ಚೀನಾದ ನೈಋತ್ಯ ಭಾಗದಲ್ಲಿ ಧಾರಾಕಾರ ಮಳೆಯಾಗಿದ್ದು ಸುಮಾರು ಒಂದು ಲಕ್ಷಕ್ಕೂ ಹೆಚ್ಚು ಜನರನ್ನು ಸ್ಥಳೀಯಾಡಳಿತ ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರ ಮಾಡಿದೆ.
ಸಿಚುಅನ್ ಹಾಗೂ ಚೊಂಗ್ಕಿಂಗ್ ಪ್ರಾಂತ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಪರ್ವತ ಪ್ರದೇಶಗಳಲ್ಲಿ ಪ್ರವಾಹದ ಬಗ್ಗೆ ಎಚ್ಚರಿಕೆಯನ್ನು ನೀಡಲಾಗಿದೆ.

ಸಿಚುಅನ್ ಸ್ಥಳೀಯಾಡಳಿತವು ಮುಂಜಾಗ್ರತಾ ಕ್ರಮವಾಗಿ 1,19,000 ಲಕ್ಷ ಜನರನ್ನು ಸ್ಥಳಾಂತರಿಸಿದೆ. ಗ್ಟಾಂಗ್ ಯುಅನ್ ಪ್ರದೇಶದಲ್ಲಿ 18.80 ಸೆ.ಮೀ ಮಳೆಯಾಗಿದ್ದು ಇಲ್ಲಿಯವರೆಗಿನ ಗರಿಷ್ಠ ದಾಖಲೆಯಾಗಿದೆ.
ಭಾರೀ ಮಳೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಹೆಚ್ಚಳವಾಗಿದ್ದು ಕೃಷಿ ಚಟುವಟಿಕೆಗಳು ಆರಂಭವಾಗುವ ಸಮಯದಲ್ಲಿ ಪ್ರವಾಹ ಭೀತಿ ಎದುರಾಗಿದೆ ಎಂದು ವರದಿಯಾಗಿದೆ.