• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Monday, May 25, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home ಕರ್ನಾಟಕ

ಕುಮಾರಸ್ವಾಮಿಯವರೇ, ನಿಮಗೆ ಯಾಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ

Any Mind by Any Mind
November 13, 2023
in ಕರ್ನಾಟಕ
0
ಕುಮಾರಸ್ವಾಮಿಯವರೇ, ನಿಮಗೆ ಯಾಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? : ಸಿಎಂ ಸಿದ್ದರಾಮಯ್ಯ ಪ್ರಶ್ನೆ
Share on WhatsAppShare on FacebookShare on Telegram

ADVERTISEMENT

ಗ್ಯಾರಂಟಿ ಯೋಜನೆಗಳು ಜಾರಿಯಾಗುತ್ತಿದ್ದಂತೆ ಪ್ರತಿಪಕ್ಷಗಳು ಅಪಸ್ವರ ನುಡಿಯಲು ಪ್ರಾರಂಭಿವೆ. ಅದರಲ್ಲು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಒಂದು ಹೆಜ್ಜೆ ಮುಂದೆ ಹೋಗಿ ಇದೆಲ್ಲ ಡೋಂಗಿ ಗ್ಯಾರಂಟಿಗಳು, ಡುಪ್ಲಿಕೇಟ್ ಸಿಎಂ ಎಂದೆಲ್ಲ ಹೇಳಿದ್ದು, ಇದಕ್ಕೆ ಇಂದು ಸಿಎಂ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ‌.

ಈ ಕುರಿತು ಪೇಸ್ ಬುಕ್ ನಲ್ಲಿ ಬರೆದುಕೊಂಡಿರು ಸಿಎಂ ಸಿದ್ದರಾಮಯ್ಯ, ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿಯವರೇ, ನಿಮಗೆ ಯಾಕೆ ರಾಜ್ಯದ ಬಡವರ ಮೇಲೆ ಈ ಪರಿಯ ದ್ವೇಷ? ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದ ದಿನದಿಂದ ಅದರ ವಿರುದ್ಧ ಇಲ್ಲಸಲ್ಲದ ಆರೋಪ ಮಾಡುವುದು ನಿಮ್ಮ ದಿನಚರಿಯಾಗಿ ಬಿಟ್ಟಿದೆ. ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವುದೆಂದರೆ ಕೋಟ್ಯಂತರ ಸಂಖ್ಯೆಯಲ್ಲಿರುವ ಬಡ ಫಲಾನುಭವಿಗಳನ್ನು ವಿರೋಧಿಸುವುದೆಂದೇ ಅರ್ಥ. ಯಾಕೆ ಬಡವರ ಹೊಟ್ಟೆಗೆ ಹೊಡೆಯುವ ಕಿಚ್ಚು? ಎಂದು ಪ್ರಶ್ನಿಸಿದ್ದಾರೆ.

ರಾಜ್ಯದ ಕೋಟ್ಯಂತರ ಫಲಾನುಭವಿಗಳು ಗ್ಯಾರಂಟಿ ಯೋಜನೆಗಳ ಲಾಭ ಪಡೆದು ಸಂಭ್ರಮಿಸುತ್ತಿದ್ದಾರೆ. ಈ ಸಂಭ್ರಮದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಮತದಾರರೂ ಸೇರಿದ್ದಾರೆ. ಗ್ಯಾರಂಟಿ ಯೋಜನೆಗಳ ಫಲಿತಾಂಶವನ್ನು ತಿಳಿದುಕೊಳ‍್ಳಬೇಕಾದ ಪ್ರಾಮಾಣಿಕ ಉದ್ದೇಶ ನಿಮಗಿದ್ದರೆ ಬೆಂಗಳೂರಿನಲ್ಲಿ ಕೂತು ಪತ್ರಿಕಾಗೋಷ್ಠಿ ನಡೆಸುವುದಲ್ಲ, ಹಳ್ಳಿಗಳಿಗೆ ಹೋಗಿ ಅಲ್ಲಿರುವ ಫಲಾನುಭವಿಗಳನ್ನು ಮಾತನಾಡಿಸಿ ಎಂದು ಕೇಳಿದ್ದಾರೆ.

ಗ್ಯಾರಂಟಿ ಯೋಜನೆಗಳನ್ನು ಬಹಳ ಮುಖ್ಯವಾಗಿ ರಾಜ್ಯದ ಬಡಜನರನ್ನು ಗುರಿಯಾಗಿಸಿಕೊಂಡು ರೂಪಿಸಿರುವಂತಹದ್ದು. ಅದು ಶ್ರೀಮಂತರು ಇಲ್ಲವೇ ಉದ್ಯಮಿಗಳಿಗೆ ನೆರವಾಗುವ ತೆರಿಗೆ ವಿನಾಯಿತಿಯೂ ಅಲ್ಲ, ಅವರ ಸಾಲ ಮನ್ನಾ ಮಾಡುವ ಯೋಜನೆಯೂ ಅಲ್ಲ. ವಂಚಕ ಉದ್ಯಮಿಗಳಿಗೆ ನೆರವಾಗಲು ಜನರ ತೆರಿಗೆ ಹಣವನ್ನು ದುರ್ಬಳಕೆ ಮಾಡುತ್ತಿರುವ ಕೇಂದ್ರ ಸರ್ಕಾರದ ವಿರುದ್ಧ ಸೊಲ್ಲೆತ್ತಲಾಗದ ಕುಮಾರಸ್ವಾಮಿಯವರು ಮೂರು ಹೊತ್ತು ಗ್ಯಾರಂಟಿ ಯೋಜನೆಗಳ ಚುಂಗು ಹಿಡಿದು ಜಗ್ಗಾಡುತ್ತಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸುಳ್ಳು ಆರೋಪಗಳ ಮೂಲಕ ದಿನನಿತ್ಯ ನನ್ನ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ಕುಮಾರಸ್ವಾಮಿ ಅವರೇ, ನನ್ನನ್ನು ಟೀಕಿಸುವುದರಿಂದ ನಿಮ್ಮ ಮನಸಿಗೆ ಶಾಂತಿ ಸಿಗುವುದಿದ್ದರೆ ನಿಮ್ಮ ದ್ವೇಷಾಸೂಯೆ ಮುಂದುವರಿಯಲಿ. ಚುನಾವಣಾ ಸೋಲಿನ ನಿಮ್ಮ ನಿರಾಶೆ, ಅದರಿಂದಾಗಿರುವ ಹತಾಶೆಯನ್ನು ನಾನು ಅರ್ಥಮಾಡಿಕೊಳ್ಳಬಲ್ಲೆ. ಆದರೆ ರಾಜ್ಯದ ಬಡವರನ್ನು ಯಾಕೆ ಈ ರೀತಿ ದ್ವೇಷಿಸುತ್ತಿದ್ದೀರಿ. ಬಡವರ ಕಲ್ಯಾಣಕ್ಕಾಗಿಯೇ ರೂಪಿಸಲಾಗಿರುವ ಯೋಜನೆಗಳನ್ನು ಯಾಕೆ ವಿರೋಧಿಸುತ್ತಿದ್ದೀರಿ? ಕಳೆದ ಚುನಾವಣೆಯಲ್ಲಿ ಅವರು ನಿಮ್ಮ ಪಕ್ಷವನ್ನು ತಿರಸ್ಕರಿಸಿದ್ದಕ್ಕಾಗಿ ದ್ವೇಷವೇ? ಎಂದು ಪ್ರಶ್ನೆಗಳ ಸುರಿಮಳೆ ಹರಿಸಿದ್ದಾರೆ.

ಭಾರತೀಯ ಜನತಾ ಪಕ್ಷದ ಹಿಪಾಕ್ರಟಿಕ್ ನಡವಳಿಕೆಯನ್ನು ಇಡೀ ದೇಶ ಕಂಡು ಛೀಮಾರಿ ಹಾಕುತ್ತಿದೆ. ಮೊನ್ನೆ ಮೊನ್ನೆ ವರೆಗೆ ಗ್ಯಾರಂಟಿ ಯೋಜನೆಗಳು ಸೇರಿದಂತೆ ಇಂತಹ ಯೋಜನೆಗಳೆಲ್ಲ ಬಿಟ್ಟಿಭಾಗ್ಯ ಎಂದು ಗೇಲಿ ಮಾಡುತ್ತಿದ್ದ ಬಿಜೆಪಿ ಐದು ರಾಜ್ಯಗಳ ಚುನಾವಣಾ ಪ್ರಣಾಳಿಕೆಯಲ್ಲಿ ಇಂತಹ ‘’ಬಿಟ್ಟಿ ಭಾಗ್ಯ’’ಗಳನ್ನೆಲ್ಲ ಸೇರಿಸಿ ಬಿಟ್ಟಿದೆ. ಇವರಿಗೆ ರಾಜ್ಯದ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುವ ನೈತಿಕತೆ ಇಲ್ಲ, ಬಿಜೆಪಿ ನಡವಳಿಕೆಯನ್ನು ಪ್ರಶ್ನಿಸುವ ದಮ್ಮು ತಾಕತ್ ಕುಮಾರಸ್ವಾಮಿಯವರಿಗೆ ಇಲ್ ಎಂದಿದ್ದಾರೆ.

ಗ್ಯಾರಂಟಿ ಯೋಜನೆಗಳು ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿನ ಘೋಷಣೆಗಳು. ಅದನ್ನು ಒಪ್ಪಿಕೊಂಡೇ ರಾಜ್ಯದ ಜನ ನಮ್ಮ ಪಕ್ಷವನ್ನು ಗೆಲ್ಲಿಸಿದ್ದಾರೆ. ಈ ಯೋಜನೆಗಳನ್ನು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡೂ ವಿರೋಧಿಸಿದ್ದವು, ಈ ಪಕ್ಷಗಳ ಸೋಲಿಗೆ ಗ್ಯಾರಂಟಿ ಯೋಜನೆಗಳ ಬಗೆಗಿನ ನಿಮ್ಮ ವಿರೋಧವೂ ಕಾರಣ ಎನ್ನುವುದು ನಿಮಗೆ ಇನ್ನೂ ಅರ್ಥವಾಗದೆ ಇರುವುದು ದುರಂತ. ಇದೇ ರೀತಿ ಗ್ಯಾರಂಟಿ ಯೋಜನೆಗಳನ್ನು ವಿರೋಧಿಸುತ್ತಾ ಹೋದರೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳೆರಡಕ್ಕೂ ರಾಜ್ಯದ ಪ್ರಜ್ಞಾವಂತ ಮತದಾರರು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಹೇಳಿದ್ದಾರೆ.

Tags: BJPCongress Partyಎಚ್ ಡಿ ಕುಮಾರಸ್ವಾಮಿನರೇಂದ್ರ ಮೋದಿಬಿ ಎಸ್ ಯಡಿಯೂರಪ್ಪಬಿಜೆಪಿಸಿದ್ದರಾಮಯ್ಯ
Previous Post

ಮಹಿಳೆಯರಿಗೆ ಶುಭ ಸುದ್ದಿ : ಇನ್ನು ಮುಂದೆ ಮೊಬೈಲ್ ನಲ್ಲಿ ಆಧಾರ್ ಕಾರ್ಡ್ ತೋರಿಸಿ ಪ್ರಯಾಣಿಸಲು ಅನುಮತಿ

Next Post

ವನ್ಯಜೀವಿ ಪ್ರಚಾರಕಿಯ ಸಾರ್ಥಕ ಹೆಜ್ಜೆಗಳು : ನಾ ದಿವಾಕರ ಅವರ ಬರಹ

Related Posts

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?
Top Story

ಆಗ್ನೇಯ ಪದವೀಧರ ಕ್ಷೇತ್ರ : ಎಷ್ಟು ಮತದಾರರು? ಕೇತ್ರದ ಹಿನ್ನೆಲೆ ಏನು..?

by ಪ್ರತಿಧ್ವನಿ
May 25, 2026
0

ಬೆಂಗಳೂರು : ರಾಜ್ಯದಲ್ಲಿನ ವಿಧಾನ ಪರಿಷತ್‌ ಕ್ಷೇತ್ರಗಳಿಗೆ ನಡೆಯಲಿರುವ ಚುನಾವಣೆಗೆ ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಆಗ್ನೇಯ ಪದವೀಧರ ಕ್ಷೇತ್ರದ ಚುನಾವಣಾ ಚಟುವಟಿಕೆಗಳು ಜೋರಾಗಿದೆ. ಕ್ಷೇತ್ರದ ಚುನಾವಣೆಗೆ...

Read moreDetails
ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

ಇಂಧನ ಬೆಲೆ ಏರಿಸಿ ಮೋದಿ ಸರ್ಕಾರ ಜನರ ಲೂಟಿಗಿಳಿದಿದೆ : ಸಿಎಂ ಸಿದ್ದರಾಮಯ್ಯ ವಾಗ್ದಾಳಿ

May 25, 2026
ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

ಗೃಹ ಲಕ್ಷ್ಮಿಯರಿಗೆ ಕೊಕ್‌ : ಯಾರಿಗೆಲ್ಲ ರಾಜ್ಯ ಸರ್ಕಾರದಿಂದ ಕಾದಿದೆ ಶಾಕ್..?

May 25, 2026
ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

ಸಿಎಂ ಸಿದ್ದರಾಮಯ್ಯ ದಿಢೀರ್ ದೆಹಲಿಗೆ : ಬದಲಾಗುತ್ತಾ ನಾಯಕತ್ವ..?

May 25, 2026
ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

ಮೋದಿ ಸಂಚಾರ ಮಾರ್ಗದ ಬಳಿ ಸ್ಫೋಟಕ ಪತ್ತೆ ಪ್ರಕರಣ; ಬೆಂಗಳೂರು ಪೊಲೀಸರ ವಿರುದ್ಧ ಈ ಭಾರಿ ಕ್ರಮ!

May 25, 2026
Next Post
ವನ್ಯಜೀವಿ ಪ್ರಚಾರಕಿಯ ಸಾರ್ಥಕ ಹೆಜ್ಜೆಗಳು : ನಾ ದಿವಾಕರ ಅವರ ಬರಹ

ವನ್ಯಜೀವಿ ಪ್ರಚಾರಕಿಯ ಸಾರ್ಥಕ ಹೆಜ್ಜೆಗಳು : ನಾ ದಿವಾಕರ ಅವರ ಬರಹ

Please login to join discussion
https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada