ಬಿಡದಿಯಲ್ಲಿ ನಡೆಯುತ್ತಿರುವ ಪುರಸಭೆ ಚುನಾವಣೆ ನಿಮಿತ್ತ ಸೋಮವಾರ ಮತದಾನ ಮಾಡಿದ ನಂತರ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ರಾಜ್ಯ/ಕೇಂದ್ರ ಬಿಜೆಪಿ ಸರ್ಕಾರ ಹಾಗೂ ಕಾಂಗ್ರೆಸ್ ನಾಯಕರ ವಿರುದ್ದ ತೀವ್ರ ವಾಗ್ದಾಳಿಯನ್ನ ನಡೆಸಿದ್ದಾರೆ.
ಪಂಚೆ ಕಟ್ಟಿದವರು ರೈತರು ಅಲ್ಲ ಎಂದಾದ ಮೇಲೆ ಪವಿತ್ರವಾದ ಕಾವೇರಿ ತಾಯಿ ಮುಂದೆ ನಿಂತು ನಾಟಕ ಮಾಡುವವರನ್ನು ಮಣ್ಣಿನ ಮಕ್ಕಳು ಎಂದು ಕರೆಯಬೇಕೆ? ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.
ನಾವೇನು ಮಣ್ಣಿನ ಮಕ್ಕಳು ಎಂದು ಎದೆ ಮೇಲೆ ಬೋರ್ಡ್ ಹಾಕಿಕೊಂಡಿಲ್ಲ. ನಮಗೆ ನಾಟಕ ಮಾಡಲು ಬರುವುದೂ ಇಲ್ಲ ಹಾಗೂ ಅದರ ಅಗತ್ಯ ನನಗಿಲ್ಲ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದ್ದಾರೆ. ಮಾತನಾಡುವ ವೇಳೆ ಎಲ್ಲಿಯೂ ಡಿ.ಕೆ.ಶಿವಕುಮಾರ್ ಹೆಸರು ಬಳಸದೇ ವಾಗ್ದಾಳಿ ನಡೆಸಿದ ಕುಮಾರಸ್ವಾಮಿ ಅವರು; ಈ ರಾಜ್ಯಕ್ಕೆ ಗೊತ್ತಿದೆ, ಕುಮಾರಸ್ವಾಮಿ ಕೊಡುಗೆ ಏನೆಂದು. ನೀರಾವರಿ ವಿಚಾರವಾಗಿ ದೇವೇಗೌಡರ ಕೊಡುಗೆ ಏನೆಂದು ಗೊತ್ತಿದೆ ಎಂದು ಹೇಳಿದ್ದಾರೆ.
ಮೊನ್ನೆ ಹಾಸನದಲ್ಲಿ ಅವರು ಹೇಳಿದ್ದಾರೆ, ಏನ್ ಪಂಚೆ ಹಾಕಿದವರೆಲ್ಲ ರೈತರ ಮಕ್ಕಳಾ? ನಾವು ಪಂಚೆ ಹಾಕಿದ್ದೇವೆ ನಾವು ರೈತರು ಎಂದಿದ್ದಾರೆ. ಅವರು ಆ ರೀತಿ ಹೇಳಿರುವುದು ರೈತರ ಕುರಿತ ಅವರ ಭಾವನೆಗಳೇನು ಎನ್ನುವುದು ಅರ್ಥವಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿಗಳು ಚಾಟಿ ಬೀಸಿದ್ದಾರೆ.

ರೈತರ ಮಕ್ಕಳು ಎಂದು ನಾವು ಎದೆ ಮೇಲೆ ಬೋರ್ಡ್ ಹಾಕಿಕೊಂಡಿಲ್ಲ. ಜನರೇ ಅವರವರ ಕೆಲಸ ನೋಡಿ ಬಿರುದು ಕೊಡುತ್ತಾರೆ.ಪಂಚೆ ಹಾಕಿಕೊಂಡು ಶೋ ಮಾಡಿದವರೆಲ್ಲ ರೈತರಾಗಲ್ಲ ಎಂದು ಅವರು ನೇರವಾಗಿ ಚುಚ್ಚಿದ್ದಾರೆ.
ತಲಕಾವೇರಿಯಲ್ಲಿ ಏನೆಲ್ಲಾ ನಡೆಯಿತು ಎನ್ನುವುದನ್ನು ನಾವು ನೋಡಿದ್ದೇವೆ. ಎಲ್ಲರನ್ನೂ ದೂರ ಕಳುಹಿಸಿ ಕಾವೇರಿ ನೀರಿಗೆ ಅಕ್ಷತೆ ಹಾಕೋದನ್ನು ಈ ರಾಜ್ಯದ ಜನ ಕಣ್ತುಂಬಿಕೊಂಡಿದ್ದಾರೆ. ಹಾಗೆಯೇ, ಮೆಟ್ಟಲಿಗೆ ನಮಸ್ಕಾರ ಮಾಡಿಕೊಂಡಿದನ್ನು ಕೂಡ ನೋಡಿದ್ದೇನೆ. ಅವರು ನರೇಂದ್ರ ಮೋದಿಯವರನ್ನು ಕಾಪಿ ಮಾಡಿದ್ದಾರೆ. ಇಂಥ ಆರ್ಟಿಫಿಷಿಯಲ್ ಹೋರಾಟಗಳು ನಡೆಯಲ್ಲ ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷ ಜನರನ್ನು ಪರಿವರ್ತನೆ ಮಾಡುವ ಸಲುವಾಗಿ ಹೋರಾಟ ಮಾಡುತ್ತಿಲ್ಲ. ಇದು ಕೇವಲ ಮತಕ್ಕಾಗಿ ನಡೆಯುತ್ತಿರುವ ಪಾದಯಾತ್ರೆ ಅಷ್ಟೇ. ಜನರನ್ನು ಯಾಮರಿಸಲು ಎಲ್ಲಾ ಸಂದರ್ಭದಲ್ಲಿಯೂ ಆಗಲ್ಲ. ಅದಕ್ಕೆ ಮೂಲ ಉದ್ದೇಶ ಉತ್ತಮವಾಗಿ ಇರಬೇಕು ಎಂದು ಅವರು ವಾಗ್ದಾಳಿ ನಡೆಸಿದರು.
ಬಿಜೆಪಿ ಸರಕಾರ ಬಂದ ಮೇಲೆ ಕನ್ನಡಿಗರ ಮೇಲೆ ದಬ್ಬಾಳಿಕೆ ಹೆಚ್ಚಿದೆ
ಕೇಂದ್ರದಲ್ಲಿ ಬಿಜೆಪಿ ಸರಕಾರ ಬಂದ ಮೇಲೆ ಕನ್ನಡ ಮತ್ತು ಕನ್ನಡಿಗರ ಮೇಲೆ ಹೆಚ್ಚು ದಬ್ಬಾಳಿಕೆ ನಡೆಯುತ್ತಿದೆ. ರಾಷ್ಟೀಯ ಪರಿಕ್ಷಾ ಸಂಸ್ಥೆ ಭಾನುವಾರ ನಡೆಸಿರುವ ಯುಜಿಸಿ – ಎನ್ ಇಟಿ ಪರೀಕ್ಷೆಯ ಕನ್ನಡ ಭಾಷಾ ಐಚ್ಛಿಕ ಪ್ರಶ್ನೆ ಪತ್ರಿಕೆಯಲ್ಲಿ ಇದ್ದ 100 ಪ್ರಶ್ನೆಗಳಲ್ಲಿ 90 ಪ್ರಶ್ನೆಗಳು ಹಿಂದಿಯಲ್ಲಿ ಇದ್ದರೆ, ಉಳಿದ ಹತ್ತು ಪ್ರಶ್ನೆಗಳು ಮಾತ್ರ ಕನ್ನಡಲ್ಲಿ ಇದ್ದವು. ಇದು ಅತ್ಯಂತ ಖಂಡನೀಯ ಎಂದು ಕಿಡಿಕಾರಿದ್ದಾರೆ.
ಪದೇ ಪದೆ ಕನ್ನಡಿಗರಿಗೆ ಅನ್ಯಾಯವಾಗುತ್ತಿದೆ. ಕೇಂದ್ರ ಸರ್ಕಾರದ ನಿಲುವು ಹಾಗೂ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮನೋಭಾವದ ಬಗ್ಗೆ ಮೊದಲಿನಿಂದಲೂ ವಿರೋಧಿಸಿದ್ದೇನೆ. ಕನ್ನಡವನ್ನು ಸಂಪೂರ್ಣವಾಗಿ ಕಡೆಗಣಿಸುವ ಹುನ್ನಾರ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ರಾಜ್ಯ ಸರ್ಕಾರ ಗಂಭೀರವಾಗಿ ಚಿಂತಿಸಬೇಕು. ರಾಜ್ಯದ ಜನರು ಸಹ ಹಿಂದಿ ಹೇರಿಕೆ ವಿರುದ್ಧ ದನಿ ಎತ್ತಬೇಕಿದೆ.ಕನ್ನಡ ಉಳಿಸುವ ನಿಟ್ಟಿನಲ್ಲಿ ಹೋರಾಟ ಮಾಡಬೇಕಿದೆ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಇದು ಹೆಚ್ಚುತ್ತಿದೆ. ಹಿಂದಿ ಹೇರಿಕೆ ವಿಚಾರವಾಗಿ ಕೇಂದ್ರದ ನಿಲುವು ಖಂಡಿಸುತ್ತೇನೆ ಎಂದ ಅವರು; ಕನ್ನಡ ಭಾಷೆಯನ್ನು ಅವಮಾನ ಮಾಡಬೇಡಿ. ಕನ್ನಡಿಗರ ಸ್ವಾಭಿಮಾನವನ್ನ ಕೆಣಕಬೇಡಿ ಎಂದು ಕೇಂದ್ರಕ್ಕೆ ಎಚ್ಚರಿಕೆ ನೀಡಿದರು.
ರಾತ್ರಿ ಕರ್ಫ್ಯೂ ನಿರುಪಯುಕ್ತ
ಕೋವಿಡ್ ಹೊಸ ತಳಿ ಒಮಿಕ್ರಾನ್ ನಿಯಂತ್ರಣಕ್ಕೆ ಸರಕಾರ ಹೇರುತ್ತಿರುವ ರಾತ್ರಿ ಕರ್ಫ್ಯೂ ನಿರುಪಯುಕ್ತ ನೈಟ್ ಕರ್ಫ್ಯೂ ಹಾಗೂ ಶೇ.50ರಷ್ಟು ನಿರ್ಬಂಧದಿಂದ ಯಾವುದೇ ಪ್ರಯೋಜನ ಇಲ್ಲ. ಕಳೆದ 2 ವರ್ಷದಿಂದ ವ್ಯಾಪಾರಸ್ಥರು ಪೆಟ್ಟು ತಿಂದಿದ್ದಾರೆ. ಈಗಾಗಲೇ ವ್ಯಾಪಾರಸ್ಥರು ಸರಕಾರಕ್ಕೆ ತಮ್ಮ ಅಭಿಪ್ರಾಯ ತಿಳಿಸಿದ್ದಾರೆ. ಆದರೂ ರಾಜ್ಯ ಸರ್ಕಾರ ಇಬ್ಬಗೆಯ ನೀತಿ ಹೊಂದಿದೆ. ರಾಜಕೀಯ ಸಭೆಗೆ ಏಕೆ ನಿರ್ಬಂಧವಿಲ್ಲ. ರಾಜಕೀಯ ಸಭೆಗೆ ಎಷ್ಟು ಜನ ಬೇಕಾದರೂ ಸೇರಬಹುದಾ? ಎಂದು ಅವರು ಪ್ರಶ್ನಿಸಿದ್ದಾರೆ.