• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Tuesday, April 21, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Uncategorized

ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ

Any Mind by Any Mind
September 26, 2021
in Uncategorized
0
ಜಾತಿವಾರು ಜನಗಣತಿ ವರದಿ ಬಿಡುಗಡೆ ಮಾಡದಂತೆ ಪುಟ್ಟರಂಗ ಶೆಟ್ಟರನ್ನು ಬೆದರಿಸಿದ್ದ HDK: ಸಿದ್ದರಾಮಯ್ಯ
Share on WhatsAppShare on FacebookShare on Telegram

ಜೆಡಿಎಸ್–ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿಯಾಗಿದ್ದ ಎಚ್.ಡಿ. ಕುಮಾರಸ್ವಾಮಿ ಹಿಂದುಳಿದ ವರ್ಗಗಳ ಆಯೋಗದ ಜಾತಿವಾರು ಜನಗಣತಿ ವರದಿಯನ್ನು ಬಿಡುಗಡೆ ಮಾಡದಂತೆ ಆಗ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾಗಿದ್ದ ಪುಟ್ಟರಂಗ ಶೆಟ್ಟಿ ಅವರನ್ನು ಬೆದರಿಸಿದ್ದರು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದರು.

ADVERTISEMENT

ಕರ್ನಾಟಕ ರಾಜ್ಯ ಮಡಿವಾಳರ ಸಂಘ ಶನಿವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾಗವಹಿಸಿ ಕರೋನದಿಂದ ಮೃತರಾದವರ ಕುಟುಂಬದವರಿಗೆ ಪರಿಹಾರ ಹಾಗೂ ದಿನಸಿ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಅವರು . ‘ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹಿಂದುಳಿದ ವರ್ಗಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿವಾರು ಜನಗಣತಿ) ಪೂರ್ಣಗೊಂಡಿರಲಿಲ್ಲ. ನಂತರ ಬಂದ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮುಕ್ತಾಯವಾಯಿತು. ವರದಿ ಬಹಿರಂಗವಾಗದಂತೆ ಕುಮಾರಸ್ವಾಮಿ ತಡೆದರು’ ಎಂದರು.

ಮಡಿವಾಳ ಸಮುದಾಯ ಅತ್ಯಂತ ಹಿಂದುಳಿದಿದೆ. ನಾನು ಸಿಎಂ ಆಗಿದ್ದಾಗ ಈ ಸಮುದಾಯಕ್ಕೆ ಪ್ರತ್ಯೇಕ ಅನುದಾನ ನೀಡಿದ್ದೆ. ಹಿಂದುಳಿದವರು ಜಾತಿ ಹೆಸರಿನಲ್ಲಿ ಸಮ್ಮೇಳನ ಮಾಡಿದರೆ ತಪ್ಪಲ್ಲ. ಹಿಂದುಳಿದವರೇ ಸಂಘಟಿತರಾಗಿ ಸಮ್ಮೇಳನ ಮಾಡಬೇಕು.

ಕೆಲವರು ಹೆಸರಿಗೆ ಮಾತ್ರ ಬಸವಣ್ಣನ ಹೆಸರು ಹೇಳುತ್ತಾರೆ. ಆದರೆ, ವಿರುದ್ಧ ದಿಕ್ಕಿನಲ್ಲಿ ನಡೆಯುತ್ತಾರೆ ಎಂದು ಹೇಳಿದ್ದಾರೆ. ಇವನಾರವ ಇವನಾರವ, ಇವ ನಮ್ಮವ ಇವ ನಮ್ಮವ ಎಂದು ವಚನ ಹೇಳುತ್ತಾರೆ. ಆದರೆ, ಪಕ್ಕದಲ್ಲಿ ನಿಂತು ನೀವು ಯಾವ ಜಾತಿ ಎಂದು ಕೇಳುತ್ತಾರೆ ಸಂವಿಧಾನ ಅತ್ಯಂತ ಒಳ್ಳೆಯದು. ಆದರೆ ಸಂವಿಧಾನ ಒಳ್ಳೆಯವರ ಕೈಯಲ್ಲಿರಬೇಕು. ಆಗ ಜನರಿಗೆ ಅನುಕೂಲವಾಗುತ್ತದೆ.

ಹಿಂದುಳಿದ ವರ್ಗಗಳ ಶಾಶ್ವತ ಆಯೋಗ ನಡೆಸುತ್ತಿದ್ದ ಜಾತಿ ಸಮೀಕ್ಷೆ ವರದಿ ನಾನು ಸಿಎಂ ಆಗಿದ್ದಾಗ ಪೂರ್ಣಗೊಂಡಿರಲಿಲ್ಲ. ಕುಮಾರಸ್ವಾಮಿಯವರು ಸಿಎಂ ಆಗಿದ್ದಾಗ ಪೂರ್ಣವಾಯ್ತು. ಆಗ ಪುಟ್ಟರಂಗಶೆಟ್ಟಿ ಹಿಂದುಳಿದ ವರ್ಗಗಳ ಸಚಿವರಾಗಿದ್ದರು. ವರದಿ ಪೂರ್ಣವಾಗಿದೆ ಎಂದು ಅವರು ಕುಮಾರಸ್ವಾಮಿಯವರಿಗೆ ಮಾಹಿತಿ ನೀಡಿದರು. ಆದರೆ, ವರದಿ ಬಿಡುಗಡೆ ಮಾಡಲು ಅವರಿಗೆ ಅವಕಾಶ ಕೊಡಲಿಲ್ಲ.

ಪುಟ್ಟರಂಗಶೆಟ್ಟಿ ಅವರನ್ನು ಹೆದರಿಸಿದ ಕುಮಾರಸ್ವಾಮಿಯವರು ವರದಿ ಬಿಡುಗಡೆ ಮಾಡಿಸಲಿಲ್ಲ. ಕುಮಾರಸ್ವಾಮಿಯವರಿಗೆ ಹೆದರಿ ಪುಟ್ಟರಂಗಶೆಟ್ಟಿ ವರದಿ ಬಿಡುಗಡೆ ಮಾಡುವ ಗೋಜಿಗೆ ಹೋಗಲಿಲ್ಲ. ಇದ್ದುದನ್ನು ಇದ್ದಹಾಗೆ ಹೇಳಿದರೆ ಕುಮಾರಸ್ವಾಮಿಯವರಿಗೆ ಕೋಪ. ಸಿದ್ದರಾಮಯ್ಯ ಕೂತು ವರದಿ ಬರೆಸಿಬಿಟ್ಟಿದ್ದಾನೆ ಎನ್ನುತ್ತಾರೆ ಅವರು ಎಂದು ಈ ವೇಳೆ ಹರಿಹಾಯ್ದರು.

ಅದು ಎಲ್ಲ ಜಾತಿ, ಜನಾಂಗದವರ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ ಸ್ಥಿತಿಗತಿ ಅರಿಯುವ ವರದಿ. ಯಾರಿಗೂ ಅನ್ಯಾಯ ಮಾಡುವ ಉದ್ದೇಶ ಇಲ್ಲ.ಆದರೂ ವರದಿಗೆ ವಿರೋಧ ವ್ಯಕ್ತಪಡಿಸುತ್ತಾರೆ. ಮುಂದಿನ ಬಾರಿ ನಾವು ಅಧಿಕಾರಕ್ಕೆ ಬಂದೇ ಬರುತ್ತೇವೆ. ಆಗ ಮಡಿವಾಳ ಸಮಾಜಕ್ಕೆ ಎಂಎಲ್ಸಿ ಸ್ಥಾನ ನೀಡುತ್ತೇವೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

Tags: BJPCongress PartyCovid 19ಎಚ್ ಡಿ ಕುಮಾರಸ್ವಾಮಿಕರೋನಾಕೋವಿಡ್-19ಜಾತಿವಾರು ಜನಗಣತಿಜೆಡಿಎಸ್–ಕಾಂಗ್ರೆಸ್ಬಿಜೆಪಿಮಡಿವಾಳರ ಸಂಘಸಿದ್ದರಾಮಯ್ಯಹಿಂದುಳಿದವರೇ ಸಂಘ
Previous Post

ಕಮಲಾ ಹ್ಯಾರಿಸ್ US ಉಪಾಧ್ಯಕ್ಷೆ ಆಗಬಹುದಾದರೆ, ಸೋನಿಯಾ ಗಾಂಧಿ ಪ್ರಧಾನಮಂತ್ರಿ ಯಾಕಾಗಬಾರದು? ಕೇಂದ್ರ ಸಚಿವ ‌ಅಠಾವಳೆ

Next Post

ದೆಹಲಿ ಕೋರ್ಟ್‌ನಲ್ಲೇ ಶೂಟೌಟ್; ನಟೋರಿಯಸ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಜಿತೇಂದರ್ ಗೋಗಿ ಯಾರು?

Related Posts

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ
Uncategorized

ಮಹಿಳಾ ಮೀಸಲಾತಿ ಮಸೂದೆ ಚರ್ಚೆ ನಡುವೆ ರಾಹುಲ್ ಗಾಂಧಿ ಹಾಸ್ಯ ಚಟಾಕಿ

by ಪ್ರತಿಧ್ವನಿ
April 17, 2026
0

ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಾದ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಪುನರ್ವಿಂಗಡಣೆ ಕುರಿತ ಚರ್ಚೆ ಸಂಸತ್‌ನಲ್ಲಿ ತೀವ್ರಗೊಳ್ಳುತ್ತಿರುವ ನಡುವೆ, ಸದನದಲ್ಲಿ ರಾಜಕೀಯ ಗದ್ದಲದ ಜೊತೆಗೆ...

Read moreDetails
ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

ಭದ್ರತಾ ಬೆದರಿಕೆ ಭೀತಿ: ಅಮೆರಿಕಾ ಮಾತುಕತೆ ವಿಫಲವಾದ ಬಳಿಕ ಇರಾನ್ ತಂಡದ ರಹಸ್ಯ ಪ್ರಯಾಣ

April 17, 2026
ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

ಬೆಂಗಳೂರು ಜನಗಣತಿ ಕಾರ್ಯಕ್ಕೆ ಚಾಲನೆ: ಮನೆಮನೆ ಸಮೀಕ್ಷೆ ಆರಂಭ

April 16, 2026
ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

ಧಾರವಾಡದಲ್ಲಿ ಕಾಂಗ್ರೆಸ್ ಯುವ ಮುಖಂಡ ಫೈರೋಜ್ ಪಠಾಣ್ ಹತ್ಯೆ: ಕೇಸ್‌ ಭೇದಿಸಿದ ಪೊಲೀಸರು

April 13, 2026
ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

ಡಿಎಂಕೆ ವಿರುದ್ಧ ವಿಜಯ್ ವಾಗ್ದಾಳಿ ಹಾಗೂ ವಿಚ್ಚೇದನ ಬಗ್ಗೆ ಹೀಗೆ ಹೇಳಿದರು !

April 11, 2026
Next Post
ದೆಹಲಿ ಕೋರ್ಟ್‌ನಲ್ಲೇ ಶೂಟೌಟ್; ನಟೋರಿಯಸ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಜಿತೇಂದರ್ ಗೋಗಿ ಯಾರು?

ದೆಹಲಿ ಕೋರ್ಟ್‌ನಲ್ಲೇ ಶೂಟೌಟ್; ನಟೋರಿಯಸ್ ಗ್ಯಾಂಗ್‌ನಿಂದ ಹತ್ಯೆಗೀಡಾದ ಜಿತೇಂದರ್ ಗೋಗಿ ಯಾರು?

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada