ಜಬಲ್ಪುರ (ಮಧ್ಯಪ್ರದೇಶ): ತನ್ನ ಮದುವೆಯ ಪ್ರಸ್ತಾಪವನ್ನು ತಿರಸ್ಕರಿಸಿದ 40 ವರ್ಷದ ಮಹಿಳೆಗೆ ವ್ಯಕ್ತಿಯೊಬ್ಬ ಬೆಂಕಿ ಹಚ್ಚಿದ ಘಟನೆ ಮಧ್ಯಪ್ರದೇಶದ ಜಬಲ್ಪುರ ಜಿಲ್ಲೆಯಲ್ಲಿ ನಡೆದಿದೆ. ನಂತರ ಮಂಗಳವಾರ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಶೇ.40ರಷ್ಟು ಸುಟ್ಟ ಗಾಯಗಳೊಂದಿಗೆ ಮಹಿಳೆಯನ್ನು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪುರುಷನಿಗೆ ಶೇ.25ರಷ್ಟು ಸುಟ್ಟ ಗಾಯಗಳಾಗಿವೆ. ಇಬ್ಬರೂ ಚಿಕಿತ್ಸೆ ಪಡೆಯುತ್ತಿದ್ದಾರೆ.
ಜಬಲ್ಪುರದ ರಂಝಿ ಪ್ರದೇಶದಲ್ಲಿ ಈ ಘಟನೆ ನಡೆದಿದೆ. ಪೊಲೀಸರ ಪ್ರಕಾರ, ಮಹಿಳೆ ಕಳೆದ ಕೆಲವು ವರ್ಷಗಳಿಂದ ರಂಝಿ ಪ್ರದೇಶದ ಮಸ್ತಾನಾ ಚೌಕ್ನಲ್ಲಿ ಹೂವಿನ ಅಂಗಡಿಯನ್ನು ನಡೆಸುತ್ತಿದ್ದಾರೆ. ಎಂಟು ವರ್ಷಗಳಿಂದ ಪತಿಯಿಂದ ದೂರವಿದ್ದು, ಮೂವರು ಮಕ್ಕಳಿದ್ದಾರೆ. ಸುಮಾರು 40 ವರ್ಷ ವಯಸ್ಸಿನ ನರೇಂದ್ರ ಪಂಜಾಬಿ ಆಕೆಯನ್ನು ಪ್ರೀತಿಸುತ್ತಿರುವುದಾಗಿ ಹೇಳಿಕೊಂಡಿದ್ದು, ಆತನನ್ನು ಮದುವೆಯಾಗಲು ಮುಂದಾಗಿದ್ದ.
ಮಂಗಳವಾರ ಮಹಿಳೆಯ ಅಂಗಡಿಗೆ ತೆರಳಿದ ನರೇಂದ್ರ, ತನ್ನನ್ನು ಮದುವೆಯಾಗುವಂತೆ ಕೇಳಿದ್ದಾನೆ. ತನಗೆ ಮೂವರು ಮಕ್ಕಳಿದ್ದಾರೆ ಎಂದು ಹೇಳಿ ಮಹಿಳೆ ನಿರಾಕರಿಸಿದ್ದಾಳೆ. ಅವಳ ನಿರಾಕರಣೆಯನ್ನು ಕೇಳಿ ನರೇಂದ್ರನು ಕೋಪಗೊಂಡು ಜೊತೆಗೆ ತಂದಿದ್ದ ಪೆಟ್ರೋಲ್ನ್ನು ಆಕೆಯ ಮೇಲೆ ಸುರಿದು ಬೆಂಕಿ ಹಚ್ಚಿದ್ದಾನೆ.
ಬಳಿಕ ತನ್ನ ಮೈಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾನೆ. ಬೆಂಕಿಯನ್ನು ನೋಡಿದ ಸ್ಥಳದಲ್ಲಿದ್ದ ಜನರು ತಕ್ಷಣ ಅವರ ಕಡೆಗೆ ಓಡಿ ಬೆಂಕಿಯನ್ನು ನಂದಿಸಿದರು.ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆಗಾಗಿ ಜಬಲ್ಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಹಿಳೆಗೆ ಶೇ.40ರಷ್ಟು ಸುಟ್ಟ ಗಾಯಗಳಾಗಿದ್ದು, ನರೇಂದ್ರ ಅವರಿಗೆ ಶೇ.25ರಷ್ಟು ಸುಟ್ಟ ಗಾಯಗಳಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.
ಮಹಿಳೆಯ ಕುಟುಂಬಸ್ಥರ ಪ್ರಕಾರ ನರೇಂದ್ರ ಹಲವಾರು ವರ್ಷಗಳಿಂದ ಕಿರುಕುಳ ನೀಡುತ್ತಿದ್ದ. ಅವರ ವಿರುದ್ಧ ಜಬಲ್ಪುರದ ರಂಝಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರೂ ಪೊಲೀಸರು ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಅವರು ಹೇಳಿದ್ದಾರೆ.ಮಹಿಳೆ ಮತ್ತು ಪುರುಷ ಮೂರ್ನಾಲ್ಕು ವರ್ಷಗಳಿಂದ ಸಂಬಂಧ ಹೊಂದಿದ್ದರು ಎಂದು ತನಿಖಾಧಿಕಾರಿ ಬಿಪಿ ಸಿಂಗ್ ಹೇಳಿದ್ದಾರೆ.
“ಮಹಿಳೆ ತನ್ನ ಮದುವೆಯ ಪ್ರಸ್ತಾಪವನ್ನು ನಿರಾಕರಿಸಿದಾಗ, ಅವನು ಅವಳನ್ನು ಬೆಂಕಿ ಹಚ್ಚಿದನು ಮತ್ತು ಆತ್ಮಾಹತ್ಯೆಗೆ ಪ್ರಯತ್ನಿಸಿದನು. ತನಿಖೆಗಳು ನಡೆಯುತ್ತಿವೆ” ಎಂದು ಅವರು ಹೇಳಿದರು.