ಮೇ 18 ರಂದು 92ನೇ ವರ್ಷಕ್ಕೆ ಕಾಲಿಡುತ್ತಿರುವ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡ ಅವರು ಈ ಬಾರಿ ತಮ್ಮ ಹುಟ್ಟಹಬ್ಬವನ್ನು ಆಚರಿಸಿಕೊಳ್ಳದಿರಲು ನಿರ್ಧರಿಸಿದ್ದಾರೆ. ಶುಭ ಕೋರಲು ಯಾರೂ ತಮ್ಮ ನಿವಾಸಕ್ಕೆ ಆಗಮಿಸದಂತೆ ಕಾರ್ಯಕರ್ತರು, ಹಿತೈಷಿಗಳಿಗೆ ಮನವಿ ಮಾಡಿದ್ದಾರೆ. ಪ್ರಸಕ್ತ ವಿದ್ಯಮಾನಗಳಿಂದಾಗಿ ನೊಂದಿರುವ ದೇವೇಗೌಡರು, ಈ ಬಾರಿಯ ಹುಟ್ಟುಹಬ್ಬದ ಸಂಭ್ರಮದಿಂದ ದೂರ ಉಳಿಯುತ್ತಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
![](https://pratidhvani.com/wp-content/uploads/2024/05/Screenshot_20240516-180109-871x1024.jpg)
ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ದೇವೇಗೌಡರು, ಇದೇ ತಿಂಗಳ 18 ರಂದು 91 ವರ್ಷ ಪೂರೈಸಿ 92ನೇ ವಸಂತಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಕಾರಣಾಂತರಗಳಿಂದ ನಾನು ಜನ್ಮದಿನ ಆಚರಣೆ ಮಾಡಿಕೊಳ್ಳುತ್ತಿಲ್ಲ. ಹೀಗಾಗಿ, ಎಲ್ಲರೂ ಇದ್ದಲ್ಲಿಂದಲೇ ಹಾರೈಸಬೇಕಾಗಿ ಮನವಿ ಮಾಡಿಕೊಳ್ಳುತ್ತೇನೆ ಎಂದಿದ್ದಾರೆ.
ಪ್ರಸಕ್ತ ನಡೆಯುತ್ತಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಪ್ರಾಮಾಣಿಕವಾಗಿ ಶ್ರಮಿಸಬೇಕು ಹಾಗೂ ಪಕ್ಷ ಸಂಘಟನೆಗೆ ಪ್ರತಿಯೊಬ್ಬರೂ ಬದ್ಧತೆಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಸಹ ಕೋರಿದ್ದಾರೆ.