2023ರ ರಾಜ್ಯ ವಿಧಾನಸಭೆ ಚುನಾವಣೆಗೆ ಸಂಬಂಧಿಸಿದಂತೆ ರಾಷ್ಟ್ರೀಯ ಪಕ್ಷಗಳಿಗೆ ಸೆಡ್ಡು ಹೊಡೆದು ಭರ್ಜರಿ ತಯಾರಿ ನಡೆಸಿರುವ ಜೆಡಿಎಸ್ ಕರ್ನಾಟಕ ರಾಜ್ಯದ ಪ್ರಮುಖ ಸಮುದಾಯ ವೀರಶೈವ-ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟಿದೆ.
ಈ ವಿಚಾರಕ್ಕೆ ಪೂರಕವೆಂಬಂತೆ ಮೈಸೂರಿನಲ್ಲಿ ಮಾಜಿ ಸಿಎಂ ಹೆಚ್.ಡಿ.ಕೆ ವೀರಶೈವ-ಲಿಂಗಾಯತ ಸಮುದಾಯದ ಪ್ರಮುಖರೊಂದಿಗೆ ಚರ್ಚಿಸಿದ್ದಾರೆ.

ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಕೆ.ವಿ.ಮಲ್ಲೇಶ್ ಆಯೋಜಿಸಿರುವ ಶರಣರೊಂದಿಗೆ ಕುಮಾರಣ್ಣ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ.
ಕಾರ್ಯಕ್ರಮದಲ್ಲಿ ಶಾಸಕರಾದ ಜಿ.ಟಿ.ದೇವೇಗೌಡ, ಸಾ.ರಾ.ಮಹೇಶ್, ಅಶ್ವಿನ್ ಕುಮಾರ್ ಹಾಗೂ ವಿಧಾನಪರಿಷತ್ ಸದಸ್ಯ ಮಂಜೇಗೌಡ ಭಾಗಿಯಾಗಿದ್ದಾರೆ.






