ಶಿಕ್ಷಕರ ಪದವೀಧರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಯಲ್ಲಿ ದಕ್ಷಿಣ ಕ್ಷೇತ್ರದಲ್ಲಿ ಜೆಡಿಎಸ್ ಪರವಾದ ಅಲೆಯಿದೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೈಸೂರಿನ ವಿದ್ಯಾವರ್ಧಕ ಎಂಜಿನಿಯರಿಂಗ್ ಕಾಲೇಜಿನಲ್ಲಿ ಅಭ್ಯರ್ಥಿ ಎಚ್.ಕೆ.ರಾಮು ಪರ ಮತಯಾಚಿಸಿದ ಹೆಚ್.ಡಿ.ಕೆ ಸಾ.ರಾ.ಮಹೇಶ್ ನೇತೃತ್ವದಲ್ಲಿ ಪ್ರಚಾರ ಕಾರ್ಯ ಉತ್ತಮವಾಗಿ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ ಮತದಾರರಿಂದ ನಮ್ಮ ಅಭ್ಯರ್ಥಿಗೆ ಉತ್ತಮ ಬೆಂಬಲ ವ್ಯಕ್ತವಾಗುತ್ತಿದೆ. ನಮ್ಮಗೆ ವಿರೋಧವೇನು ಹೊಸತಲ್ಲ ಯಾರು ಎಷ್ಟು ವಿರೋಧ ಮಾಡುತ್ತಾರೋ ಮಾಡಲಿ ಪಕ್ಷಕ್ಕೆ ತೊಂದರೆ ಕೊಡುವುದು ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಇದನ್ನೆಲ್ಲಾ ನಾವು ಮೆಟ್ಟಿನಿಂತು ಗೆಲುವು ಸಾಧಿಸುತ್ತೇವೆ ಎಂದಿದ್ದಾರೆ.
ಈ ವೇಳೆ ಜೆಡಿಎಸ್ ವಿಧಾನಪರಿಷತ್ ಸದಸ್ಯ ಮರಿತಿಬ್ಬೇಗೌಡ ಕಾಂಗ್ರೆಸ್ ಅಭ್ಯರ್ಥಿ ಮಧು ಮಾದೇಗೌಡಗೆ ಬಹಿರಂಗವಾಗಿ ಬೆಂಬಲ ಘೋಷಿಸಿರುವ ಬಗ್ಗೆ ಕೇಳಿದ ಕೆಂಡಮಂಡಲರಾದ ಹೆಚ್.ಡಿ.ಕೆ ಪ್ರತಿಕ್ರಿಯಿಸದೆ ತೆರಳಿದ್ದರು.











