ಕೇಂದ್ರ ರಕ್ಷಣಾ ಸಚಿವರಾದ ರಾಜನಾಥ್ ಸಿಂಗ್ (Rajnath singh) ಅವರನ್ನು ದೆಹಲಿಯ ಸಂಸತ್ ಭವನದ ಅವರ ಕಚೇರಿಯಲ್ಲಿ ಇಂದು ಕೇಂದ್ರ ಉಕ್ಕು ಖಾತೆ ಸಚಿವ ಹೆಚ್.ಡಿ ಕುಮಾರಸ್ವಾಮಿ (HD Kumaraswamy) ಭೇಟಿಯಾಗಿದ್ದಾರೆ.
ಈ ಭೇಟಿ ಸಂದರ್ಭದಲ್ಲಿ ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ HD ಕುಮಾರಸ್ವಾಮಿ ಅವರು ರಕ್ಷಣಾ ಇಲಾಖೆಗೆ ಸಂಬಂಧಿಸಿದ ಕೆಲ ವಿಚಾರಗಳು ಹಾಗೂ ಮುಂಬರುವ ಏರೋ ಇಂಡಿಯಾ (Air india) ವೈಮಾನಿಕ ಪ್ರದರ್ಶನದ ಬಗ್ಗೆ ಸಮಾಲೋಚನೆ ನಡೆಸಿದ್ದಾರೆ.
ಇನ್ನೇನು ಕೆಲವೇ ದಿನಗಳಲ್ಲಿ ಬೆಂಗಳೂರಿನಲ್ಲಿ ಭಾರತೀಯ ವಾಯುಸೇನೆಯ ಏರ್ ಶೋ ನಡೆಯಲಿದ್ದು , ಈ ಕಾರ್ಯಕ್ರಮಕ್ಕೆ ಸಂಬಂಧಪಟ್ಟ ಸಿದ್ಧತೆಗಳು, ಅಗತ್ಯತೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.