• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Sunday, February 15, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ರಾಜಕೀಯ

ಕೇಂದ್ರ ವಿಪಕ್ಷ ನಾಯಕರಿಗೆ ಐಎಎಸ್ ಅಧಿಕಾರಿಗಳ ಆತಿಥ್ಯಕ್ಕೆ ಹೆಚ್.ಡಿ.ಕುಮಾರಸ್ವಾಮಿ ಕಿಡಿ

Any Mind by Any Mind
July 18, 2023
in ರಾಜಕೀಯ
0
Congress won the election by illegal conduct : ಕಾಂಗ್ರೆಸ್ ಅಕ್ರಮ ನಡೆಸಿ ಚುನಾವಣೆ ಗೆದ್ದಿದೆ ; ಹೆಚ್.ಡಿಕೆ ನೇರ ಆರೋಪ
Share on WhatsAppShare on FacebookShare on Telegram

ಬೆಂಗಳೂರು: ಘಟಬಂಧನ್ ಸಭೆಗೆ ಆಗಮಿಸಿರುವ ಹೊರರಾಜ್ಯದ ರಾಜಕೀಯ ನಾಯಕರ ಆತಿಥ್ಯಕ್ಕೆ ಐಎಎಸ್ ನಿಯೋಜನೆ ಮಾಡಿರುವ ರಾಜ್ಯ ಸರ್ಕಾರ ಹಾಗೂ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ತೀವ್ರ ಟೀಕಾಪ್ರಹಾರ ನಡೆಸಿದ್ದಾರೆ.

ADVERTISEMENT

ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಅವರು; ಕಾಂಗ್ರೆಸ್ ಪಕ್ಷವು ರಾಜ್ಯದಲ್ಲಿ ಐಎಎಸ್ ಜೀತ ಪದ್ಧತಿಯನ್ನು ಜಾರಿಗೆ ತಂದು ಕರ್ನಾಟಕದ ಹೆಮ್ಮೆ, ಪರಂಪರೆಗೆ ಘಟಶ್ರಾದ್ಧ ಮಾಡಿದೆ ಎಂದು ಕಿಡಿಕಾರಿದೆ.

ಅಧಿಕಾರ ಬಂಧನಕ್ಕಾಗಿ ಘಟಬಂಧನಕ್ಕೆ ಒಳಗಾದ ಕಾಂಗ್ರೆಸ್ ಪಕ್ಷವು ಕರ್ನಾಟಕದ ಹೆಮ್ಮೆ, ಪರಂಪರೆ,ಸ್ವಾಭಿಮಾನಕ್ಕೆ ಘಟಶ್ರಾದ್ಧ ಮಾಡಿದೆ. ಘಟಬಂಧನಕ್ಕೆ ಬಂದ ಹೊರರಾಜ್ಯದ ರಾಜಕಾರಣಿಗಳ ಸೇವೆಗೆ ರಾಜ್ಯದ ಹೆಮ್ಮೆಯ ಐಎಎಸ್ ಅಧಿಕಾರಿಗಳನ್ನು ಕಳಿಸಿದ ಕಾಂಗ್ರೆಸ್ ಸರಕಾರದ ನಡೆ ತಪ್ಪು. ನುಡಿದಂತೆ ನಡೆಯುವುದು ಎಂದರೆ ಇದೇನಾ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದ್ದಾರೆ.

ಇದು ರಾಜ್ಯ ಸರಕಾರಿ ಕಾರ್ಯಕ್ರಮ ಅಲ್ಲ, ಹೊಸ ಸರಕಾರದ ಪ್ರಮಾಣ ಸ್ವೀಕಾರವೂ ಅಲ್ಲ. ಕೇವಲ ರಾಜಕೀಯ ಸಭೆಯಷ್ಟೇ. ಇಂಥ ಸಭೆಗೆ ಬಂದ ರಾಜಕೀಯ ನಾಯಕರಿಗೆ ಆಥಿತ್ಯ ನೀಡಲು ಜವಾಬ್ದಾರಿಯುತ ಅಧಿಕಾರಿಗಳನ್ನು ಕಳಿಸಿದ್ದು ಆರೂವರೆ ಕೋಟಿ ಕನ್ನಡಿಗರಿಗೆ ಎಸಗಿದ ಘೋರ ಅಪಚಾರ ಹಾಗೂ ರಾಜ್ಯದ ಪಾಲಿಗೆ ಮಹಾ ದುರಂತ ಎಂದು ಮಾಜಿ ಮುಖ್ಯಮಂತ್ರಿ ಅವರು ಹೇಳಿದ್ದಾರೆ.

ಯಾವುದೇ ಒಂದು ರಾಜ್ಯದ ಅಭಿವೃದ್ಧಿ, ಆಡಳಿತ, ಮುನ್ನಡೆಯಲ್ಲಿ ನಿರ್ಣಾಯಕ ಪಾತ್ರ ವಹಿಸುವ ಐಎಎಸ್ ಅಧಿಕಾರಿಗಳು ಕೇವಲ ಅಧಿಕಾರಿಗಳಷ್ಟೇ ಅಲ್ಲ; ಆಯಾ ರಾಜ್ಯಗಳ ಕ್ಷಮತೆ, ದಕ್ಷತೆಯ ಪ್ರತೀಕ. ಅಂಥವರನ್ನು ಇನ್ನೊಬ್ಬರ ಆಜ್ಞಾಪಾಲಕರನ್ನಾಗಿ ಮಾಡಿ, ಬಾಗಿಲು ಕಾಯುವ ಕೆಲಸ ಹಚ್ಚಿದ್ದು ಆಡಳಿತ ಪಕ್ಷದ ಅಹಂಕಾರದ ಪರಮಾವಧಿ ಎಂದು ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದು ನಿಶ್ಚಿತವಾಗಿಯೂ ಐಎಎಸ್ ಸೇವಾ ನೀತಿ ಸಂಹಿತೆಯ ಉಲ್ಲಂಘನೆ. ಇದು ತಮ್ಮ ಸ್ವಾಭಿಮಾನ, ಗೌರವಕ್ಕೆ ಧಕ್ಕೆ ತರುವಂತದ್ದು ಎಂದು ಗೊತ್ತಿದ್ದರೂ ಅಧಿಕಾರಿಗಳು ಈ ಕೆಲಸಕ್ಕೆ ಒಪ್ಪಿದ್ದು ನನಗೆ ಅತೀವ ಅಚ್ಚರಿ, ಆಘಾತ ಉಂಟು ಮಾಡಿದೆ. ಇಂಥ ವಿವಾದಾಸ್ಪದ ಆದೇಶ ಹೊರಡಿಸಿದ ಮುಖ್ಯ ಕಾರ್ಯದರ್ಶಿಗಳು ಜನತೆಗೆ ಉತ್ತರ ಕೊಡಲೇಬೇಕಿದೆ ಎಂದು ಅವರು ಒತ್ತಾಯ ಮಾಡಿದ್ದಾರೆ.

ಬಂಡವಾಳಶಾಹಿ ವ್ಯವಸ್ಥೆಯಲ್ಲಿ ನಂಬಿಕೆ ಹೊಂದಿರುವ ಕಾಂಗ್ರೆಸ್ ಪಕ್ಷ, ರಾಜ್ಯದಲ್ಲಿ ‘ಐಎಎಸ್ ಜೀತ ಪದ್ಧತಿ’ಯನ್ನು ಜಾರಿಗೆ ತರುವ ಮೂಲಕ ಹೊಸ ನಮೂನೆಯ ‘ರಾಜಕೀಯ, ಆಡಳಿತ ವಸಾಹತುಶಾಹಿ’ಯನ್ನು ದೇಶಕ್ಕೆ ಪರಿಚಯ ಮಾಡಿದೆ. ಹೌದು; ಕಾಂಗ್ರೆಸ್ ಯಾವಾಗಲೂ ಕುಖ್ಯಾತಿಗಳಿಗೇ ಕುಖ್ಯಾತಿ. ಅಂಥ ಅಪಾಯಕಾರಿ ಹಸ್ತವಾಸಿಯೇ ಕೈ ಪಕ್ಷದ ಆಸ್ತಿ ಎಂದು ಕಾಂಗ್ರೆಸ್ ಪಕ್ಷವನ್ನು ತೀವ್ರವಾಗಿ ಕುಟುಕಿದ್ದಾರೆ.

135 ಸೀಟು ಕೊಟ್ಟ ತಪ್ಪಿಗೆ ಕನ್ನಡಿಗರಿಗೆ ವಿಪರೀತ ದರ್ಪ ತೋರಿದೆ ಕಾಂಗ್ರೆಸ್. ಸತ್ಯಯುಗದಲ್ಲಿ ಹಿರಣ್ಯಕಶಿಪು ಅಷ್ಟದಿಕ್ಪಾಲಕರನ್ನು ಸೆರೆಹಿಡಿದು ಮೆಟ್ಟಿಲು ಮಾಡಿಕೊಂಡ ಪಾಪಕ್ಕೆ ಸರ್ವನಾಶವಾದ. ಕಾಂಗ್ರೆಸ್ ಕೂಡ 30 ಐಎಎಸ್ ಅಧಿಕಾರಿಗಳನ್ನು ರಾಜಕಾರಣಿಗಳ ದ್ವಾರಪಾಲಕರನ್ನಾಗಿ ಮಾಡುವ ಮೂಲಕ ತನ್ನ ನಾಶಕ್ಕೆ ತಾನೇ ನಾಂದಿ ಹಾಡಿದೆ ಎಂದು ಅವರು ಹೇಳಿದ್ದಾರೆ.

Tags: cmsiddaramiahDKShivakumarHD KumaraswamyHDDJDSmhaghat bandhan
Previous Post

ಮೂರು ಜ್ಯೋತಿಗಳಿಗೆ ಬಂಪರ್ ! ರಾಜ್ಯದ ಅರ್ಧ ಕೋಟಿ ಕುಟುಂಬಗಳಿಗೆ ನೇರ ಲಾಭ

Next Post

ಗೃಹಲಕ್ಷ್ಮೀ ಯೋಜನೆ ಜಾರಿಯ ಸವಾಲು, ಯಶಸ್ವಿಯಾಗಿ ನಿಭಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Related Posts

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ
Top Story

Byrati Basavaraj: ಬಿಕ್ಲು ಶಿವ ಕೊ** ಕೇಸ್​​:ಶಾಸಕ ಬೈರತಿ ಬಸವರಾಜ್​​ ಸಿಐಡಿ ಕಸ್ಟಡಿಗೆ

by ಪ್ರತಿಧ್ವನಿ
February 15, 2026
0

ಬೆಂಗಳೂರು: ರೌಡಿಶೀಟರ್ ಶಿವಪ್ರಕಾಶ ಅಲಿಯಾಸ್ ಬಿಕ್ಲು ಶಿವ ಕೊಲೆ ಪ್ರಕರಣ ಸಂಬಂಧ ಶಾಸಕ ಬೈರತಿ ಬಸವರಾಜ್ (Byrathi Basavaraj) ಅವರನ್ನು ಫೆಬ್ರವರಿ 21ರವರೆಗೆ ಸಿಐಡಿ ಕಸ್ಟಡಿಗೆ ನೀಡುವಂತೆ...

Read moreDetails
ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

ಬಡ ಮಕ್ಕಳ ಹಾಸ್ಟೆಲ್ ನಿರ್ಮಾಣಕ್ಕಾಗಿ ಬೆಂಗಳೂರಿನಲ್ಲಿ ಜಾಗ ಮಂಜೂರು: ಡಿಸಿಎಂ ಡಿ.ಕೆ ಶಿವಕುಮಾರ್

February 15, 2026
ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

ಸಿಎಂ ಸ್ಥಾನಕ್ಕಿಂತ ರಾಜ್ಯದ ಜನವಿರೋಧಿ ಸರ್ಕಾರ ತೆಗೆಯುವುದೇ ನನ್ನ ಉದ್ದೇಶ : ಕೈ ವಿರುದ್ಧ ಗುಡುಗಿದ ದಳಪತಿ..

February 14, 2026
“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

“ಕೇಂದ್ರದ ಅನ್ಯಾಯದ ನಡುವೆಯೂ 1000 ದಿನಗಳ ಯಶಸ್ವೀ ಆಡಳಿತ ನಮ್ಮ ಜನಪರ ಬದ್ಧತೆಗೆ ಸಾಕ್ಷಿ”

February 14, 2026
ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

ಪತ್ರಕರ್ತನ ಸರ್ಕಾರಿ ಗೌರವಕ್ಕೆ ತಗುಲಿದ ಖರ್ಚು ವೆಚ್ಚ ಕೇಳಿತಾ ಸಿದ್ದು ಸರ್ಕಾರ..? : ಆರ್‌.ಅಶೋಕ್‌ ಆರೋಪವೇನು..?

February 14, 2026
Next Post
ಗೃಹಲಕ್ಷ್ಮೀ ಯೋಜನೆ ಜಾರಿಯ ಸವಾಲು, ಯಶಸ್ವಿಯಾಗಿ ನಿಭಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

ಗೃಹಲಕ್ಷ್ಮೀ ಯೋಜನೆ ಜಾರಿಯ ಸವಾಲು, ಯಶಸ್ವಿಯಾಗಿ ನಿಭಾಯಿಸಿದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada