• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Saturday, August 29, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕರ್ನಾಟಕದ ವಿಚಾರದಲ್ಲಿ ಬಿಜೆಪಿಯಿಂದ ರಾಜಧರ್ಮ ಪಾಲನೆಯಾಗುತ್ತಿಲ್ಲ : ಹೆಚ್‌.ಡಿ.ಕೆ

Any Mind by Any Mind
January 7, 2023
in ಕರ್ನಾಟಕ, ರಾಜಕೀಯ
0
Share on WhatsAppShare on FacebookShare on Telegram

ಶಾಸ್ತ್ರೀಯ ಭಾಷೆಗಳಿಗೆ ಸಿಗುತ್ತಿರುವ ಮನ್ನಣೆ ಹಾಗೂ ಅನುದಾನ ಕನ್ನಡ ಭಾಷೆಗೆ ಸಿಗುತ್ತಿಲ್ಲ ಎಂದು ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಬೇಸರ ಹೋರಹಾಕಿದ್ದಾರೆ. ಕೇಂದ್ರ ಸರ್ಕಾರದ ಮಲತಾಯಿ ಧೋರಣೆ ಖಂಡಿಸಿ ಸರಣಿ ಟ್ವೀಟ್‌ಗಳನ್ನ ಮಾಡಿದ್ದಾರೆ.

ADVERTISEMENT

ಕನ್ನಡಕ್ಕೆ ಶಾಸ್ತ್ರೀಯ ಸ್ಥಾನಮಾನ ಸಿಕ್ಕಿ 15 ವರ್ಷಗಳೇ ಆಯಿತು.13 ವರ್ಷಗಳಲ್ಲಿ ಕನ್ನಡಕ್ಕೆ ಸಿಕ್ಕಿದ ಅನುದಾನ ಕೇವಲ 3 ಕೋಟಿ ರೂ. ತಮಿಳಿಗೆ ಸಿಕ್ಕಿದ್ದು 43 ಕೋಟಿ. ಆದರೆ, ಸಂಸ್ಕೃತಕ್ಕೆ ಇವರು ಕೊಟ್ಟಿದ್ದು ಬರೋಬ್ಬರಿ 643 ಕೋಟಿ ಕನ್ನಡದ ಕಣ್ಣಿಗೆ ಸುಣ್ಣ, ಬೇರೆ ಭಾಷೆಗಳಿಗೆ ಬೆಣ್ಣೆ. ಕನ್ನಡ ತಬ್ಬಲಿ ಮಕ್ಕಳ ಭಾಷೆಯೇ? ಎಂದು ಟ್ವೀಟ್‌ ಮಾಡಿ ಕೇಂದ್ರ ಸರ್ಕಾರವನ್ನ ಪ್ರಶ್ನಿಸಿದ್ದಾರೆ.

ಕೇಂದ್ರದಿಂದ ಕನ್ನಡಕ್ಕೆ ಆಗುತ್ತಿರುವ ಅನುದಾನದ ಅನ್ಯಾಯದ ವಿರುದ್ಧ ನಾನು ಅನೇಕ ಸಲ ದನಿ ಎತ್ತಿದ್ದೇನೆ. ಬಿಜೆಪಿ,ಕಾಂಗ್ರೆಸ್ ಪಕ್ಷಗಳ ಆಡಳಿತಕ್ಕೆ ಅದು ಕೇಳಲೇ ಇಲ್ಲ. ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಬಂದ ಮೇಲೆ ಸಂಸ್ಕೃತ, ಹಿಂದಿ ತುಷ್ಟೀಕರಣದಿಂದ ಕನ್ನಡಕ್ಕೆ ಅದೆಷ್ಟು ವಂಚನೆ ಆಗಿದೆ ಎನ್ನುವುದಕ್ಕೆ ಅನುದಾನದ ತಾರತಮ್ಯವೇ ಸಾಕ್ಷಿ ಎಂದು ಕಿಡಿಕಾರಿದ್ದಾರೆ.

ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿ ಶ್ರೀ @BSBommai ಅವರ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ.3/5

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023

ಈಗ 86ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾದ ಡಾ.ದೊಡ್ದರಂಗೇಗೌಡ ಅವರೇ ಸಮ್ಮೇಳನದ ತಮ್ಮ ಭಾಷಣದಲ್ಲಿ ಅನುದಾನದ ಅನ್ಯಾಯವನ್ನು ಮುಖ್ಯಮಂತ್ರಿಗಳ ಎದುರೇ ಬಿಜೆಪಿ ಸರಕಾರದ ಮುಖಕ್ಕೆ ರಾಚುವಂತೆ ಹೇಳಿದ್ದಾರೆ. ಈ ವಿಷಯ ಪ್ರಸ್ತಾಪ ಮಾಡಿದ ಅವರನ್ನು ಮನಸಾರೆ ಅಭಿನಂದಿಸುತ್ತೇನೆ.

ಹಿಂದಿ ಹೇರಿಕೆ ಮೂಲಕ ಸದಾ ಕನ್ನಡದ ಮೇಲೆ ಪ್ರಹಾರ ನಡೆಸುತ್ತಲೇ ಇರುವ ಬಿಜೆಪಿಗೆ ಅವಕಾಶ ಸಿಕ್ಕಾಗಲೆಲ್ಲ ಕನ್ನಡದ ಬೇರುಗಳಿಗೆ ಕೊಡಲಿಪೆಟ್ಟು ಕೊಡುತ್ತಿದೆ. ನೆಲ, ಜಲ, ಭಾಷೆ ವಿಷಯದಲ್ಲಿ ಕರ್ನಾಟಕಕ್ಕೆ ಆ ಪಕ್ಷವು ಅನ್ಯಾಯದ ಸರಣಿಯನ್ನೇ ಮುಂದುವರಿಸಿದೆ. ಬೆಳಗಾವಿ ವಿಷಯದಲ್ಲಿ ವರ್ತಿಸುತ್ತಿರುವ ರೀತಿ ಕಳವಳಕಾರಿ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.

ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ ಎಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಸರಣಿ ಟ್ವೀಟ್‌ ಮಾಡಿ ವಾಗ್ದಾಳಿ ನಡೆಸಿದ್ದಾರೆ.

ಒಕ್ಕೂಟ ಭಾಷೆಗಳ ನಡುವೆ ಅನುದಾನದಲ್ಲಿ ಮಾತ್ರವಲ್ಲ, ಯಾವ ವಿಷಯದಲ್ಲೂ ತಾರತಮ್ಯ ಎಸಗಬಾರದು. ಈ ವ್ಯವಸ್ಥೆಯಲ್ಲಿ ಆಡಳಿತ ನಡೆಸುವವರಿಗೆ ರಾಜಧರ್ಮ ಪಾಲನೆ ಅತ್ಯಗತ್ಯ. ದೇಶಕ್ಕೆ ಅತಿಹೆಚ್ಚು ತೆರಿಗೆ ತೆರುತ್ತಿರುವ ಕರ್ನಾಟಕದ ವಿಷಯದಲ್ಲಿ ಇಂಥ ರಾಜಧರ್ಮ ಪಾಲನೆ ಆಗುತ್ತಿಲ್ಲ.5/5#ಕನ್ನಡ

— ಹೆಚ್.ಡಿ.ಕುಮಾರಸ್ವಾಮಿ | H.D.Kumaraswamy (@hd_kumaraswamy) January 7, 2023
Tags: BJPCongress Partyನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ತನಿಖೆ ಬಳಿಕ ಎಲ್ಲಾ ಸತ್ಯಾಸತ್ಯತೆ ಹೊರಬರಲಿದೆ : ಸಿಎಂ ಬೊಮ್ಮಾಯಿ

Next Post

ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ಬಂಧನ

Related Posts

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ
Top Story

‘RSS ಬಗ್ಗೆ ಆಗ ವಿಷಕಾರಿ ಎಂದಿದ್ದರು, ಈಗ ಏಕಾಏಕಿ ಪ್ರೀತಿ ಏಕೆ?’: ಕುಮಾರಸ್ವಾಮಿಗೆ KPCC ಪ್ರಶ್ನೆ

by ಪ್ರತಿಧ್ವನಿ
August 28, 2026
0

ಬೆಂಗಳೂರು, ಆ.28: ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರು ಕರ್ನಾಟಕ ಸರ್ಕಾರ ಹಾಗೂ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಮಾಡಿರುವ ಆರೋಪಗಳಿಗೆ ಕೆಪಿಸಿಸಿ ಮಾಧ್ಯಮ ಮತ್ತು...

Read moreDetails
ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

ಫಲಿಸಿದ ವಿಪಕ್ಷಗಳ ಅಸ್ತ್ರ: ಕಣ್ಣೀರು ಹಾಕುತ್ತಲೇ ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ

August 28, 2026
ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

ಕರ್ನಾಟಕ ಪೊಲೀಸರಿಗೆ ಸಿಹಿಸುದ್ದಿ: ಸಂಕಷ್ಟ ಭತ್ಯೆ ಶೇ.50ರಷ್ಟು ಹೆಚ್ಚಳಕ್ಕೆ ಸಿಎಂ ಭರವಸೆ

August 28, 2026
OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

OMR ಶೀಟ್ ತಿದ್ದುಪಡಿ, ಸಿಸಿಟಿವಿ ಹಾಳು..ಅಕ್ರಮ ನೇಮಕಾತಿ ವಿರುದ್ಧ ಯುವ ಜನತೆ ಬೀದಿಗಿಳಿಯಿರಿ: ಕುಮಾರಸ್ವಾಮಿ

August 28, 2026
ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

ರೈಲ್ವೆ ಚತುಷ್ಪಥ ಯೋಜನೆಯಲ್ಲಿ ರಾಜ್ಯಕ್ಕೆ ತೀವ್ರ ಅನ್ಯಾಯ: ಸಚಿವ ಎಂ.ಬಿ ಪಾಟೀಲ್‌ ಖಂಡನೆ

August 28, 2026
Next Post
ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ಬಂಧನ

ಮಹಿಳೆ ಮೇಲೆ ಮೂತ್ರ ವಿಸರ್ಜನೆ ಪ್ರಕರಣ; ಆರೋಪಿ ಬಂಧನ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada