ಕಾಬೂಲ್: ಉತ್ತರ ಆಫ್ಘಾನಿಸ್ತಾನದಲ್ಲಿ (Afghanistan) ಭಾರೀ ಪ್ರವಾಹ ಉಂಟಾಗಿದ್ದು, ಹೆಚ್ಚಿನ ಸಾವು-ನೋವು ಸಂಭವಿಸಿವೆ.
ಉತ್ತರ ಆಪ್ಘಾನ್ ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, (Rain) ಪರಿಣಾಮ ಹಠಾತ್ ಪ್ರವಾಹ (Flood) ಉಂಟಾಗಿದೆ. ಹೀಗಾಗಿ ಜನ-ಜೀವನ ಸಂಪೂರ್ಣವಾಗಿ ಅಸ್ತವ್ಯಸ್ಥವಾಗಿದೆ. ಪ್ರವಾಹಕ್ಕೆ ಕನಿಷ್ಠ 330ಕ್ಕೂ ಅಧಿಕ ಜನರು ಬಲಿಯಾಗಿದ್ದಾರೆ. ಅಲ್ಲದೇ, ಸುಮಾರು ಜನರು ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ.
ಸಾವಿರಾರು ಮನೆಗಳು ನೆಲಸಮವಾಗಿವೆ. ಸಾವಿನ ಸಂಖ್ಯೆ ಕೂಡ ಹೆಚ್ಚಳವಾಗುವ ಸಾಧ್ಯತೆ ಇದೆ. ಪ್ರವಾಹದಿಂದಾಗಿ ಹಲವಾರು ಜನ ಗಾಯಗೊಂಡಿದ್ದಾರೆ. ಮಹಿಳೆಯರು ಮತ್ತು ಮಕ್ಕಳು ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಪ್ರಾಂತೀಯ ವಿಪತ್ತು ನಿರ್ವಹಣಾ ಇಲಾಖೆಯ ನಿರ್ದೇಶಕ ಹೆದಯತುಲ್ಲಾ ಹಮ್ದರ್ದ್ ಹೇಳಿದ್ದಾರೆ. ಈಗಾಗಲೇ ಪ್ರವಾಹ ಪೀಡಿತ ಪ್ರದೇಶದಲ್ಲಿನ ಜನರ ರಕ್ಷಣಾ ಕಾರ್ಯ ನಡೆಯುತ್ತಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.