ಹಾಸನ ಸಂಸದ ಪ್ರಜ್ವಲ್ ರೇವಣ್ಣ ವಿರುದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ ಹೆಚ್. ಡಿ ದೇವೇಗೌಡರು ಮೌನ ಮುರಿದಿದ್ದು ಇದೇ ಮೊದಲ ಬಾರಿಗೆ ಪ್ರತಿಕ್ರಿಯಿಸಿದ್ದಾರೆ.ಈ ಪ್ರಕರಣದಲ್ಲಿ ಹಲವರ ಕೈವಾಡವಿದೆ. ನಮ್ಮ ಕುಟುಂಬದ ವಿರುದ್ದ ರಾಜಕೀಯ ಷಡ್ಯಂತ್ರ ನಡೆದಿದೆ. ಪ್ರಜ್ವಲ್ ವಿರುದ್ಧ ಕ್ರಮ ತೆಗೆದುಕೊಳ್ಳುವುದರ ಬಗ್ಗೆ ತಕರಾರು ಇಲ್ಲ. ಆದರೆ ರೇವಣ್ಣ ಮೇಲೆ ಅಪವಾದ ಸರಿಯಲ್ಲ ಪ್ರಕರಣದ ಹಿಂದೆ ಹಲವರ ಕೈವಾಡವಿದೆ ನಾನು ಯಾರ ಹೆಸರನ್ನು ಹೇಳಲು ಇಚ್ಚಿಸಲ್ಲ. ಈ ಕೇಸ್ ನಲ್ಲಿ ಭಾಗಿಯಾದವರ ವಿರುದ್ದ ಕ್ರಮ ಕೈಕೊಳ್ಳಲಿ ಪ್ರಜ್ವಲ್ ವಿದೇಶಕ್ಕೆ ಹೋಗಿದ್ದಾನೆ. ಕಾನೂನು ವ್ಯಾಪ್ತಿಯಲ್ಲಿ ಕ್ರಮ ಕೈಗೊಳ್ಳಲಿ ಎಂದರು.ರೇವಣ್ಣ ವಿರುದ್ಧ ಆರೋಪ ಮಾಡಿರುವುದರ ಸತ್ಯ ಜನರಿಗೆ ಗೊತ್ತಿದೆ.

ರೇವಣ್ಣ ಪ್ರಕರಣದ ಬಗ್ಗೆ ಕೋರ್ಟ್ನಲ್ಲಿ ವಿಚಾರಣೆ ನಡೆಯುತ್ತಿದೆ. ಅದರ ಬಗ್ಗೆ ನಾನು ಪ್ರತಿಕ್ರಿಯೆ ಕೊಡುವುದಿಲ್ಲ. ಈ ಘಟನೆ ಬಗ್ಗೆ ಕುಟುಂಬದ ಪರವಾಗಿ ಹೆಚ್ಡಿ ಕುಮಾರಸ್ವಾಮಿ ಮಾತನಾಡಿದ್ದಾರೆ. ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿ ಎಂದು ಹೇಳಿದ್ದಾರೆ. ಇದರಲ್ಲಿ ಅನೇಕ ಜನರಿದ್ದಾರೆ, ಅವರ ಹೆಸರನ್ನು ಹೇಳಲು ಹೋಗಲ್ಲ. ಅನ್ಯಾಯಕ್ಕೆ ಒಳಗಾಗಿರುವ ಸಂತ್ರಸ್ತೆಯರಿಗೆ ಪರಿಹಾರ ನೀಡಬೇಕು. ಈ ಎಲ್ಲ ವಿಚಾರಗಳನ್ನು ಕುಮಾರಸ್ವಾಮಿ ಬಿಡಿಸಿ ಬಿಡಿಸಿ ಹೇಳಿದ್ದಾರೆ. ಇದು ಯಾವ ರೀತಿ ನಡೆಯಿತು ಎಂದು ನಾನು ವಿಶ್ಲೇಷಣೆ ಮಾಡಲ್ಲ ಎಂದು ಹೆಚ್ ಡಿ ದೇವೇಗೌಡರು ತಿಳಿಸಿದರು.