ಜೆಡಿಎಸ್ ಶಾಸಕ ಎಚ್.ಡಿ.ರೇವಣ್ಣ ಅವರ ವಿರುದ್ಧ ಹೊಳೆನರಸೀಪುರದಲ್ಲಿ ದಾಖಲಾದ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಜಾಮೀನು ಅರ್ಜಿ ತೀರ್ಪನ್ನು ಮೇ.20ರವರೆಗೆ ಕಾಯ್ದಿರಿಸಿದೆ.ಹೊಳೆನರಸೀಪುರದಲ್ಲಿ ಹೆಚ್.ಡಿ.ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಗುರುವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿ ಶುಕ್ರವಾರದವರೆಗೆ ವಿಚಾರಣೆ ಮುಂದೂಡಲಾಗಿತ್ತು. ಈ ಷರತ್ತು ಬದ್ಧ ಮಧ್ಯಂತರ ಜಾಮೀನು ಮೇ.20ರವರೆಗೆ ಮುಂದುವರೆಯಲಿದೆ.
ಐದು ಲಕ್ಷ ರು. ಬಾಂಡ್, ಇಬ್ಬರ ಶ್ಯೂರಿಟಿ ಹಾಗೂ ಎಸ್ಐಟಿ ತನಿಖೆಗೆ ಸಹಕರಿಸಬೇಕು ಎಂದು ಷರತ್ತುವಿಧಿಸಿ ಶುಕ್ರವಾರ ಮಧ್ಯಾಹ್ನದವರೆಗೆ ಷರತ್ತು ಬದ್ಧ ಜಾಮೀನು ನೀಡಿತ್ತು. ಇಂದು ಮದ್ಯಾಹ್ನ ವಿಚಾರಣೆ ನಡೆಸಿ ವಾದ-ಪ್ರತಿವಾದ ಆಲಿಸಿದ ಬಳಿಕ ನ್ಯಾಯಾಲಯವು ರೇವಣ್ಣ ಅವರಿಗೆ ಜಾಮೀನು ಕೊಡಬೇಕೋ ಬೇಡವೋ ಎಂಬ ತೀರ್ಪನ್ನು ಸೋಮವಾರ ಅಂದರೆ ಮೇ.20ಕ್ಕೆ ನಿರ್ಧರಿಸುವುದಾಗಿ ಹೇಳಿ ಮುಂದೂಡಿದೆ.