• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Friday, April 10, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಬಸ್ ಪ್ರಯಾಣ ಏರಿಕೆಗೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

ಪ್ರತಿಧ್ವನಿ by ಪ್ರತಿಧ್ವನಿ
January 3, 2025
in Top Story, ಅಂಕಣ, ಇತರೆ / Others, ಇದೀಗ, ಕರ್ನಾಟಕ, ದೇಶ, ರಾಜಕೀಯ, ವಿಶೇಷ, ಶೋಧ
0
Share on WhatsAppShare on FacebookShare on Telegram

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ ಎಂದು ಹರಿಹಾಯ್ದರು.

ADVERTISEMENT

ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಕೇಂದ್ರ ಸಚಿವರು; ಈ ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ ಸರಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ ಎಂದು ಅವರು ಕಿಡಿಕಾರಿದರು.

ನಮ್ಮ ರಾಜ್ಯದಲ್ಲಿ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರಕಾರ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೂ ಅಭ್ಯಾಸವಾಗಿ ಹೋಗಿದೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸಿ ಮೂರನೇ ದಿನ ಮರೆತು ಹೋಗಿ ಪ್ರಯಾಣ ದರ ಏರಿಕೆಗೇ ಅಡ್ಜೆಸ್ಟ್ ಆಗುತ್ತಾರೆ. ಇದು ನೈಜ ಪರಿಸ್ಥಿತಿ ಎಂದು ಕೇಂದ್ರ ಸಚಿವರು ಬೇಸರ ವ್ಯಕ್ತಪಡಿಸಿದರು.

ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ:

ಇದೇ ಕಾಂಗ್ರೆಸ್ ಸರಕಾರ ಡಿಸೇಲ್, ಪೆಟ್ರೋಲ್ ಮೇಲೆ ಸೆಸ್ ಹಾಕಿತ್ತು. ಜನರು ಪ್ರತಿಭಟನೆ ಮಾಡಿದರೆ? ಇಲ್ಲ, ಅದಕ್ಕೆ ಅಡ್ಜೆಸ್ಟ್ ಆದರು. ಮುದ್ರಾಂಕ ಶುಲ್ಕ ಹೆಚ್ಚಳ ಮಾಡಿದರು.ಗೈಡ್ ಲೈನ್ಸ್ ವ್ಯಾಲ್ಯೂ, ಮದ್ಯದ ದರವನ್ನು ಏರಿಕೆ ಮಾಡಿದರು. ಹಾಲಿನ ದರವನ್ನು ಏರಿಕೆ ಮಾಡುತ್ತಾರಂತೆ. ಈಗ ನೀರಿನ ದರವೂ ಏರಿಕೆ ಆಗುತ್ತದೆ ಎನ್ನುವ ಮಾಹಿತಿ ಬರುತ್ತಿದೆ.ಎಲ್ಲಾ ದರಗಳನ್ನು ಸರಕಾರ ಏರಿಕೆ ಮಾಡುತ್ತಿದೆ. ಆದರೆ, ಗ್ಯಾರಂಟಿ ಸಂತೋಷದಲ್ಲಿ ಜನರು ಆಕ್ರೋಶ ವ್ಯಕ್ತಪಡಿಸುತ್ತಿಲ್ಲ, ಪ್ರತಿಭಟನೆ ಮಾಡುತ್ತಿಲ್ಲ. ಬೆಲೆ ಏರಿಕೆಗೆ ಜನರ ಸಮ್ಮತಿ ಇದೆ ಎಂದು ಸರಕಾರ ಭಾವಿಸಿದಂತಿದೆ ಎಂದು ಕುಮಾರಸ್ವಾಮಿ ಅವರು ಬೇಸರ ವ್ಯಕ್ತಪಡಿಸಿದರು.

HD kumaraswamy: ಕಾಂಗ್ರೆಸ್ ಶಾಸಕರ ಆತ್ಮಸಾಕ್ಷಿ ಪ್ರಶ್ನಿಸಿದ ಕೇಂದ್ರ ಸಚಿವರು..! #jdsmla #congress #jds

ಹೊಸ ವರ್ಷದಲ್ಲಿ ರಾಜ್ಯ ಸರಕಾರ ಅಭಿವೃದ್ಧಿಗೆ ಹೊಸ ಕಾರ್ಯಕ್ರಮ ಘೋಷಣೆ ಮಾಡಬೇಕಿತ್ತು. ಆದರೆ, ಬೆಲೆ ಏರಿಕೆ ಘೋಷಣೆ ಮಾಡಿದೆ. ಬೆಲೆ ಏರಿಕೆಗೆ ವರ್ಷಪೂರ್ತಿ ತಯಾರಾಗಿ ಎಂದು ಸರ್ಕಾರ ಜನರಿಗೆ ಸಂದೇಶ ಕೊಡುತ್ತಿದೆ ಎಂದು ಕೇಂದ್ರ ಸಚಿವರು ಲೇವಡಿ ಮಾಡಿದರು.

ಅನಿವಾರ್ಯ ಇದ್ದಾಗ ಮಾತ್ರ ಬೆಲೆ ಏರಿಕೆ ಮಾಡುವುದನ್ನು ನೋಡಿದ್ದೇವೆ. ಹಿಂದಿನ ಸರಕಾರಗಳ ಅವಧಿಯಲ್ಲಿ ಅನಿವಾರ್ಯವಿದ್ದಾಗ ಬೆಲೆ ಏರಿಕೆ ಮಾಡುವುದು, ಕಡಿಮೆ ಮಾಡುವುದು ಸಾಮಾನ್ಯ. ಆದರೆ, ಇವರು ಮಾಡಿರುವ ತಪ್ಪಿಗೆ ಜನರ ಮೇಲೆ ಬರೆ ಎಳೆಯುತ್ತಿದ್ದಾರೆ. ಎಲ್ಲಾ ಸಮಸ್ಯೆಗಳನ್ನೂ ಸರಕಾರವೇ ಮೈ ಮೇಲೆ ಎಳೆದುಕೊಂಡಿದೆ ಎಂದು ಅವರು ಟೀಕಿಸಿದರು.

ವಿದ್ಯುತ್ ಇಲಾಖೆ ಏನಾಗುತ್ತದೋ?:

ಎಲ್ಲೆಲ್ಲಿ ಸಾಧ್ಯವೋ ಅಲ್ಲೆಲ್ಲಾ ಬೆಲೆ ಏರಿಕೆ ಮಾಡಲಾಗುತ್ತಿದೆ. ವಿದ್ಯುತ್ ಇಲಾಖೆ ಏನಾಗುತ್ತದೋ ನೋಡಬೇಕು. ಸರಕಾರದ ಅಸಮರ್ಪಕ ನಿರ್ವಹಣೆಯಿಂದ ಇಲಾಖೆ ಹಾಳಾಗುತ್ತಿದೆ. ಗ್ಯಾರಂಟಿಗಳಲ್ಲಿ ಯುವನಿಧಿ ಯೋಜನೆ ಮಾಡಿದ್ದಾರೆ. ಇದುವರೆಗೆ ಎಷ್ಟು ಯುವ ಜನರಿಗೆ ಹಣ ಹೋಗಿದೆ. ಈ ಸರಕಾರ ಸ್ವೇಚ್ಚಾಚ್ಚರವಾಗಿ ಹಣ ಖರ್ಚು ಮಾಡುತ್ತಿದೆ. ಸಾರ್ವಜನಿಕರ ತೆರಿಗೆ ಹಣ ದುರ್ಬಳಕೆ ಮಾಡಿಕೊಳ್ಳುತ್ತಿದೆ. ಜನರು ಇದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದು ಕೇಂದ್ರ ಸಚಿವರು ಕಿವಿಮಾತು ಹೇಳಿದರು.

ಒಂದು ಕೈಯಲ್ಲಿ ಗ್ಯಾರಂಟಿ ಕೊಟ್ಟು ಇನ್ನೊಂದು ಕೈಯಲ್ಲಿ ಕಿತ್ತುಕೊಳ್ಳುತ್ತಿದೆ ಸರಕಾರ. ಈ‌ ಸರಕಾರ ಬಂದ ದಿನದಿಂದ ಇದೇ ನಡೆಯುತ್ತಿದೆ. ಹೀಗೆ ಹೇಳುತ್ತಾ ಹೋದರೆ ಬಹಳಷ್ಟು ಹೇಳಬಹುದು. ಸಂಕ್ರಾಂತಿ ಕಳೆಯಲಿ, ಆಮೇಲೆ ಈ ಸರಕಾರದ ಬಗ್ಗೆ ಚರ್ಚೆ ಮಾಡುತ್ತೇನೆ ಎಂದು ಅವರು ಪ್ರಶ್ನೆಯೊಂದಕ್ಕೆ ಉತ್ತರ ಕೊಟ್ಟರು.

Tags: bengaluruBJPburden on the peopleBus Fairby 15 percentCongress Partyexpressed his anger over the increase in bus fareFree BusKSRTCPublic tax money is being misused.Union minister HD Kumaraswamyಎಚ್ ಡಿ ಕುಮಾರಸ್ವಾಮಿಜೆಡಿಎಸ್ನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತನಿಖಾ ತಂಡಕ್ಕೆ ಘಟನೆಯ ಮಾಹಿತಿ ನೀಡಿದ್ದೇನೆ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

Next Post

ನಿಮ್ಹಾನ್ಸ್ ಅಭಿವೃದ್ಧಿಗೆ ನೆರವು ನೀಡಲು ಸರ್ಕಾರ ಬದ್ಧ :ಸಿದ್ದರಾಮಯ್ಯ

Related Posts

ವಿದ್ಯಾರ್ಥಿಗಳ ದುಡುಕಿನ ನಿರ್ಧಾರಕ್ಕೆ ಸಿಎಂ ಸಿದ್ದರಾಮಯ್ಯ ಸಲಹೆ
ಕರ್ನಾಟಕ

ಇನ್ನು ಪಿಯುಸಿ ಅಂಕಪಟ್ಟಿ ಮುಂದಿನ ವರ್ಷದಿಂದ  ಹೀಗಿರಲಿದೆ ! ಮಧು ಬಂಗಾರಪ್ಪ ಮಹತ್ವದ ಹೇಳಿಕೆ

by ಪ್ರತಿಧ್ವನಿ
April 10, 2026
0

ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಮುದ್ರಿತ ಅಂಕಪಟ್ಟಿ ನೀಡುವ ಪದ್ಧತಿಗೆ ಸರ್ಕಾರ ತೆರೆ ಎಳೆಯಲು ನಿರ್ಧರಿಸಿದೆ. ಬದಲಿಗೆ ಡಿಜಿಟಲ್ ಅಂಕಪಟ್ಟಿಯನ್ನೇ ಅಧಿಕೃತವಾಗಿ...

Read moreDetails
ಐಪಿಎಲ್ ಸಂಧರ್ಭದಲ್ಲಿ ಟೆಸ್ಟ್ ಕ್ರಿಕೆಟ್‌ಗೆ ರಶೀದ್ ಖಾನ್ ವಿದಾಯ ಘೋಷಣೆ

ತಾಯಿಯಿಲ್ಲದ ನೋವಿನ ನಡುವೆ ಅಪ್ರತಿಮ ಸಾಧನೆ: ರಾಜ್ಯಕ್ಕೆ ಪ್ರಥಮ ಬಂದ ದಿಶಾ!

April 9, 2026
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ಶೇ.86 ಉತ್ತೀರ್ಣ – ದಾಖಲೆಯ ಸಾಧನೆ, ಜಿಲ್ಲಾವಾರು ಪಟ್ಟಿ ಇಲ್ಲಿದೆ

April 9, 2026
ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

ದೇವನಹಳ್ಳಿ ಭೂ ಹಗರಣದಲ್ಲಿ ಅಧಿಕಾರಿ ಬಿ.ಕೆ.ಮಮತಾ ಪಾತ್ರವೇನು..? : ತಪ್ಪಿಲದಿದ್ರೆ ಪ್ರತಿಕ್ರಿಯೆಗೆ ನಿರಾಕರಣೆ ಯಾಕೆ..?

April 9, 2026
ತಮಿಳುನಾಡು ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ ಮಾಡಿದ ಡಿಸಿಎಂ ಡಿ.ಕೆ. ಶಿವಕುಮಾರ್

ಮಂಡ್ಯ ರೈಲು ನಿಲ್ದಾಣ ಮೇಲ್ದರ್ಜೆಗೆ; ವಿಮಾನ ನಿಲ್ದಾಣ ಮಾದರಿಯಲ್ಲಿ ಅಭಿವೃದ್ಧಿ: ಹೆಚ್.ಡಿ. ಕುಮಾರಸ್ವಾಮಿ

April 9, 2026
Next Post
ನಿಮ್ಹಾನ್ಸ್ ಅಭಿವೃದ್ಧಿಗೆ ನೆರವು ನೀಡಲು ಸರ್ಕಾರ ಬದ್ಧ :ಸಿದ್ದರಾಮಯ್ಯ

ನಿಮ್ಹಾನ್ಸ್ ಅಭಿವೃದ್ಧಿಗೆ ನೆರವು ನೀಡಲು ಸರ್ಕಾರ ಬದ್ಧ :ಸಿದ್ದರಾಮಯ್ಯ

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada