ಮುಳಬಾಗಿನಲ್ಲಿ ಶುಕ್ರವಾರದಿಂದ ಪಂಚರತ್ನ ಯೋಜನೆ ಹಾಗೂ 2023ರ ಚುನಾವಣೆಗೆ ಅಬ್ಬರದ ಪ್ರಚಾರಕ್ಕೆ ಮುನ್ನುಡಿ ಬರೆದಿರುವ ಜೆಡಿಎಸ್‌ಗೆ ರೇವಣ್ಣರಿಂದ ತಕರಾರು ಎದುರಾಗಿದೆ.
ಶುಕ್ರವಾರ ಸಮಾವೇಶದಲ್ಲಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ ಮಾಡಬೇಕಿತ್ತು ಆದರೆ, ಕಾರಣಾಂತರಗಳಿಂದ ಅಭ್ಯರ್ಥಿ ಘೋಷಣೆಯನ್ನು ಮುಂದೂಡಲಾಗಿದೆ. ಈ ಬಗ್ಗೆ ಮಾತನಾಡಿದ ಹೆಚ್.ಡಿ.ಕುಮಾರಸ್ವಾಮಿ ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿಗಳಾಗಿದ್ದಾರೆ. ಇಂದು ಸಮಯ ಪ್ರಸಕ್ತವಾಗಿಲ್ಲ ಎಂದು ತಕರಾರು ತೆಗೆದಿದ್ದಾರೆ. 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬಿಡುಗಡೆ ಮಾಡುತ್ತೇವೆ ಎಂದು ತಿಳಿಸಿದ್ದಾರೆ.

ಬಸ್ ನಿಲ್ದಾಣ ವಿವಾದ
ಶಾಸಕರೇ ಕಣ್ಣೀರಿಟ್ಟರೆ ಅವರಿಗೆ ಮತ ಕೊಟ್ಟ ಜನರ ಗತಿ ಏನು ಎಂದು ಪ್ರಶ್ನಿಸಿದ್ದಾರೆ.
ಬಿಜೆಪಿ ಶಾಸಕರು ಕಣ್ಣೀರು ಹಾಕಿರುವುದನ್ನು ನಾನು ನೋಡಿದ್ದೇನೆ ಸಂಸದರು ಕಣ್ಣೀರು ಹಾಕಿಸಿರುವುದನ್ನು ಗಮನಿಸಿದ್ದೇನೆ ಇವರಿಗೆ ಮತ ನೀಡಿದ ಜನರ ಕತೆ ಏನು ಮಸೀದಿಯನ್ನಾದರೂ ಮಾಡಿ, ಗೋಪುರವನ್ನಾದರೂ ಮಾಡಿ ಜನರಿಗೆ ನೆರಳು ಕೊಡಿ ಕೆಡಹುವ ಕೆಲಸ ಮಾಡಬೇಡಿ ಎಂದು ವಿನಂತಿಸಿದ್ದಾರೆ.






