• Home
  • About Us
  • ಕರ್ನಾಟಕ
Friday, July 4, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ದೇವೇಗೌಡರು ದೆಹಲಿಯಿಂದ ಬಂದ ಮೇಲೆ ಮೇಲ್ಮನೆ ಚುನಾವಣೆ ಮೈತ್ರಿ ಬಗ್ಗೆ ನಿರ್ಧಾರ: ಹೆಚ್.ಡಿ.ಕುಮಾರಸ್ವಾಮಿ

ಪ್ರತಿಧ್ವನಿ by ಪ್ರತಿಧ್ವನಿ
December 1, 2021
in ಕರ್ನಾಟಕ, ರಾಜಕೀಯ
0
ದೇವೇಗೌಡರು ದೆಹಲಿಯಿಂದ ಬಂದ ಮೇಲೆ ಮೇಲ್ಮನೆ ಚುನಾವಣೆ ಮೈತ್ರಿ ಬಗ್ಗೆ ನಿರ್ಧಾರ: ಹೆಚ್.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ದೆಹಲಿಯಿಂದ ಬಂದ ಮೇಲೆ ವಿಧಾನ ಪರಿಷತ್‌ ಚುನಾವಣೆಯ ಮೈತ್ರಿ ಬಗ್ಗೆ ಚರ್ಚೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಾಸ್ವಾಮಿ ಹೇಳಿದ್ದಾರೆ.

ADVERTISEMENT

ಜೆಡಿಎಸ್‌ ಸ್ಪರ್ಧೆ ಮಾಡದ ಕ್ಷೇತ್ರಗಳಲ್ಲಿ ಬಿಜೆಪಿಗೆ ಬೆಂಬಲ ನೀಡುವಂತೆ ಯಡಿಯೂರಪ್ಪನವರು ಬಹಿರಂಗವಾಗಿಯೇ ಮನವಿ ಮಾಡಿದ್ದಾರೆ. ಆದರೆ, ಕಾಂಗ್ರೆಸ್‌ʼನವರು ನಮಗೆ ಜೆಡಿಎಸ್‌ ಪಕ್ಷದ ಮತಗಳ ಅಗತ್ಯವಿಲ್ಲ. ಅವರ ಜತೆ ಹೊಂದಾಣಿಕೆಯ ಪ್ರಶ್ನೆಯೇ ಇಲ್ಲ ಎಂದು ನೇರವಾಗಿಯೇ ಹೇಳಿದ್ದಾರೆ. ಬೇಡ ಎಂದವರ ಮನೆ ಬಾಗಿಲಿಗೆ ಹೋಗಲಿಕ್ಕೆ ಆಗುತ್ತದೆಯೇ? ಹೀಗಾಗಿ ಯಡಿಯೂರಪ್ಪ ಅವರ ಮನವಿ ಬಗ್ಗೆ ಏನು ತೀರ್ಮಾನ ಕೈಗೊಳ್ಳಬೇಕೋ ಎಂಬುದನ್ನು ಶೀಘ್ರವೇ ನಿರ್ಧಾರ ಮಾಡುತ್ತೇವೆ ಎಂದು ಹೇಳಿದ್ದಾರೆ.

ಮೋದಿ ಅವರ ಜತೆ ಗೌಡರು ಚುನಾವಣೆ ಹೊಂದಾಣಿಕೆ ಬಗ್ಗೆ ಚರ್ಚೆ ನಡೆಸಿರಬಹುದಾ? ಎನ್ನುವ ಪ್ರಶ್ನೆಗೆ; ಮೊದಲಿನಿಂದಲೂ ಪ್ರಧಾನಮಂತ್ರಿಗಳು ಮತ್ತು ದೇವೇಗೌಡರ ನಡುವೆ ಉತ್ತಮ ಬಾಂಧವ್ಯವಿದೆ. ಗೌಡರ ಬಗ್ಗೆ ಮೋದಿ ಅವರಿಗೆ ವಿಶೇಷ ಗೌರವವಿದೆ. ಅವರಿಬ್ಬರೂ ಭೇಟಿಯಾಗುವುದು ಹೊಸದೇನಲ್ಲ. ನಾನು ಸಿಎಂ ಆಗಿದ್ದಾಗ ಭೇಟಿಯಾಗಿದ್ದ ಸಂದರ್ಭದಿಂದಲೂ ನನಗೆ ಗೊತ್ತಿದೆ. ರಾಜ್ಯಕ್ಕೆ ಸಂಬಂಧಿಸಿದ ವಿಷಯಗಳು ಹಾಗೂ ಹಾಸನಕ್ಕೆ ಐಐಟಿ ತರುವ ವಿಚಾರದ ಬಗ್ಗೆ ಮೋದಿ ಅವರ ಜತೆ ಚರ್ಚೆ ನಡೆಸಲು ಹೋಗಿದ್ದಾರೆಂಬ ಮಾಹಿತಿ ಗಮನಿಸಿದ್ದೇನೆ. ಜತೆಗೆ, ವಿಧಾನ ಪರಿಷತ್‌ ಚುನಾವಣೆ ಬಗ್ಗೆಯೂ ಚರ್ಚೆ ನಡೆಸಿರಬಹುದು. ಗೌಡರು ದೆಹಲಿಯಿಂದ ವಾಪಸ್‌ ಬಂದ ಮೇಲೆ ಅವರೊಂದಿಗೆ ಚರ್ಚೆ ನಡೆಸಿ ಮಾಹಿತಿ ನೀಡುವೆ ಎಂದು ಹೇಳಿದ್ದಾರೆ.

ಅಧಿಕಾರಿ ವಿರುದ್ಧ ದೂರು ಯಾಕೆಂದು ಗೊತ್ತಿಲ್ಲ:

ಬಳ್ಳಾರಿ ಲೋಕಾಯುಕ್ತದಲ್ಲಿ ಕೆಲಸ ಮಾಡುತ್ತಿರುವ ಅಧಿಕಾರಿಯ ಬಗ್ಗೆ ಕಾಂಗ್ರೆಸ್‌ ವತಿಯಿಂದ ದೂರು ನೀಡಲಾಗಿದೆ. ಯಾತಕ್ಕಾಗಿ ದೂರು ನೀಡಲಾಗಿದೆಯೋ ನನಗೆ ಗೊತ್ತಿಲ್ಲ. ನಾನೆಂದೂ ಅಧಿಕಾರಿಗಳನ್ನು ದುರುಪಯೋಗ ಮಾಡಿಕೊಂಡು ಚುನಾವಣೆ ನಡೆಸಿದವನಲ್ಲ. ನಮ್ಮ ಕಾರ್ಯಕರ್ತರ ವಿಶ್ವಾಸದಲ್ಲಿ ಮಾತ್ರ ಕೆಲಸ ಮಾಡಿದವನು ನಾನು. ಹೀಗಾಗಿ ವೈಯಕ್ತಿಕ ದ್ವೇಷದ ಮೇಲೆ ಆ ಅಧಿಕಾರಿ ವಿರುದ್ಧ ದೂರು ಕೊಟ್ಟಿರಬಹುದು. ಸತ್ಯಾಂಶ ಏನೆಂಬುದು ತನುಖೆಯಿಂದ ಹೊರಬರಲಿ. ನಮ್ಮ ಅಭ್ಯರ್ಥಿಗೆ ನಮ್ಮ ಕಾರ್ಯಕರ್ತರು ಮತ ಹಾಕಿಸಲಿಕ್ಕೆ ಸಾಧ್ಯವೋ ಅಥವಾ ಅಧಿಕಾರಿ ಹಾಕಿಸಲಿಕ್ಕೆ ಸಾಧ್ಯವೋ? ಎಂದು ಕುಮಾರಸ್ವಾಮಿ ಪ್ರಶ್ನೆ ಮಾಡಿದ್ದಾರೆ.

ಕನಕಪುರದಲ್ಲಿ ಗುಪ್ತ ಮತದಾರರು ಇದ್ದಾರೆ:

ಕಳೆದ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಚುನಾವಣೆಗೆ ಸಂಬಂಧಿಸಿದಂತೆ ನನ್ನ ನೇರ ಪಾತ್ರ ಇರಲಿಲ್ಲ. ಹಿಂದೆ ನಮ್ಮ ಪಕ್ಷದಲ್ಲಿದ್ದ ನಾಯಕರು ಜವಾಬ್ದಾರಿ ತೆಗೆದುಕೊಂಡು ಚುನಾವಣೆ ನಡೆಸಿದ್ದರು. ಈ ಬಾರಿ ಖುದ್ದು ನಾನೇ ಕೆಲ ಕ್ಷೇತ್ರಗಳಲ್ಲಿ ಕೆಲಸ ಮಾಡುತ್ತಿದ್ದೇನೆ. ಜತೆಗೆ ಮಾಗಡಿ ಶಾಸಕರಾದ ಮಂಜುನಾಥ್‌ ಹಾಗೂ ರಾಮನಗರ ಶಾಸಕರಾದ ಅನಿತಾ ಕುಮಾರಸ್ವಾಮಿ ಅವರು, ಚನ್ನಪಟ್ಟಣದಲ್ಲಿ ಮುಖಂಡರು ಮತ್ತು ಕಾರ್ಯಕರ್ತರು ಜವಾಬ್ದಾರಿ ತೆಗೆದುಕೊಂಡಿದ್ದಾರೆ. ಕನಕಪುರ ಕ್ಷೇತ್ರಕ್ಕೂ ಹೆಚ್ಚಿನ ಗಮನ ಕೊಟ್ಟಿದ್ದೇವೆ. ಅಲ್ಲಿ ನಮ್ಮ ಪಕ್ಷಕ್ಕೆ ಗುಪ್ತ ಮತದಾರರು, ಅಂದರೆ ನಮ್ಮ ಅಭಿಮಾನಿಗಳು ಸಾಕಷ್ಟು ಪ್ರಮಾಣದಲ್ಲಿ ಇದ್ದಾರೆ. ಆ ಭಾಗದಲ್ಲಿ ಮುಕ್ತ ಚುನಾವಣೆ ನಡೆಸಲು ಅಧಿಕಾರಿಗಳು ಬಿಗಿ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಒತ್ತಾಯ ಮಾಡಿದ್ದಾರೆ.

ಇಂದು ಬೆಂಗಳೂರು ಗ್ರಾಮಾಂತರ ಕ್ಷೇತ್ರಕ್ಕೆ ಸಂಬಂಧಿಸಿದಂತೆ ರಾಮನಗರ ಜಿಲ್ಲೆಯ ಎಲ್ಲ ಕ್ಷೇತ್ರಗಳ ಮತದಾರರ ಸಭೆಯನ್ನು ಕರೆದಿದ್ದೆ. ರಾಜ್ಯದ ಆರು ಕ್ಷೇತ್ರಗಳಲ್ಲಿ ಮಾತ್ರ ನಮ್ಮ ಅಭ್ಯರ್ಥಿಗಳಿದ್ದು, ಅಷ್ಟೂ ಕಡೆ ನಾವು ಗೆಲ್ಲಲಿದ್ದೇವೆ, ಈ ಚುನಾವಣೆ ಮುಂದಿನ 2023ರ ವಿಧಾನಸಭೆ ಚುನಾವಣೆಯ ದಿಕ್ಸೂಚಿ ಎಂದು ಹೇಳಲು ಸಾಧ್ಯವಿಲ್ಲ. ಆದರೆ, ಈ ಚುನಾವಣೆಯ ಫಲಿತಾಂಶವು ಮುಂದಿನ ಚುನಾವಣೆಗೆ ಕಾರ್ಯಕರ್ತರಲ್ಲಿ ಆತ್ಮವಿಶ್ವಾಸ ತುಂಬಲಿದೆ ಎಂದು ಹೇಳಿದ್ದಾರೆ.

ನಮ್ಮ ಪಕ್ಷಕ್ಕೆ ಅನೇಕ ಕ್ಷೇತ್ರಗಳಲ್ಲಿ ನೆಲೆ ಇದೆ. ಆದರೆ ಅದು ಚುನಾವಣೆ ಗೆಲ್ಲುವ ಮಟ್ಟದಲ್ಲಿ ಇಲ್ಲ. ಅದರ ಹೊರತಾಗಿ ಯಾರನ್ನು ಗೆಲ್ಲಿಸಬಹುದೆಂಬ ತೀರ್ಮಾನ ಮಾಡುವ ಶಕ್ತಿಯಂತೂ ಇದೆ. ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಗುರಿ 123  ಸ್ಥಾನ. ಆ ನಿಟ್ಟಿನಲ್ಲಿ ನಮ್ಮ ಪಕ್ಷದ ಕಾರ್ಯಕ್ರಮಗಳಿರುತ್ತವೆ ಎಂದು ತಿಳಿಸಿದ್ದಾರೆ.

ಎಸ್.ಆರ್.ವಿಶ್ವನಾಥ್‌ ಹತ್ಯೆಗೆ ಸಂಚು; ಸತ್ಯ ಹೊರಬರಲಿ

ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್‌ ಹತ್ಯೆಗೆ ಸಂಚು ರೂಪಿಸಿರುವ ಬಗ್ಗೆ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ನನಗೆ ವಾಸ್ತವ ಅಂಶಗಳೇನು ಎನ್ನುವುದು ಗೊತ್ತಿಲ್ಲ. ಮಾಧ್ಯಮಗಳಲ್ಲಿ ಬಂದ ಮಾಹಿತಿಯನ್ನು ಸರಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಬೇಕು. ಸರಿಯಾದ ತನಿಖೆಯ ಮೂಲಕ ಸತ್ಯ ಆಚೆಗೆ ಬರಲಿ. ಒಂದು ವೇಳೆ ಹತ್ಯೆ ಸಂಚು ನಿಜವೇ ಆಗಿದ್ದರೆ ಕಠಿಣವಾಗಿ ಕ್ರಮ ಕೈಗೊಳ್ಳಬೇಕು ಎಂದು ಕುಮಾರಸ್ವಾಮಿ ಅವರು ಹೇಳಿದ್ದಾರೆ.

ರಾಜಕಾರಣವೇ ಬೇರೆ. ಆದರೆ ಅದರ ನೆಪದಲ್ಲಿ ಭೂ ವ್ಯವಹಾರವೋ ಅಥವಾ ಇನ್ನವುದೋ ವ್ಯವಹಾರಗಳನ್ನು ನಡೆಸಬೇಕಾದರೆ ಹತ್ಯೆ ಮಾಡುವಂಥ ಹಂತಕ್ಕೆ ಯಾರೂ ತೆಗೆದುಕೊಂಡು ಹೋಗಬಾರದು. ಸರಕಾರ ನಿರ್ಲಕ್ಷ್ಯ ಮಾಡಿದೇ ದಕ್ಷ ಅಧಿಕಾರಿಗಳನ್ನು ಬಿಟ್ಟು ತನಿಖೆ ಮಾಡಿಸಿ ಸತ್ಯವನ್ನು ಹೊರಗೆಳೆದು ಜನರ ಮುಂದೆ ಇಡಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ರಾಮನಗರ ನನ್ನ ಕರ್ಮಭೂಮಿ

“ಪಕ್ಷ ಬಯಸಿದರೆ ಮಾತ್ರ ಮುಂದಿನ ಚುನಾವಣೆಯಲ್ಲಿ ಸ್ಪರ್ಧೆ ಮಾಡುವುದಾಗಿ ನಿಖಿಲ್‌ ಕುಮಾರಸ್ವಾಮಿ ಹೇಳಿದ್ದಾರೆ. ಕಾರ್ಯಕರ್ತರ ಒಲವು, ಪಕ್ಷದ ಆದೇಶ ಬಂದರೆ ಸ್ಪರ್ಧಿಸಲು ತಯಾರಿದ್ದೇನೆ ಎಂದು ಹೇಳಿದ್ದಾರೆ. ಅದು ಇನ್ನೂ ಎರಡು ವರ್ಷದ ಮಾತು.” ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರು ನಿಖಿಲ್‌ ಸ್ಪರ್ಧೆ ಕುರಿತು ಹೇಳಿದ್ದಾರೆ.

ನಿಖಿಲ್‌ ಅವರು ರಾಮನಗರ ಅಥವಾ ಮಂಡ್ಯ ಇವೆರಡರಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಪ್ರಶ್ನೆಗೆ; ರಾಮನಗರ ನಮ್ಮ ಕರ್ಮಭೂಮಿ. ನಮ್ಮ ಹೃದಯದಲ್ಲಿರುವ ನೆಲೆ. ಈ ಭೂಮಿ ಮೇಲೆ ಇರುವವರೆಗೂ ಇಲ್ಲೇ ಇರುತ್ತೇವೆಯಲ್ಲದೇ, ಭೂಮಿ ಮೇಲೆ ಮಣ್ಣಾದರೂ ಈ ಮಣ್ಣಲ್ಲೇ ಮಣ್ಣಾಗುವೆ. ನಮ್ಮ ಮತ್ತು ರಾಮನಗರದ ನಡುವೆ ವಿಶೇಷ ಬಾಂಧವ್ಯವಿದೆ. ಅದನ್ನು ಅಳಿಸಲು ಯಾರಿದಂಲೂ ಸಾಧ್ಯವಿಲ್ಲ. ಉಸಿರಿರುವ ತನಕವಷ್ಟೇ ಅಲ್ಲ ಉಸಿರು ನಿಂತ ಮೇಲೆಯೂ ರಾಮನಗರವೇ ನಮ್ಮ ಕರ್ಮಭೂಮಿ ಆಗಿರುತ್ತದೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

Tags: BJPCovid 19H D Devegowdaಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ನರೇಂದ್ರ ಮೋದಿಬಿಜೆಪಿ
Previous Post

ಮಾನವಸಹಿತ ಗಗನಯಾನ ಯೋಜನೆ ಗುಜರಾತಿಗೆ ಸ್ಥಳಾಂತರ ವಿರೋಧಿಸಿ ಎನ್ ಎಸ್ ಯೂಐ ಪ್ರತಿಭಟನೆ!

Next Post

ಆಹಾ.. ಕಡಲೆಯ ಕಡಲು ಎಷ್ಟೊಂದು ಬಗೆ, ಎಷ್ಟೊಂದು ರುಚಿ!

Related Posts

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
0

ಮಾಜಿ ಡಿಸಿಎಂ ಕೆ.ಎಸ್ ಈಶ್ವರಪ್ಪ ಗೆ (KS Eshwarappa) ಲೋಕಾಯುಕ್ತ (Lokayukta) ಶಾಕ್ ಎದುರಾಗಿದೆ. ಈ ಹಿಂದೆ ಬಿಜೆಪಿ (Bjp) ಸರ್ಕಾರದ ಅವಧಿಯಲ್ಲಿ ಸಚಿವರಾಗಿದ್ದ ಈಶ್ವರಪ್ಪ ಅವರ...

Read moreDetails
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

July 4, 2025

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

July 3, 2025

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

July 3, 2025

Capital City: ಈ ವಾರ ತೆರೆಗೆ ಆರ್ ಅನಂತರಾಜು ನಿರ್ದೇಶನದ ಹಾಗೂ ರಾಜೀವ್ ರೆಡ್ಡಿ ಅಭಿನಯದ “ಕ್ಯಾಪಿಟಲ್ ಸಿಟಿ” . .

July 3, 2025
Next Post
ಆಹಾ.. ಕಡಲೆಯ ಕಡಲು ಎಷ್ಟೊಂದು ಬಗೆ, ಎಷ್ಟೊಂದು ರುಚಿ!

ಆಹಾ.. ಕಡಲೆಯ ಕಡಲು ಎಷ್ಟೊಂದು ಬಗೆ, ಎಷ್ಟೊಂದು ರುಚಿ!

Please login to join discussion

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,
Top Story

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

by ಪ್ರತಿಧ್ವನಿ
July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R
Top Story

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

by Chetan
July 4, 2025
ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!
Top Story

ಶಾಲಿನಿ ರಜನೀಶ್ ಬಗ್ಗೆ ಎನ್.ರವಿಕುಮಾರ್ ಇದೆಂಥಾ ಹೇಳಿಕೆ..?! ಬಿಜೆಪಿ ಎಂಎಲ್ಸಿ ಸಮರ್ಥನೆ ಏನು ಗೊತ್ತಾ..?!

by Chetan
July 4, 2025
Top Story

Bangalore Airport: 10 ಜಾಗತಿಕ ಪ್ರಶಸ್ತಿ ಪಡೆದ ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ..!!

by ಪ್ರತಿಧ್ವನಿ
July 3, 2025
Top Story

Dr Sharana Prakash Patil: ಡಸೆಲ್ಡಾರ್ಫ್‌ನಲ್ಲಿ ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌ ನಿಯೋಗ..!

by ಪ್ರತಿಧ್ವನಿ
July 3, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

ನಾಳೆ ಬಾ ಎಂದವನ ಮನೆ ಹಾಳು ಎಂಬ ನಾಣ್ಣುಡಿಯೂ ಇದೆ,

July 4, 2025
ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

ಮಾಜಿ ಡಿಸಿಎಂ ಈಶ್ವರಪ್ಪಗೆ ಲೋಕಾ ಶಾಕ್ ! – ಆಕ್ರಮ ಆಸ್ತಿ ಗಳಿಕೆ ಪ್ರಕರಣದಲ್ಲಿ ದಾಖಲಾಯ್ತು F.I.R

July 4, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ

© 2024 www.pratidhvani.com - Analytical News, Opinions, Investigative Stories and Videos in Kannada