmi Scheme) ಹಣ ಎಲ್ಲಿಗೆ ಹೋಯಿತು? ಅದರ ಬಗ್ಗೆ ರಾಜ್ಯ ಸರ್ಕಾರ(State Government)  ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ(HD Kumaraswamy) ಪ್ರಶ್ನಿಸಿದ್ದಾರೆ.

ADVERTISEMENT
HD Kumaraswamy : ಸಿದ್ದರಾಮಯ್ಯನಿಗೆ ಸವಾಲ್‌ ಹಾಕಿದ ಹೆಚ್.ಡಿ. ಕುಮಾರಸ್ವಾಮಿ.. #pratidhvani

ಹಾಸನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ ಕೊಡಬೇಕಿದ್ದ ಗೃಹಲಕ್ಷ್ಮಿ‌ ಹಣ ಎಲ್ಲಿ ಹೋಗಿದೆ? ಆ ಹಣ ಖಜಾನೆಯಲ್ಲಿ ಇದೆಯಾ? ಇಲ್ಲವಾ? ಎನ್ನುವ ಅಂಶವನ್ನು ಸ್ವತಃ ಹಣಕಾಸು ಖಾತೆ ಹೊಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಹೇಳಬೇಕು. ಅವರು ಮತ್ತು ಅವರ ಅವರ ಇಲಾಖೆಯ ಅಧಿಕಾರಿಗಳೇ ಇದಕ್ಕೆ ಜವಾಬ್ದಾರರು ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

HD Kumaraswamy: ಡಿಕೆ ಬ್ರದರ್ಸ್‌ಗೆ ಟಾಂಗ್‌ ಕೊಟ್ಟ ಹೆಚ್‌.ಡಿ.ಕೆ... #pratidhvani

ಗೃಹಲಕ್ಷ್ಮಿ ಯೋಜನೆಯ 5 ಸಾವಿರ ಕೋಟಿ ಹಣದ ಬಗ್ಗೆ ಮಾಹಿತಿ ಸರಿಯಾಗಿ ನೀಡಿಲ್ಲ. ಇದು ಸಣ್ಣ ವಿಚಾರವಲ್ಲ. ಇದು ಹೇಗಾಯಿತು ಎಂದು ಸಂಬಂಧಿತ ಸಚಿವರಿಂದ ಮಾಹಿತಿ ಪಡೆದಿದ್ದೀರಾ? ಆ ಸಚಿವರ ರಾಜೀನಾಮೆ ಕೇಳಿದ್ದೀರಾ? ಹೋಗಲಿ, ಯಾರಾದರೂ ಅಧಿಕಾರಿಯನ್ನು ಇದಕ್ಕೆ ಹೊಣೆ ಮಾಡಿ ಅಮಾನತು ಮಾಡಿದ್ದೀರಾ? ಇಷ್ಟು ದೊಡ್ಡ ಮೊತ್ತದ ಹಣದ ಬಗ್ಗೆ ಎಷ್ಟು ಹಗುರವಾಗಿ ನಡೆದುಕೊಂಡಿದ್ದೀರಿ. ನೀವು ಪ್ರಖ್ಯಾತ ‌ಹಣಕಾಸು ಸಚಿವರು. ನಿಮ್ಮಂತ ಹಣಕಾಸು ಸಚಿವರು ಅಮೆರಿಕದಲ್ಲೂ ಇಲ್ಲ‌. ಡೊನಾಲ್ಡ್ ಟ್ರಂಪ್ ಅವರಿಗೂ ಇಂಥ ಹಣಕಾಸು ಮಂತ್ರಿ ಸಿಗಲ್ಲವೇನೋ ಎಂದು ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ.

Lakshmi Hebbalkar: ಸತ್ತವರ ಖಾತೆಗೂ ಗೃಹ ಲಕ್ಷ್ಮೀ ಹಣ ಹೋಗ್ತಿತ್ತು ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಮಾತು.!

ಕೇಂದ್ರ ಸಹಕಾರ ನೀಡುತ್ತಿಲ್ಲ ಎನ್ನುವುದು ಸುಳ್ಳು

ಅನುದಾನದಲ್ಲಿ ಕೇಂದ್ರ ಸಹಕಾರ ನೀಡುತ್ತಿಲ್ಲ ಎಂದು ರಾಜ್ಯ ಸರ್ಕಾರ ಹೇಳುವ ಬದಲು, ಕೇಂದ್ರದ ಮನವೊಲಿಸಲು ನೀವೇನು ಮಾಡಿದ್ದೀರಿ ಎಂಬುದನ್ನು ಹೇಳಿ. ರಾಜ್ಯದಲ್ಲಿ ಸರ್ಕಾರ ನಡೆಸುತ್ತಿರುವವರು ಸುಖಾಸುಮ್ಮನೆ ತಮ್ಮ ಹುಳುಕು ಮುಚ್ಚಿಟ್ಟುಕೊಳ್ಳಲು ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ. ಆದರೆ ತಾವು ಮಾಡುತ್ತಿರುವ ತಪ್ಪುಗಳನ್ನು ಮುಚ್ಚಿಡುತ್ತಿದ್ದಾರೆ ಎಂದರು.

Bhojegowda Comedy:  ಭೋಜೇಗೌಡರ ಕಾಮಿಡಿಗೆ ಪರಿಷತ್‍ನಲ್ಲಿನ ಸದಸ್ಯರ ನಗುವೋ ನಗು #pratidhvani

ಎತ್ತಿನಹೊಳೆ ಯೋಜನೆಯಲ್ಲಿ ಕೇಂದ್ರ ಸರ್ಕಾರ ಅಡ್ಡಿ ಮಾಡುತ್ತಿದ್ದಾರೆ ಎಂದು ರಾಜ್ಯ ಸರ್ಕಾರದ ಮಂತ್ರಿಗಳು ಆರೋಪ ಮಾಡುತ್ತಿದ್ದಾರೆ. ಆದರೆ, ಪರಿಸರಕ್ಕೆ ಸಂಬಂಧಿಸಿದ ನಿಯಮಗಳನ್ನು ಉಲ್ಲಂಘಿಸಿ, ಕಾನೂನು ಮೀರಿ ಅನೇಕ ಅನಧಿಕೃತ ಕಾಮಗಾರಿಗಳನ್ನು ನಡೆಸಿದ್ದಾರೆ. ಕೇಂದ್ರ ಪರಿಸರ ಸಚಿವಾಲಯ ಅದನ್ನು ಪ್ರಶ್ನೆ ಮಾಡಿದೆ. ಅದು ತಪ್ಪಾ? ನಾವು ಅಂತಹ ಕಾಮಗಾರಿಗಳನ್ನು ಮಾಡಿಲ್ಲ ಎಂದು ಸಂಬಂಧಿಸಿದ ಸಚಿವರು, ಅಧಿಕಾರಿಗಳು ಕೇಂದ್ರಕ್ಕೆ ಮನವರಿಕೆ ಮಾಡಿಕೊಡಲಿ. ಬೇಡ ಎಂದವರು ಯಾರು? ಎಂದು ಕುಮಾರಸ್ವಾಮಿ ಪ್ರಶ್ನಿಸಿದರು.

DK Shivakumar: ನನಗೂ ರಾಜಣ್ಣ ಆಪ್ತರೇ, ನಾವಿಬ್ಬರೂ ಬ್ರದರ್ಸ್ ಇದ್ದಂತೆ..! #knrajanna #congress #pratidhvani

ಕೇಂದ್ರದಿಂದ ಅನುದಾನ ಬರುತ್ತಿದೆ. ಅದರ ಬಳಕೆ ಮಾಡುವಲ್ಲಿ ರಾಜ್ಯ ಸರ್ಕಾರ ಪಾರದರ್ಶಕವಾಗಿಲ್ಲ. ಕೇಂದ್ರದಿಂದ ಬರುತ್ತಿರುವ ಅನುದಾನವನ್ನು ಸರಿಯಾಗಿ ಬಳಕೆ ಮಾಡುತ್ತಿಲ್ಲ ಹಾಗೂ ಅದಕ್ಕೆ ಪೂರಕವಾಗಿ ಮ್ಯಾಚಿಂಗ್ ಗ್ರಾಂಟ್ ಗಳನ್ನು ಕೊಡುತ್ತಿಲ್ಲ. ಹೋಗಲಿ, ಆ ಬಗ್ಗೆ ಕೇಂದ್ರ ಸರಕಾರಕ್ಕೆ ಮನವಿ ನೀಡಿದ್ದಾರ? ಅದೂ ಇಲ್ಲ. ತಪ್ಪು ತಮ್ಮ ಕಡೆ ಇಟ್ಟುಕೊಂಡು ನರೇಂದ್ರ ಮೋದಿ ಅವರ ಸರ್ಕಾರವನ್ನು ಟೀಕೆ ಮಾಡಿದರೆ ಏನು ಬರುತ್ತದೆ.

Belagavi Council Session 2025: ನಾನು ಸುಳ್ಳು ಹೇಳುವ ಪ್ರಶ್ನೆಯೇ ಇಲ್ಲ #pratidhvani

ಇವರ ಹಣೆಬರಕ್ಕೆ ಕೆಲಸ ಮಾಡುವ ಯೋಗ್ಯತೆ ಇಲ್ಲ. ಆದರೆ ಮಾತಿನಲ್ಲಿ ಎಲ್ಲವನ್ನು ತೋರಿಸುತ್ತಿದ್ದಾರೆ. ಹಾಸನ ಜಿಲ್ಲೆಗೆ ಲಗ್ಗೆ ಹಾಕಲು ಕಾಂಗ್ರೆಸ್ ಬಹಳ ವೇಗವಾಗಿದೆ. ಸ್ಟೇಜ್ ಗಳಲ್ಲಿ ಹಲವು ರೀತಿಯ ಬಾಣ ಬಿರುಸುಗಳನ್ನು ನೋಡುತ್ತಿದ್ದೇವೆ. ಯಾರು ಮಾಡದೇ ಇರುವ ಕಾರ್ಯ ಮಾಡಿದ್ದೇವೆ ಎಂಬ ಹೇಳಿಕೆ ನೀಡಿದ್ದಾರೆ. ಫಲಾನುಭವಿಗಳಿಗೆ ಎಲ್ಲವನ್ನೂ ನೀಡಿದ್ದೇವೆ ಎಂದು ಬಡಾಯಿ ಕೊಚ್ಚಿಕೊಳ್ಳುತ್ತಿದ್ದಾರೆ. ನಾನು ಇಡ್ಲಿ, ವಡೆ ನಾಟಿ ಕೋಳಿ ತಿಂದಿದ್ದರ ಬಗ್ಗೆ ಮಾತಾಡೊಲ್ಲ. ಅದು ಅವರ ಪಕ್ಷಕ್ಕೆ ಬಿಟ್ಟ ವಿಚಾರ ಎಂದು ಕೇಂದ್ರ ಸಚಿವರು ಕಾಂಗ್ರೆಸ್ ಸರಕಾರದ ವಿರುದ್ಧ ಚಾಟಿ ಬೀಸಿದರು.

Tags: BJPCM Siddaramaiahcongressgruhalakshmi schemeHD KumaraswamyJDSKarnataka PoliticsPolitics
Previous Post

Daily Horoscope: ಇಂದು ದಿಢೀರ್‌ ಹಣ ಗಳಿಸುವ ರಾಶಿಗಳಿವು..!

Next Post

ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ

Related Posts

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌
Top Story

ಇದೇ ಲಾಸ್ಟ್‌ ಇನ್ಮುಂದೆ ಜಿಬಿಎ ಎಲೆಕ್ಷನ್ ಗಡುವು ವಿಸ್ತರಿಸಲ್ಲಾ : ಸರ್ಕಾರಕ್ಕೆ ಸುಪ್ರೀಂ ಖಡಕ್‌ ವಾರ್ನ್..!‌

by ಪ್ರತಿಧ್ವನಿ
May 20, 2026
0

ಬೆಂಗಳೂರು : ಕರ್ನಾಟಕ ಸರ್ಕಾರ ಹಾಗೂ ರಾಜ್ಯ ಚುನಾವಣಾ ಆಯೋಗಕ್ಕೆ (SEC) ಬೆಂಗಳೂರಿನ ಐದು ನಗರ ಪಾಲಿಕೆಗಳ ಚುನಾವಣೆಯನ್ನು ಪೂರ್ಣಗೊಳಿಸಲು ಅಂತಿಮ ಅವಕಾಶವಾಗಿ ಆಗಸ್ಟ್ 31ರವರೆಗೆ ಹೆಚ್ಚುವರಿ ಕಾಲಾವಕಾಶ...

Read moreDetails
ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

ಕೆಡಿ ಗಳಿಸಿದ್ದು 23 ಕೋಟಿನಾ? ಇದು ಗೆಲುವಾ, ಸೋಲಾ?

May 20, 2026
ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

ಜೂ.ಎನ್‌ಟಿಆರ್‌ ಬರ್ತ್‌ಡೇಗೆ ಬಂತು ಡ್ರ್ಯಾಗನ್‌ ಗ್ಲಿಂಪ್ಸ್!‌ : ಚರ್ಚೆಗೆ ಕಾರಣವಾಯ್ತು ಪ್ರಶಾಂತ್‌ ನೀಲ್‌ ಸಿನಿಮಾ

May 20, 2026
ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

ಕೈ ಕೊಟ್ಟ ಹುಡುಗಿ : ಹೈಟೆನ್ಷನ್‌ ಕಂಬ ಹತ್ತಿ ಪ್ರಿಯತಮನ ರಂಪಾಟ..!

May 20, 2026
“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

“Welcome to Rome, My Friend ಎಂದ ಮೆಲೋನಿ : ಮೋದಿಗೆ ಇಟಲಿ ಪ್ರಧಾನಿ ಮಾಡಿದ ಪಾಠವೇನು..?

May 20, 2026
Next Post
ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ

ಪಾಕಿಸ್ತಾನಕ್ಕೆ ನೌಕಾಪಡೆಯ ರಹಸ್ಯ ಮಾಹಿತಿ ರವಾನೆ: ಉಡುಪಿಯಲ್ಲಿ ಮತ್ತೊಬ್ಬನ ಬಂಧನ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada