ರಾಜ್ಯದ ಬಹುತೇಕ ಪ್ರದೇಶಗಳಲ್ಲಿ ಉತ್ತಮ ಮಳೆಯಾಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರುತ್ತಿವೆ. ಈ ಮಧ್ಯೆ ಮುಂದಿನ 24 ಗಂಟೆಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂದಿನ 5 ದಿನಗಳ ಕಾಲ ಭರ್ಜರಿ ಮಳೆ ಬೀಳುತ್ತದೆ ಎಂದು ಹವಾಮಾನ ಇಲಾಖೆ ಸೂಚಿಸಿದ್ದು, 24 ಗಂಟೆ ಭಾರೀ ಮಳೆಯಾಗಲಿದೆ ಎನ್ನಲಾಗಿದೆ.
ಬೆಳಗಾವಿ, ಉತ್ತರ ಕನ್ನಡ, ಧಾರವಾಡದಲ್ಲಿ ಭರ್ಜರಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗದಗ ಮತ್ತು ಕೊಪ್ಫಳ ಜಿಲ್ಲೆಗಳಿಗೂ ರೆಡ್ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ, ಇದೇ ಅವಧಿಯಲ್ಲಿ ವಿಜಯಪುರ, ಬಾಗಲಕೋಟೆ, ಬಳ್ಳಾರಿ, ಹಾವೇರಿ, ಶಿವಮೊಗ್ಗ, ಉಡುಪಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಆಗಿದೆ. ಹೀಗಾಗಿ ರೈತರು ಹಾಗೂ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕಾಗಿದೆ.