ರಾಜ್ಯ ರಾಜಕಾರಣದಲ್ಲಿ ತೀವ್ರ ಗದ್ದಲ ಎಬ್ಬಿಸಿದ ಗುತ್ತಿಗೆದಾರ ಸಂತೋಷ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮಾಜಿ ಸಚಿವ ಈಶ್ವರಪ್ಪ ಪರ ಬ್ಯಾಟ್ ಬೀಸಿದ್ದಾರೆ.
ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಸುದ್ದಿಗಾರರನ್ನು ಉದ್ದೇಶಿಸಿ ಮಾತನಾಡಿದ ಹೆಚ್ ಡಿ ಕೆ ಈ ಹಿಂದೆ ನಾನು ಈಶ್ವರಪ್ಪನವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದೆ ಅದರಂತೆ ಅವರು ರಾಜೀನಾಮೆ ನೀಡಿದ್ದಾರೆ. ಆದರೆ, ಈಶ್ವರಪ್ಪ ಬಂಧನ ಯಾಕಾಗಬೇಕು ಈಶ್ವರಪ್ಪ ಪ್ರಕರಣದಲ್ಲಿ ಬೀದಿಗಿಳಿದವರು ಧರ್ಮಗಳ ನಡುವೆ ಸಂಘರ್ಷ ಉಂಟಾದಾಗ ಯಾಕೆ ಮೌನಕ್ಕೆ ಶರಣಾದ್ದು ಯಾಕೆ ಎಂದು ಕಾಂಗ್ರೆಸ್ ನಾಯಕರನ್ನು ಪ್ರಶ್ನಿಸಿದ್ದಾರೆ.
ಸರ್ವಜನಾಂಗದ ಶಾಂತಿಯ ತೋಟ ಕರ್ನಾಟಕವನ್ನು ಹಾಳು ಮಾಡುವಾಗ ಇದೇ ಕಾಂಗ್ರೆಸ್ ನಾಯಕರು ಎಲ್ಲಿಗೆ ಹೋಗಿದ್ದರು. ಈಗ ಇದೇ ಈಶ್ವರಪ್ಪ ವಿರುದ್ದ ಕಮಿಷನ್ ಆರೋಪ ಮಾಡುತ್ತಿದ್ದಾರೆ. ಈ ಹಿಂದೆ ಬೆಳಗಾವಿ ಡಿವೈಎಸ್ಪಿಯಾಗಿದ್ದ ಕಲ್ಲಪ್ಪ ಹಂಡಿಭಾಗ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಂದಿನ ಸಿಎಂ ಸಿದ್ದರಾಮಯ್ಯ ರಾಜೀನಾಮೆ ಕೊಟ್ರಾ. ಹಂಡಿಭಾಗ್ ರಾಜ್ಯ ಸರ್ಕಾರದ ನಡವಳಿಕೆಯಿಂದಾಗಿ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ಹೆಚ್.ಡಿ.ಕೆ ಆರೋಪಿಸಿದ್ದರು.
ಕಾಂಗ್ರೆಸ್ನವರಿಗೆ ಮಾಡಲು ಬೇರೆ ಏನು ಕೆಲಸ ಇಲ್ಲ ಇವರುಗಳಿಗೆ ಚುನಾವಣೆ ಸಂದರ್ಭದಲ್ಲಿ ಮಾತನಾಡಲು ಬೇರೆ ವಿಚಾರಗಳಿಲ್ಲ ಕನಿಷ್ಠ ಜನರ ಸಮಸ್ಯೆಗಳ ಬಗೆಯೂ ಸಹ ಧ್ವನಿಯನ್ನು ಎತ್ತುವುದಿಲ್ಲ. ಈಶ್ವರಪ್ಪ ರಾಜೀನಾಮೆ ಕೊಟ್ಟ ಬಳಿಕ ಬಂಧನವಾಗಬೇಕು ಎಂದು ಹೋರಾಟ ಮಾಡುತ್ತಿದ್ದಾರೆ ಇದರಿಂದ ಏನು ಉಪಯೋಗವಿಲ್ಲ ಎಂದು ಕಿಡಿಕಾರಿದ್ದಾರೆ.
ಈಗ ಸಂತೋಷ್ ಆತ್ಮಹತ್ಯೆ ಪ್ರಕರಣವನ್ನಿಟ್ಟುಕೊಂಡು ಹೋರಾಟ ಮಾಡುತ್ತಿದ್ದಾರೆ. ಈ ಎರಡು ರಾಷ್ಟ್ರೀಯ ಪಕ್ಷಗಳನ್ನು ಜನ ಎಲ್ಲಿಯವರೆಗೂ ಸಹಿಸಿಕೊಳ್ತಾರೆ ನಾಡಿನ ಜನತೆ ರಾಷ್ಟ್ರೀಯ ಪಕ್ಷಗಳನ್ನು ತಿರಸ್ಕರಿಸುವ ಕಾಲ ಹತ್ತಿರವಿದೆ ಎಂದು ಹೇಳಿದ್ದಾರೆ.
ಸಂತೋಷ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹಾನಾಯಕನ ಹೆಸರು ಪ್ರಸ್ತಾವನೆಯಾಗಿರುವ ಕುರಿತು ಪ್ರತಿಕ್ರಿಯಸಿದ ಹೆಚ್.ಡಿ.ಕೆ ನನ್ನಗೆ ಯಾವ ಮಹಾನಾಯಕ, ದುರಂತ ನಾಯಕ ಅಥವಾ ಕಳ್ಳನಾಯಕನ್ನು ಗೊತ್ತಿಲ್ಲ. ವಾಸ್ತವಾಂಶವನ್ನು ಸರ್ಕಾರ ಜನತೆಯ ಮುಂದಿಡಬೇಕು. ಕೂಲಂಕೂಶವಾಗಿ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ್ದಾರೆ.