• Home
  • About Us
  • ಕರ್ನಾಟಕ
Friday, October 24, 2025
  • Login
Pratidhvani
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
  • Home
  • ಇದೀಗ
  • ಕರ್ನಾಟಕ
  • ದೇಶ-ವಿದೇಶ
    • ದೇಶ
    • ವಿದೇಶ
  • ರಾಜಕೀಯ
  • ಅಭಿಮತ
    • ಅಂಕಣ
  • ವಿಶೇಷ
  • ಸಿನಿಮಾ
  • ವಿಡಿಯೋ
  • ಶೋಧ
  • ಇತರೆ
    • ಸರ್ಕಾರಿ ಗೆಜೆಟ್
    • ವಾಣಿಜ್ಯ
    • ಸ್ಟೂಡೆಂಟ್‌ ಕಾರ್ನರ್
    • ಕ್ರೀಡೆ
  • ಸೌಂದರ್ಯ
  • ಜೀವನದ ಶೈಲಿ
No Result
View All Result
Pratidhvani
No Result
View All Result
Home ಕರ್ನಾಟಕ

ನೀಟ್‌ನಿಂದ ಬಡ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣ ಕನಸು ನುಚ್ಚುನೂರು : ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಆಕ್ರೋಶ

Any Mind by Any Mind
March 2, 2022
in ಕರ್ನಾಟಕ
0
ಆರ್ಟಿಫಿಶಿಯಲ್‌ ಹೋರಾಟಗಳಿಗೆ ಜನ ಬೆಲೆ ಕೊಡುವುದಿಲ್ಲ: ಹೆಚ್‌.ಡಿ.ಕುಮಾರಸ್ವಾಮಿ
Share on WhatsAppShare on FacebookShare on Telegram

ಯುದ್ದಪೀಡಿತ ಉಕ್ರೇನ್‌ನಲ್ಲಿ ಮಂಗಳವಾರ ಸಾವನಪ್ಪಿದ ನವೀನ್‌ ಕುರಿತು ಮಾತನಾಡಿರುವ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಕೇಂದ್ರ ಸರ್ಕಾರದ ವಿರುದ್ದ ಸರಣಿ ಟ್ವೀಟ್‌ ಮಾಡುವ ಮೂಲಕ ಕಿಡಿಕಾರಿದ್ದಾರೆ.

ADVERTISEMENT

ನೀಟ್‌ ವ್ಯವಸ್ಥೆಯಿಂದ ಬಡ ಮತ್ತು ಮಧ್ಯಮ ವರ್ಗದ, ಗ್ರಾಮೀಣ ವಿದ್ಯಾರ್ಥಿಗಳ ವೈದ್ಯಶಿಕ್ಷಣದ ಕನಸು ನುಚ್ಚುನೂರು ಆಗುತ್ತಿದೆ ಎಂದು ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು; ವೈದ್ಯಶಿಕ್ಷಣ ವೆಚ್ಚದ ಬಗ್ಗೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನೀಡಿರುವ ಹೇಳಿಕೆ ಬಗ್ಗೆ ತೀವ್ರ ಅತೃಪ್ತಿ ವ್ಯಕ್ತಪಡಿಸಿದ್ದಾರೆ.

ನೀಟ್‌ ಬಂದ ಮೇಲೆ ಟ್ಯೂಷನ್‌ ದಂಧೆ ಮಿತಿ ಮೀರಿದ್ದು, ಅದಕ್ಕೆ ಕೇಂದ್ರ ಸರಕಾರವೇ ಪ್ರೋತ್ಸಾಹ ನೀಡುತ್ತಿರುವಂತಿದೆ. ಕೇಂದ್ರ ಸಚಿವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ ಎಂದು ಹೆಳಿದ್ದಾರೆ.

ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ.1/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 2, 2022

ವೈದ್ಯಶಿಕ್ಷಣದ ಕನಸು ಕಾಣುವ ಬಡ, ಮಧ್ಯಮ ವರ್ಗದ ಬದುಕನ್ನು ಛಿದ್ರಗೊಳಿಸುತ್ತಿರುವ ನೀಟ್ (ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ- NEET), ವಿದ್ಯಾರ್ಥಿಗಳು & ಪೋಷಕರ ಪಾಲಿಗೆ ಮರಣಶಾಸನವಾಗಿದೆ. ಉನ್ನತ ಶಿಕ್ಷಣವನ್ನು ಉಳ್ಳವರಿಗೆ ಮೀಸಲಿಟ್ಟು ಉಳಿದವರಿಗೆ ವ್ಯವಸ್ಥಿತವಾಗಿ ನಿರಾಕರಿಸಲಾಗುತ್ತಿದೆ ಎಂದು ಹೇಳಿದ್ದಾರೆ.

ಉಕ್ರೇನ್ʼಗೆ ಮೆಡಿಕಲ್ ಓದಲು ಹೋಗಿ ರಷ್ಯಾ ದಾಳಿಗೆ ತುತ್ತಾದ ವಿದ್ಯಾರ್ಥಿ ನವೀನ್ ದುರಂತ ಸಾವು ʼ ನೀಟ್ ವ್ಯವಸ್ಥೆಯ ನಿರ್ಲಜ್ಜ ಮುಖʼವನ್ನು ಇಡೀ ದೇಶಕ್ಕೆ ದರ್ಶನ ಮಾಡಿಸಿದೆ. ʼಅರ್ಹತೆʼ ನೆಪದಲ್ಲಿ ಪ್ರತಿಭಾವಂತ ಆರ್ಥಿಕ ದುರ್ಬಲ & ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾಡಲಾಗುತ್ತಿರುವ ʼಅನ್ಯಾಯʼಕ್ಕೆ ಅಂತ್ಯ ಹಾಡಬೇಕಿದೆ ಎಂದು ಹೇಳಿದ್ದಾರೆ.

10ನೇ ತರಗತಿಯಲ್ಲಿ 96%, 2ನೇ ಪಿಯುಸಿಯಲ್ಲಿ 97% ಅಂಕ ಗಳಿಸಿದ್ದರೂ ನವೀನ್ʼಗೆ ʼಜಗತ್ತಿನ ಶಿಕ್ಷಣ ಕಾಶಿʼ ಭಾರತದಲ್ಲಿ ವೈದ್ಯಸೀಟು ಸಿಗಲ್ಲ. ಗ್ರಾಮೀಣ ವಿದ್ಯಾರ್ಥಿಯೊಬ್ಬ ಇಷ್ಟು ಉತ್ತಮ ಅಂಕ ಗಳಿಸುವುದು ಸುಲಭವಲ್ಲ. ಆದರೂ, ಆತನಿಗೆ ನಮ್ಮ ದೇಶದಲ್ಲಿ ವೈದ್ಯಶಿಕ್ಷಣವನ್ನು ನಿರಾಕರಿಸಲಾಗಿದೆ.

ಭಾರತದಲ್ಲಿ ನಿರಾಕರಿಸಲ್ಪಟ್ಟ ಶಿಕ್ಷಣವನ್ನು ಹುಡುಕಿಕೊಂಡು ಉಕ್ರೇನ್ʼಗೆ ಹೋಗಿ, ಅಲ್ಲಿ ಕಲಿತು ಇನ್ನೊಬ್ಬರ ಜೀವ ಉಳಿಸಲು ನೂರುಕಾಲ ಬಾಳಿ ಬದುಕಬೇಕಿದ್ದ ನವೀನ್ ಇಂದು ಜೀವ ಕಳೆದುಕೊಂಡು ʼವಿಶ್ವಗುರುʼ ಆಗಬೇಕೆಂದು ಹಾತೊರೆಯುತ್ತಿರುವ ʼಭಾರತದ ಆತ್ಮಸಾಕ್ಷಿʼಗೆ ಪ್ರಶ್ನೆಯಾಗಿದ್ದಾನೆ. ಇದಕ್ಕೆ ಯಾರು ಹೊಣೆ? ಎಂದು ಪ್ರಶ್ನಸಿದ್ದಾರೆ.

ನವೀನ್‌ ಸಾವು ನೀಟ್‌ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ʼವ್ಯಾಪಾರೀಕರಣʼ ದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ." 10/10

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) March 2, 2022

ನೀಟ್ ಭಾರತದ ಮಧ್ಯಮ, ಬಡವರ್ಗದ ಮಕ್ಕಳ ಮೆಡಿಕಲ್ ಕನಸನ್ನು ಮರೀಚಿಕೆಯನ್ನಾಗಿಸಿದೆ. ಅದು ವಕ್ಕರಿಸಿದ ಮೇಲೆ ʼಟ್ಯೂಷನ್ ಅಂಗಡಿʼಗಳು ನಾಯಿಕೊಡೆಗಳಂತೆ ಮೇಲೆದ್ದಿವೆ. ಕೋಟಿ ಕೋಟಿ ವ್ಯಾಪಾರ ಆಗುತ್ತಿದೆ. ಅವು ವಿದ್ಯಾರ್ಥಿಗಳಿಂದ ಲಕ್ಷ ಲಕ್ಷ ಪೀಕುತ್ತಿವೆ ಮತ್ತೂ ಶೇ.99ರಷ್ಟು ಕೋಚಿಂಗ್ ಪಡೆದ ವಿದ್ಯಾರ್ಥಿಗಳೇ ನೀಟ್ ಪಾಸ್ ಮಾಡುತ್ತಿದ್ದಾರೆ! ಎಂದು ಹೇಳಿದ್ದಾರೆ.

ಸರಕಾರಿ ಶಾಲೆ-ಕಾಲೇಜು ವಿದ್ಯಾರ್ಥಿಗಳಿಗೆ ನೀಟ್ ತೇರ್ಗಡೆ ಕಷ್ಟಸಾಧ್ಯ. ಈ ದೌರ್ಬಲ್ಯವನ್ನರಿತೇ ʼಟ್ಯೂಷನ್ ಅಂಗಡಿʼಗಳು ಮಾರುಕಟ್ಟೆ ವಿಸ್ತರಿಸಿ ನವೀನ್ʼರಂಥ ವಿದ್ಯಾರ್ಥಿಗಳ ಶವಗಳ ಮೇಲೆ ರಣಕೇಕೆ ಹಾಕುತ್ತಿವೆ. ನೀಟ್ ಹೆಸರಿನಲ್ಲಿ ನೀಟಾಗಿ ಉಳ್ಳವರಿಗೆ ವೈದ್ಯ ಶಿಕ್ಷಣವನ್ನು ʼದಾಸೋಹʼ ಮಾಡುವ ದಂಧೆ ವಿರುದ್ಧ ಎಲ್ಲರೂ ದನಿ ಎತ್ತಬೇಕಿದೆ ಎಂದು ಆಗ್ರಹಿಸಿದ್ದಾರೆ.

ಕೇಂದ್ರ ಸಚಿವ ಪ್ರಹ್ಲಾದ ಜೋಷಿ ಅವರ ಹೇಳಿಕೆ ನನಗೆ ಅಚ್ಚರಿ ತಂದಿದೆ. “ವಿದೇಶದಲ್ಲಿ ವೈದ್ಯ ಪದವಿ ಪಡೆಯುವ 90% ವಿದ್ಯಾರ್ಥಿಗಳು ಭಾರತದಲ್ಲಿ ಅಗತ್ಯ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದಿಲ್ಲ. ವಿದೇಶ & ಭಾರತದಲ್ಲಿ ವೈದ್ಯಶಿಕ್ಷಣಕ್ಕೆ ಆಗುವ ವೆಚ್ಚದ ಬಗ್ಗೆ ಚರ್ಚೆ ಬೇಡ. ಆ ಚರ್ಚೆಗೆ ಇದು ಸಮಯವೂ ಅಲ್ಲ” ಎಂದಿದ್ದಾರೆ ಅವರು.

ಕೇಂದ್ರದ ಕಾನೂನು & ಸಂಸದೀಯ ವ್ಯವಹಾರ ಖಾತೆ ಮಂತ್ರಿಗಳೇ, “ವೆಚ್ಚದ ಹೋಲಿಕೆ ಮಾಡಲು ನಾನು ಬಯಸುವುದಿಲ್ಲ. ಯಾವುದೇ ವಿವಾದ ಅಥವಾ ಚರ್ಚೆಗೆ ನಾನೀಗ ಕಾರಣನಾಗುವುದಿಲ್ಲ” ಎಂದು ಹೇಳುವುದರ ಹಿಂದಿನ ಮರ್ಮವೇನು? ಅವರ ಹೇಳಿಕೆ ಅನೇಕ ಗುಮಾನಿಗಳಿಗೆ ಕಾರಣವಾಗಿದೆ. ʼಟ್ಯೂಷನ್ ಅಂಗಡಿʼಗಳ ಹಿಂದೆ ಯಾರಿದ್ದಾರೆ? ಯಾರಿಗೂ ಕಾಣದಂತೆ ಕೇಂದ್ರ ಸರಕಾರವೇ ಅವಿತು ಕೂತಿದೆಯಾ? ನೀಟ್ ಸೃಷ್ಟಿಸಿದ ʼಶೈಕ್ಷಣಿಕ ಅರಾಜಕತೆʼಗೆ ಇನ್ನೆಷ್ಟು ವಿದ್ಯಾರ್ಥಿಗಳು ಬಲಿಯಾಗಬೇಕು? ಎಂದು ಪ್ರಶ್ನಿಸಿದ್ದಾರೆ.

ನವೀನ್ ಸಾವು ನೀಟ್ ಸಾಚಾತನವನ್ನೇ ಪ್ರಶ್ನಿಸಿದೆ. ಬಡಮಕ್ಕಳ ರಕ್ತವನ್ನು ಹೀರುವ, ಶ್ರೀಮಂತರಿಗಷ್ಟೇ ಮೀಸಲಾಗಿರುವ ವೈದ್ಯಶಿಕ್ಷಣದ ʼವ್ಯಾಪಾರೀಕರಣʼ ದೇಶಕ್ಕೆ ಅಪಮಾನಕರ. ವಿಶ್ವಗುರು, ರಾಷ್ಟ್ರೀಯ ಶಿಕ್ಷಣ ನೀತಿ ಎಂದೆಲ್ಲಾ ಬೊಬ್ಬೆ ಹೊಡೆಯುವ ಕೇಂದ್ರವು ಒಮ್ಮೆ ಶುದ್ಧ ಅಂತಃಕರಣದಿಂದ ಆಲೋಚಿಸಲಿ.” ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

Tags: BJPCongress PartyNEETNEET ExamRussiaUkraineಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

Ukraine Vs Russia | ಮುಂದುವರೆದ ಕ್ಷಿಪಣಿ ದಾಳಿ; ಉಕ್ರೇನ್‌ನ Kharkov ಮೇಲೆ ದಾಳಿ ಮಾಡಿದ ರಷ್ಯಾ

Next Post

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Related Posts

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
0

ಬೆಂಗಳೂರು: ಇತ್ತೀಚೆಗೆ ಹೊರಬಂದ ಡಾ.ಕೃತಿಕಾ ರೆಡ್ಡಿ ಕೊಲೆ ಪ್ರಕರಣದ ಮತ್ತಷ್ಟು ರೋಚಕ ವಿಚಾರಗಳು ಬಯಲಾಗ್ತಿದೆ. ವಿಚಾರಣೆ ವೇಳೆ ತಾನೇ ಕೊಲೆ‌ ಮಾಡಿದ್ದು ಎಂದು ಒಪ್ಪಿಕೊಂಡಿರುವ ಪತಿ ಡಾ.ಮಹೇಂದ್ರ ರೆಡ್ಡಿ...

Read moreDetails
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

October 24, 2025
ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

ಸಿದ್ದರಾಮಯ್ಯಗೆ ಕೇಳಿದ ಪ್ರಶ್ನೆನ..ನಿಮ್ಮ ಮೋದಿಗೆ ಕೇಳಿ Mr.ತೇಜಸ್ವಿ ಸೂರ್ಯ ಅವರೇ..

October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

October 24, 2025
Next Post
ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

ಯುದ್ಧಗ್ರಸ್ತ ದೇಶದಿಂದ ಭಾರತೀಯರನ್ನು ಸುರಕ್ಷಿತವಾಗಿ ಕರೆತರುವ ಕಾರ್ಯಾಚಾರಣೆ ಭಾರತಕ್ಕೆ ಹೊಸದೇನಲ್ಲ: ಮಾಜಿ ಸಿಎಂ ಸಿದ್ದರಾಮಯ್ಯ

Please login to join discussion

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ
Top Story

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

by ಪ್ರತಿಧ್ವನಿ
October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು
Top Story

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

by ಪ್ರತಿಧ್ವನಿ
October 24, 2025
ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ
Top Story

ಬಿಗ್ ಬಾಸ್ ಮಾಜಿ ಸ್ಪರ್ಧಿ ವಿರುದ್ಧ ಹಿಟ್ ರನ್ ಕೇಸ್..- ಬೈಕ್ ಸವಾರಳಿಗೆ ಕಾಲು ಮುರಿತ

by ಪ್ರತಿಧ್ವನಿ
October 24, 2025
ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ
Top Story

ದೀಪಾವಾಳಿ ಹಬ್ಬ ಹಿನ್ನಲೇ ದೀಪಾ ಕಾಯೊ ನೆಪದಲ್ಲಿ ಜೂಜಾಟ

by ಪ್ರತಿಧ್ವನಿ
October 24, 2025
HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ
Top Story

HD Kumarswamy : ಜೆಡಿಎಸ್ ರಾಜ್ಯಾಧ್ಯಕ್ಷರ ಬದಲಾವಣೆ ಚರ್ಚೆಗೆ HDK ಸ್ಪಷ್ಟನೆ

by ಪ್ರತಿಧ್ವನಿ
October 24, 2025
https://www.youtube.com/watch?v=1mlC4BzAl-w
Pratidhvai.com

We bring you the best Analytical News, Opinions, Investigative Stories and Videos in Kannada

Follow Us

Browse by Category

Recent News

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

ಡಾಕ್ಟರ್ ಪತ್ನಿ ಕೊಲೆ; ಫಲಿಸಲಿಲ್ಲ ಆರೋಪಿ ಡಾ.ಮಹೇಂದ್ರ ರೆಡ್ಡಿ ಪ್ರಾರ್ಥನೆ

October 24, 2025
ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

ಯತೀಂದ್ರ ನಾಯಕತ್ವ ಹೇಳಿಕೆ – ಡಿಕೆಶಿಯಿಂದ ಹೈಕಮಾಂಡ್ ವಿಚಾರ ಮುಟ್ಟಿಸುವ ಸುಳಿವು

October 24, 2025
  • About
  • Advertise
  • Privacy & Policy
  • Contact

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!