ಬೆಂಗಳೂರು: ಮಲೆನಾಡು, ಕರಾವಳಿ ಭಾಗದಲ್ಲಿ ಮಳೆಯ ಅಬ್ಬರ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರು, ಹಳೆ ಮೈಸೂರು ಭಾಗದ ಹತ್ತು ಜಿಲ್ಲೆಗಳಲ್ಲಿ ಬುಧವಾರದಿಂದ ನಾಲ್ಕು ದಿನ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ.
ತುಮಕೂರು, ಚಾಮರಾಜನಗರ, ರಾಮನಗರ, ಯಾದಗಿರಿ, ಕೋಲಾರ, ರಾಯಚೂರು, ಕೊಪ್ಪಳ ಹಾಗೂ ಕಲಬುರಗಿ, ಹಾವೇರಿ, ಗದಗ ಚಿತ್ರದುರ್ಗ ಜಿಲ್ಲೆಗಳಲ್ಲಿ ಬುಧವಾರದಿಂದ ಎರಡು ದಿನ ಹೆಚ್ಚು ಮಳೆಯಾಗುವ ಸಾಧ್ಯತೆ ಹಿನ್ನಲೆಯಲ್ಲಿ ಆರೆಂಜ್ ಅಲರ್ಟ್ ನೀಡಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಗುರುವಾರದಿಂದ ನಾಲ್ಕು ದಿನ ಹೆಚ್ಚಿನ ಮಳೆಯಾಗುವ ಸಂಭವ ಇದೆ ಎಂದು ಹೇಳಲಾಗಿದೆ.