• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, April 22, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಬಿಎಂಎಸ್ ಟ್ರಸ್ಟ್ ಅಕ್ರಮಕ್ಕೂ ಚನ್ನಪಟ್ಟಣ ಘಟನೆಗೂ ಸಂಬಂಧ ಇಲ್ಲ : ಮಾಜಿ ಸಿಎಂ ಹೆಚ್‌.ಡಿ.ಕೆ

ಪ್ರತಿಧ್ವನಿ by ಪ್ರತಿಧ್ವನಿ
October 3, 2022
in ಕರ್ನಾಟಕ, ರಾಜಕೀಯ
0
ಬಿಎಂಎಸ್ ಟ್ರಸ್ಟ್ ಅಕ್ರಮಕ್ಕೂ ಚನ್ನಪಟ್ಟಣ ಘಟನೆಗೂ ಸಂಬಂಧ ಇಲ್ಲ : ಮಾಜಿ ಸಿಎಂ ಹೆಚ್‌.ಡಿ.ಕೆ
Share on WhatsAppShare on FacebookShare on Telegram

ಚನ್ನಪಟ್ಟಣದ ವಿಧಾನ ಪರಿಷತ್ ಸದಸ್ಯರಿಗೆ ಕೋರಿಕೆ ಮೇರೆಗೆ 50 ಕೋಟಿ ರೂಪಾಯಿ ಅನುದಾನ ನೀಡಿದಂತೆ ನಮ್ಮ ಪಕ್ಷದ ಎಲ್ಲ ವಿಧಾನ ಪರಿಷತ್ ಸದಸ್ಯರಿಗೂ 50 ಕೋಟಿ ರೂ. ಅನುದಾನ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿಯನ್ನು ಒತ್ತಾಯಿಸಿದ್ದಾರೆ.

ADVERTISEMENT

ಅನುದಾನ ಹಂಚಿಕೆಯಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ. ಒಬ್ಬರಿಗೆ 50 ಕೋಟಿ ಅನುದಾನ ಕೊಟ್ಟ ಬಗ್ಗೆ ತಕರಾರಿಲ್ಲ. ಅದೇ ಉದಾರತೆಯನ್ನು ಮುಖ್ಯಮಂತ್ರಿಗಳು ನಮ್ಮ ಪಕ್ಷದ ಎಲ್ಲ ವಿಧಾನ ಪರಿಷತ್ ಸದಸ್ಯರ ಬಗ್ಗೆಯೂ ತೋರಬೇಕು ಎಂದು ಆಗ್ರಹಿಸಿದ್ದಾರೆ.

ಕಲಾವಿದರ ಕೋಟಾದಲ್ಲಿ ಮೇಲ್ಮನೆಗೆ ನಾಮಕರಣಗೊಂಡ ಸದಸ್ಯರೊಬ್ಬರಿಗೆ ಅನುದಾನ ನೀಡಿದ್ದಾರೆ ಮುಖ್ಯಮಂತ್ರಿಗಳು. ಅದೇ ಮೇಲ್ಮನೆಗೆ ವಿಧಾನಸಭೆಯಿಂದ, ಸ್ಥಳೀಯ ಸಂಸ್ಥೆಗಳಿಂದ, ವಿವಿಧ ಕ್ಷೇತ್ರಗಳಿಂದ ನಾಮಕರಣಗೊಂಡ ಇತರೆ ಸದಸ್ಯರೂ ಇದ್ದಾರೆ. ಅವರಿಗೂ ತಲಾ 50 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಲಿ ಎಂದು ಹೇಳಿದ್ದಾರೆ.

ಚನ್ನಪಟ್ಟಣ ಘಟನೆಗೆ ಯಾರ ಚಿತಾವಣೆ, ಅದರ ಹಿಂದೆ ಯಾರಿದ್ದಾರೆ ಎನ್ನುವುದು ನನಗೆ ಗೊತ್ತಿದೆ. ನನ್ನ ಬಳಿ ದಾಖಲೆಗಳೂ ಇವೆ. ಈ ಬಗ್ಗೆ ಹಿರಿಯ ಅಧಿಕಾರಿಗಳು ಹಾಗೂ ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡುತ್ತೇನೆ. ಶಿಷ್ಟಾಚಾರದ ಲೋಪ ಎಸಗಿದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ಜರುಗಿಸಬೇಕು ಹಾಗೂ ಅವರನ್ನು ಸೇವೆಯಿಂದ ಅಮಾನತು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಶಿಷ್ಟಾಚಾರದ ಲೋಪ ಆಗಿದ್ದರೂ ಆ ಕಾರ್ಯಕ್ರಮ ನಡೆಯಲು ಯಾಕೆ ಬಿಟ್ಟರು ಅನ್ನುವುದೇ ಪ್ರಶ್ನೆ. ನಮ್ಮ ಪಕ್ಷದ ಕಾರ್ಯಕರ್ತರ ಮೇಲೆ ಲಾಠಿ ಚಾರ್ಜ್ ಮಾಡಲು ಪೊಲೀಸರಿಗೆ ಕುಮಕ್ಕು ಕೊಟ್ಟವರು ಯಾರು? ಈ ಬಗ್ಗೆ ಪೂರ್ಣವಾದ ತನಿಖೆ ಆಗಬೇಕು ಎಂದು ಕುಮಾರಸ್ವಾಮಿ ಅವರು ಸರಕಾರವನ್ನು ಆಗ್ರಹಿಸಿದ್ದಾರೆ.

ಶಿಷ್ಟಾಚಾರದಲ್ಲಿ ಲೋಪವಾಗಿದೆ ಸ್ವತಃ ಜಿಲ್ಲಾಧಿಕಾರಿಗಳೇ ಹೇಳಿದ್ದಾರೆ. ಹಾಗಿದ್ದ ಮೇಲೆ ಈ ಕಾರ್ಯಕ್ರಮವನ್ನು ನಡೆಸಲು ಅವಕಾಶ ಕೊಟ್ಟಿದ್ದು ಏಕೆ? ಜನರ ನಡುವೆ ನಡೆಯಬೇಕಿದ್ದ ಕಾರ್ಯಕ್ರಮವನ್ನು ಶಾಸಕರನ್ನು ದೂರವಿಟ್ಟು ಪೊಲೀಸರ ರಕ್ಷಣೆಯಲ್ಲಿ ನಡೆಸಬೇಕಾದ ಪರಿಸ್ಥಿತಿಗೆ ಕಾರಣವೇನು? ಇವೆಲ್ಲ ಅಂಶಗಳು ತನಿಖೆಯಿಂದ ಹೊರಬರಬೇಕು ಎಂದಿದ್ದಾರೆ.

ಬಿಎಂಎಸ್ ಟ್ರಸ್ಟ್ ಅಕ್ರಮವನ್ನು ಸದನದಲ್ಲಿ ಬಯಲು ಮಾಡಿದ್ದಕ್ಕೆ ಸೇಡಿನಿಂದ ಚನ್ನಪಟ್ಟಣ ಘಟನೆಯನ್ನ ರೂಪಿಸಲಾಯಿತ ಎನ್ನುವ ಪ್ರಶ್ನೆಗೆ ಬಿಎಂಎಸ್ ಟ್ರಸ್ಟ್ ಅಕ್ರಮದ ಪ್ರಸ್ತಾಪಕ್ಕೂ ಚನ್ನಪಟ್ಟಣ ಘಟನೆಗೂ ಸಂಬಂಧ ಇಲ್ಲ ಎನ್ನುವುದು ನನ್ನ ಭಾವನೆ. ನನ್ನ ವಿರುದ್ಧ ಚುನಾವಣೆಯಲ್ಲಿ ಪೈಪೋಟಿ ನಡೆಸುವ ಒಂದು ಭಾಗವಾಗಿ ಇದೆಲ್ಲವನ್ನು ಮಾಡುತ್ತಿದ್ದಾರೆ ಎಂದರು.

ತಪ್ಪು ಎಂದು ಗೊತ್ತಿದ್ದರೂ ಸಚಿವ ಡಾ.ಅಶ್ವತ್ಥನಾರಾಯಣ ಇದನ್ನೆಲ್ಲಾ ಸಮರ್ಥನೆ ಮಾಡಿಕೊಳ್ಳುತ್ತಿದ್ದಾರೆ. ಆಗಿರುವುದು 420 ಕೆಲಸ ಎಂದು ಗೊತ್ತಿದ್ದರೂ ಸಚಿವರು ಡಿಫೈನ್ ಮಾಡಿಕೊಳ್ತಾರೆ, ಇನ್ಯಾವುದಕ್ಕೆ ಅವರು ಡಿಫೈನ್ ಮಾಡ್ತಾರೆ ಎಂದು ಅವರು ಖಾರವಾಗಿ ಪ್ರತಿಕ್ರಿಯಿಸಿದರು.

ಶ್ರೀಗಳ ಜತೆ ಸೌಜನ್ಯದ ಭೇಟಿ:

ತರಳಬಾಳು ಸಿರಿಗೆರೆ ಮಠದ ಪರಮಪೂಜ್ಯ ಜಗದ್ಗುರು ಶ್ರೀ ಶ್ರೀ ಶ್ರೀ ಡಾ.ಶಿವಮೂರ್ತಿ ಶಿವಾಚಾರ್ಯ ಮಹಾ ಸ್ವಾಮೀಜಿ ಅವರನ್ನು ಭೇಟಿ ಮಾಡಿದ್ದೆ. ಬಹಳ ದಿನಗಳ ನಂತರ ಭೇಟಿಯಾಗಿ ಶ್ರೀಗಳ ಆಶೀರ್ವಾದ ಪಡೆದಿದ್ದೇನೆ ಎಂದು ಕುಮಾರಸ್ವಾಮಿ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದ್ದಾರೆ.

ಅಕ್ಟೋಬರ್ 8ರಂದು ಬೆಂಗಳೂರಿನ ನ್ಯಾಷನಲ್ ಕಾಲೇಜ್ ಮೈದಾನದಲ್ಲಿ ಜನತಾಮಿತ್ರ ಕಾರ್ಯಕ್ರಮ ಮಾಡಾಗುತ್ತಿದೆ. ಸುಮಾರು ಒಂದು ಲಕ್ಷಕ್ಕೂ ಹೆಚ್ಚು ನಗರವಾಸಿಗಳು ಅಂದು ಸಭೆಯಲ್ಲಿ ಸೇರಲಿದ್ದಾರೆ ಎಂದು ತಿಳಿಸಿದ್ದಾರೆ.

ದತ್ತಾತ್ರೇಯ ಹೊಸಬಾಳೆ ಹೇಳಿಕೆ ಬಗ್ಗೆ ಪ್ರತಿಕ್ರಿಯೆ:

ಇವತ್ತು ಮಾಧ್ಯಮಗಳಲ್ಲಿ ಆರ್ ಎಸ್ ಎಸ್ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿಕೆಯನ್ನು ಗಮನಿಸಿದೆ. ಅವರು ತೀವ್ರ ಆತಂಕ ವ್ಯಕ್ತಪಡಿಸಿದ್ದಾರೆ. ಅವರ ಹೇಳಿಕೆ ಸತ್ಯ ಇದೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ

ಯಾವುದೇ ರೀತಿಯ ಸಂಘರ್ಷದ ವಿಚಾರಗಳನ್ನು ಪ್ರಸ್ತಾಪ ಮಾಡದೆಯೇ ಸಂಘದ ಮುಖ್ಯಸ್ಥರಾಗಿ ಅವರು ದೇಶದ ಈಗಿನ ನಿಜವಾದ ಚಿತ್ರಣ ಮುಂದೆ ಇಟ್ಟಿದ್ದಾರೆ. ಆದಾಯವನ್ನು ಕೇವಲ ಕಾರ್ಪೊರೇಟ್ ಕಂಪನಿಗಳಲ್ಲಿ ಶೇಖರಣೆ ಆಗುತ್ತಿದೆ. ಕುಡಿಯುವ ನೀರು, ಪೌಷ್ಟಿಕಾಹಾರ ಸಮಸ್ಯೆ ಬಗ್ಗೆಯೂ ಕಳವಳ ವ್ಯಕ್ತಪಡಿಸಿದ್ದಾರೆ. ಆರ್ಥಿಕ ಸಮಾನತೆಯ ಬಗ್ಗೆಯೂ ಅವರು ಮಾತನಾಡಿದ್ದಾರೆ. ಇದರ ಬಗ್ಗೆ ಕೇಂದ್ರ ಗಮನ ಹರಿಸಬೇಕು. ಅವರು ಇಟ್ಟ ಸತ್ಯಾಂಶದ ಬಗ್ಗೆ ಗಮನ ಹರಿಸಬೇಕಾಗಿದೆ ಎಂದು ಕುಮಾರಸ್ವಾಮಿ ಅವರು ಸಲಹೆ ಮಾಡಿದರು.

Previous Post

D BOSS | ಡಿ ಬಾಸ್ ಕ್ರಾಂತಿ ಚಿತ್ರದಲ್ಲಿ ರಚ್ಚು ಪಾತ್ರ ಏನು ಗೊತ್ತಾ?

Next Post

ಅಪ್ಪನ ಹೆಸರು ಉಳಿಸ್ತಿನಿ ಅಮ್ಮ Dont worry ಎಂದ ಅಭಿಷೇಕ್‌ ಅಂಬಿರೀಶ್‌ | Abhishek Ambareesh | Birthday

Related Posts

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!
Top Story

ರಾಜಕಾರಣಿಗಳಿಂದ ರಸ್ತೆ ತಡೆ ಮಾಡಿಸಿ ಪ್ರತಿಭಟನೆ : ಕೆರಳಿತು ಸಾರ್ವಜನಿಕರ ತಾಳ್ಮೆ..!

by ಪ್ರತಿಧ್ವನಿ
April 22, 2026
0

ಮುಂಬೈ : ಟ್ರಾಪೀಕ್‌ ಕಿರಿ ಕಿರಿ ಅನುಭವಿಸಿದ ಮಹಿಳೆಯೊಬ್ಬಳು ಪೊಲೀಸ್‌ ಅಧಿಕಾರಿ ಹಾಗೂ ಇಲ್ಲಿನ ಸಚಿವರಿಗೆ ಖಡಕ್‌ ಕ್ಲಾಸ್‌ ತೆಗೆದುಕೊಂಡ ಘಟನೆ ನಡೆದಿದೆ. ಮಂಗಳವಾರ ವರ್ಲಿ ಪ್ರದೇಶದಲ್ಲಿ...

Read moreDetails
ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

ಗಮನ ಸೆಳೆದ ಗದಗ ಜಿಲ್ಲಾಸ್ಪತ್ರೆ : ಬಿಸಿಲಿನ ಬೇಗೆಯಲ್ಲಿ ರೋಗಿಗಳಿ ಆಶಾಕಿರಣವಾದ ವೈದ್ಯರು, ಏನಿದು ವಿಶೇಷ..?

April 22, 2026
ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

ಫಾರಿನ್‌ ಸ್ಟೈಲ್‌ ಲವ್‌ & ಮರ್ಡರ್‌ : ಕಿರಾತಕಿ ಪ್ರೇಮಾಳಿಂದ ಕೊಲೆ ಸ್ಫೋಟಕ ರಹಸ್ಯ ಬಯಲು..

April 22, 2026
ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

ಸಂವಿಧಾನದ ಅಶಯಗಳು -ಬಾಬು ಜಗಜೀವನ್ ರಾಮ್-

April 21, 2026
“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

“ನನ್ನ ಚುನಾವಣೆಯ ವೇಳೆ ಮನೆ ಸುತ್ತ ಹಳದಿ ನೀರು, ಏನೇನೋ ಹಾಕಿ ಹೋಗ್ತಿದ್ರು, ಸಿಎಂಗೂ ಮಾಟ ಮಂತ್ರ ಮಾಡಿಸಿದ್ದಾರೆ ಅನ್ಸುತ್ತೆ”

April 21, 2026
Next Post
ಅಪ್ಪನ ಹೆಸರು ಉಳಿಸ್ತಿನಿ ಅಮ್ಮ Dont worry ಎಂದ ಅಭಿಷೇಕ್‌ ಅಂಬಿರೀಶ್‌ | Abhishek Ambareesh | Birthday

ಅಪ್ಪನ ಹೆಸರು ಉಳಿಸ್ತಿನಿ ಅಮ್ಮ Dont worry ಎಂದ ಅಭಿಷೇಕ್‌ ಅಂಬಿರೀಶ್‌ | Abhishek Ambareesh | Birthday

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada