ಇಂದು ಹೈಕೋರ್ಟ್ ನಲ್ಲಿ (Highcourt) ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ (HD kumaraswamy) ವಿರುದ್ಧ IPS ಅಧಿಕಾರಿ ಚಂದ್ರಶೇಖರ್ ನಿನ್ನೆ ಬೆಂಗಳೂರಿನ ಸಂಜಯ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದ ಪ್ರಕರಣಕ್ಕೆ ಸಂಭಂದಿಸಿದಂತೆ HDK ಹೈಕೋರ್ಟ್ ಮೆಟ್ಟಿಲೇರಿದ್ದರು. ಸದ್ಯ ಹೆಚ್.ಡಿ.ಕೆ ಗೆ ಹೈಕೋರ್ಟ್ ನಿಂದ ಬಿಗ್ ರಿಲೀಫ್ ಸಿಕ್ಕಿದೆ.
ಈ ಹಿಂದಿನ ಗಣಿ ಪ್ರಕರಣಕ್ಕೆ ಸಂಬಂಧಿಸಿದ ಹಾಗೆ, ರಾಜ್ಯದಲ್ಲಿ SIT ರಚನೆಯಾಗಿದ್ದು, ಈ ಬಗ್ಗೆ ತನಿಖೆ ನಡೆಸುತ್ತಿದೆ. ಈ ಪ್ರಕರಣದಲ್ಲಿ ಜಾಮೀನಿನ ಮೇಲಿರುವ ಕುಮಾರಸ್ವಾಮಿ ತನಿಖೆ ನಡೆಸುತ್ತಿರುವ ತಮಗೆ ಕುಮಾರಸ್ವಾಮಿ ಬಹಿರಂಗವಾಗಿ ಬೆದರಿಕೆ ಹಾಕಿದ್ದಾರೆ.ಆ ಮೂಲಕ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಆತ್ಮಸ್ಥೈರ್ಯ ಕುಗ್ಗಿಸುವ ಪ್ರಯತ್ನ ಮಾಡಿದ್ದಾರೆ ಎಂದು ಆರೋಪಿಸಿ ಎಡಿಜಿಪಿ ಚಂದ್ರಶೇಖರ್ ದೂರು ನೀಡಿದ್ದರು.
ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹೆಚ್ಡಿ ಕುಮಾರಸ್ವಾಮಿ, ನಿಖಿಲ್ (Nikhil) ಮತ್ತು ಸುರೇಶ್ ಬಾಬು (Suresh babu) ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ಎಚ್ ಡಿ ಕುಮಾರಸ್ವಾಮಿ ವಿರುದ್ಧ ಯಾವುದೇ ಬಲವಂತದ ಕ್ರಮ ಕೈಗೊಳ್ಳದಂತೆ ಆದೇಶ ಹೊರಡಿಸಿದೆ.
ಈಗ ದಾಖಲಾಗಿರುವ ಎಫ್ಐಆರ್ (FIR) ಆಧರಿಸಿ 10 ವರ್ಷದ ನಿರೀಕ್ಷಣಾ ಜಾಮೀನು ರದ್ದು ಪಡಿಸುವಂತಿಲ್ಲ, ಎಂದು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಏಕ ಸದಸ್ಯ ಪೀಠ ನಿರ್ಬಂಧ ವಿಧಿಸಿದೆ. ಯಾವುದೇ ಬಲವಂತದ ಕ್ರಮ ಕೈಗೊಳ್ಳಲ್ಲವೆಂಬ ಎಸ್ ಪಿ ಪಿ (SPP) ಹೇಳಿಕೆಯನ್ನು ಕೂಡ ಹೈ ಕೋರ್ಟ್ ದಾಖಲಿಸಿಕೊಂಡಿದೆ.