• {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy
Wednesday, February 11, 2026
  • Login
Pratidhvani
No Result
View All Result
No Result
View All Result
Pratidhvani
No Result
View All Result
Home Top Story

ಕರ್ನಾಟಕದಲ್ಲಿ ಭಾರೀ ಮಳೆ 6 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಪ್ರತಿಧ್ವನಿ by ಪ್ರತಿಧ್ವನಿ
July 15, 2024
in Top Story, ಇದೀಗ, ಕರ್ನಾಟಕ, ವಿಶೇಷ
0
ಕರ್ನಾಟಕದಲ್ಲಿ ಭಾರೀ ಮಳೆ  6 ಜಿಲ್ಲೆಗಳಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ
Share on WhatsAppShare on FacebookShare on Telegram

ಕರ್ನಾಟಕದಲ್ಲಿ ಮಳೆ ಅಬ್ಬರ ಜೋರಾಗಿದೆ. ಅದರಲ್ಲೂ ಮಲೆನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಎಡಬಿಡದೇ ಸುರಿಯುತ್ತಿದ್ದು, ಜನಜೀವ ಅಸ್ತವ್ಯಸ್ತವಾಗಿದೆ. ಇನ್ನು ರಾಜ್ಯದ ಕರಾವಳಿ ಉತ್ತರ ಹಾಗೂ ದಕ್ಷಿಣ ಒಳನಾಡಿನಲ್ಲೂ ಜು.19ರವರೆಗೆ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.  ಕೆಲವೆಡೆ  ನಾಳೆ ರೆಡ್(Red), ಆರೆಂಜ್(Orange), ಹೆಲ್ಲೋ ಅಲರ್ಟ್ (Yellow Alert) ಘೋಷಣೆ ಮಾಡಲಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕದ ಆರು ಜಿಲ್ಲೆಗಳಲ್ಲಿ ನಾಳೆ (July 16) ಶಾಲಾ-ಕಾಲೇಜುಗಳಿಗೆ(School-College) ರಜೆ  ನೀಡಲಾಗಿದೆ. ಶಿವಮೊಗ್ಗ(Shivamoga), ಉತ್ತರ ಕನ್ನಡ(Uttara Kannada), ಕೊಡಗು(Kodagu), ಹಾಸನ(Hassan), ಉಡುಪಿ(Udupi) ಮತ್ತು ದಕ್ಷಿಣ ಕನ್ನಡ(Dakshina Kannada) ಜಿಲ್ಲೆಗಳಲ್ಲಿ ಮಂಗಳವಾರ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ADVERTISEMENT
ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲಾ-ಕಾಲೇಜುಗಳಿಗೆ ರಜೆ

ಹವಾಮಾನ ಇಲಾಖೆಯು ಉಡುಪಿಯಲ್ಲಿ ನಾಳೆ (ಜುಲೈ 16) ರೆಡ್ ಅಲರ್ಟ್ ಘೋಷಿಸಿದೆ. ಈ ಹಿನ್ನೆಲೆಯಲ್ಲಿ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಡಾ.ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ. ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ ಮತ್ತು ಪಿಯು ಕಾಲೇಜಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಆದ್ರೆ, ಪದವಿ, ಸ್ನಾತಕೋತ್ತರ, ಇಂಜಿನಿಯರಿಂಗ್ ಐಟಿಐ ಡಿಪ್ಲೋಮೋ ಕಾಲೇಜು ರಜೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಸುತ್ತೋಲೆಯಲ್ಲಿ ತಿಳಿಸಿದ್ದಾರೆ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಶಾಲೆಗಳಿಗೆ ಮಾತ್ರ ರಜೆ

ಉತ್ತರ ಕನ್ನಡ ಜಿಲ್ಲೆಯಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಹೀಗಾಗಿ ಹಲಿಯಾಳ ಮತ್ತು ಮುಂಡಗೊಂಡ ತಾಲೂಕು ಹೊರತುಪಡಿಸಿ ಇನ್ನುಳಿದ 10 ತಾಲೂಕುಗಳಿಗೆ ನಾಳೆ ರಜೆ ನೀಡಿ ಜಿಲ್ಲಾಧಿಕಾರಿ ಲಕ್ಷ್ಮೀಪ್ರಿಯಾ ಆದೇಶ ಹೊರಡಿಸಿದ್ದಾರೆ. ಕಾರವಾರ, ಕುಮಟಾ, ಅಂಕೋಲಾ, ಹೊನ್ನಾವರ, ಭಟ್ಕಳ, ಶಿರಸಿ, ಸಿದ್ದಾಪುರ, ಯಲ್ಲಾಪುರ, ಜೋಯಿಡಾ, ದಾಂಡೇಲಿ ತಾಲೂಕಿನ ಶಾಲೆಗಳಿಗೆ ಮಾತ್ರ ರಜೆ ಘೋಷಣೆ ಮಾಡಲಾಗಿದೆ.

ಶಿವಮೊಗ್ಗದ 2 ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ

ಇನ್ನು ಮಲೆನಾಡಿನ ಹೆಬ್ಬಾಗಿಲು ಎಂದೇ ಕರೆಯುವ ಶಿವಮೊಗ್ಗದಲ್ಲೂ ವರುಣನ ಆರ್ಭಟ ಜೋರಾಗಿದೆ. ಇದರಿಂದ ಶಿವಮೊಗ್ಗ ಜಿಲ್ಲೆಯ ಸಾಗರ ಹಾgಊ ಹೊಸನಗರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ನೀಡಲಾಗಿದೆ. ಸಾಗರ ತಾಲೂಕಿನಲ್ಲಿ ರೆಡ್ ಅಲರ್ಟ್ ಸೂಚಿಸಿರುವುದಕ್ಕೆ ಮುಂಜಾಗೃತಾ ಕ್ರಮವಾಗಿ ನಾಳೆ(ಜು.16) ರಜೆ ಘೋಷಣೆ ಮಾಡಿ ತಾಶೀಲ್ದಾರ್ ಚಂದ್ರಶೇಕರ್ ನಾಯಕ್ ಆದೇಶ ಹೊರಡಿಸಿದ್ದಾರೆ. ಇನ್ನು ಹೊಸನಗರ ತಾಲೂಕಿನಲ್ಲೂ ಮಳೆ ಮುಂದುವರಿದಿದ್ದು ರೆಡ್ ಅಲರ್ಟ್ ಕಾರಣಕ್ಕಾಗಿ ತಹಶೀಲ್ದಾರ್ ರಶ್ಮಿ ಹಾಲೇಶ್ ಶಾಲಾ-ಕಾಲೇಜುಗಳಿಗೆ ರಜೆ ನೀಡಿದ್ದಾರೆ.

ಕೊಡಗಿನಲ್ಲೂ ಶಾಲಾ-ಕಾಲೇಜುಗಳಿಗೆ ರಜೆ

ಕೊಡಗು ಜಿಲ್ಲೆಯಲ್ಲೂ ಸಹ ಮಳೆ ಸುರಿಯುತ್ತಿದ್ದು, ಹಳ್ಳ-ಕೊಳ್ಳಗಳು ತುಂಬಿ ರಸ್ತೆ ಮೇಲೆ ನೀರು ಹರಿತ್ತಿದೆ. ಮುಂಜಾಗ್ರತಾವಾಗಿ ನಾಳೆ ಜಿಲ್ಲೆಯ ಎಲ್ಲ ಶಾಲಾ-ಕಾಲೇಜುಗಳಿಗೆ ರಜೆ ನಿಡಲಾಗಿದೆ. ಅಂಗನವಾಡಿ, ಶಾಲಾ-‌ ಕಾಲೇಜುಗಳಿಗೆ ರಜೆ ಘೋಷಣೆ ಜಿಲ್ಲಾಧಿಕಾರಿ ಡಾ.ವೆಂಕಟರಾಜಾ ಆದೇಶ ಹೊರಡಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಜೆ ಘೋಷಣೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂದುವರಿದಿದೆ. ಕಳೆದ 2 ದಿನಗಳಿಂದ ಭಾರಿ ಗಾಳಿ ಸಹಿತ ಮಳೆಯಾಗುತ್ತಿದ್ದು, ನಾಳೆ ಇನ್ನಷ್ಟು ಹೆಚ್ಚಾಗುವ ಸಾಧ್ಯತೆಗಳಿವೆ. ಹೀಗಾಗಿ ಹವಾಮಾನ ಇಲಾಖೆ ನಾಳೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಇದರಿಂದ ಮುಂಜಾಗ್ರತಾ ಕ್ರಮವಾಗಿ ನಾಳೆ(ಜುಲೈ16) ದಕ್ಷಿಣ ಕನ್ನಡ ಜಿಲ್ಲಾ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ನಾಳೆ ಜಿಲ್ಲಾದ್ಯಂತ ರೆಡ್ ಅಲರ್ಟ್ ಇರುವ ಹಿನ್ನಲೆಯಲ್ಲಿ ಭಾರೀ‌ ಮಳೆ‌ಯಾಗೋ ಸಾಧ್ಯತೆ ಇದೆ. ಹೀಗಾಗಿ ಸರ್ಕಾರಿ, ಅನುದಾನಿತ, ಖಾಸಗಿ ಶಾಲಾ ಕಾಲೇಜಿಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

ಹಾಸನದ ಐದು ತಾಲೂಕಿನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ

ಹಾಸನ ಹಾಸನ ಜಿಲ್ಲೆಯಾದ್ಯಂತ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯು ಜುಲೈ17 ರ ವರೆಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಈ ಹಿನ್ನೆಲೆಯಲ್ಲಿ ನಾಳೆ (ಜುಲೈ 16) ಜಿಲ್ಲೆಯ ಐದು ತಾಲೂಕುಗಳಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಹಾಸನ, ಸಕಲೇಶಪುರ, ಆಲೂರು,ಬೇಲೂರು, ಅರಕಲಗೂಡು ತಾಲ್ಲೂಕಿನ ಪ್ರಾಥಮಿಕ ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಿ ಡಿಡಿಪಿಐ ಎಚ್ ಕೆ ಪಾಂಡು ಆದೇಶ ಹೊರಡಿಸಿದ್ದಾರೆ.

Tags: Dakshina KannadaHassanKodaguRain FallSakleshpuraUdupi
Previous Post

Hero Honda Splendor Plus: ಹಳೇ ಸ್ಪ್ಲೆಂಡರ್ ಬೈಕ್‌ ಹೊಂದಿರುವವರಿಗೆ ಗುಡ್‌ನ್ಯೂಸ್‌

Next Post

ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗು ಉಪ ಲೋಕಾಯುಕ್ತರಾದ ಶ್ರೀ ಬಿ. ವೀರಪ್ಪ ರವರನ್ನು ಬೇಟಿ ಮಾಡಿದ ಎ.ಎಸ್ ಪೊನ್ನಣ್ಣ..

Related Posts

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ
Top Story

ಕೇಳಚಂದ್ರ ಫೌಂಡೇಷನ್‌ ನಿಂದ ಕೌಶಲ್ಯ ತರಬೇತಿ ಪಡೆದವರಿಗೆ ಪ್ರಮಾಣ ಪತ್ರ

by ಪ್ರತಿಧ್ವನಿ
February 10, 2026
0

  ಬೆಂಗಳೂರು, ಫೆ. 10, 2026: ಸರ್ವಜ್ಞನಗರ ವಿಧಾನಸಭಾ ಕ್ಷೇತ್ರದ ಕೆ.ಜಿ. ಹಳ್ಳಿಯ ಕೇಳಚಂದ್ರ ಕೌಶಲ್ಯ ಅಭಿವೃದ್ಧಿ ಕೇಂದ್ರದಲ್ಲಿ ವಿವಿಧ ಕೌಶಲಗಳ ತರಬೇತಿ ಪೂರ್ಣಗೊಳಿಸಿದ ಮಹಿಳೆಯರಿಗೆ ಕೇಳಚಂದ್ರ...

Read moreDetails
RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

RAICHURU:ಅಧಿಕಾರಿಗಳ ಎಡವಟ್ಟು: ಸಿಎಂ ಸಿದ್ದರಾಮಯ್ಯ ಹೆಲಿಕಾಪ್ಟರ್ ಲ್ಯಾಂಡಿಂಗ್ ವೇಳೆ ಗೊಂದಲ

February 8, 2026
ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

ʼರಾಯರ ದರ್ಶನʼ: ರಜನಿಕಾಂತ್, ಶಿವಣ್ಣ ಸೇರಿದಂತೆ 25ಕ್ಕೂ ಹೆಚ್ಚು ತಾರೆಯರ ಮಹಾಸಂಗಮ

February 8, 2026
ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

ಜಿ.ಟಿ ದೇವೇಗೌಡ ಈಗ ಮಹಾನ್ ನಾಯಕರ ಜೊತೆ ಇದ್ದಾರೆ: ಕುಮಾರಸ್ವಾಮಿ ವಾಗ್ದಾಳಿ

February 8, 2026
KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

KOPPALA: ಸಾರಾಯಿ ಎಂದು ಸ್ಪಿರಿಟ್ ಸೇವನೆ: ಇಬ್ಬರು ಯುವಕರ ಸಾ**

February 8, 2026
Next Post
ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗು ಉಪ ಲೋಕಾಯುಕ್ತರಾದ ಶ್ರೀ ಬಿ. ವೀರಪ್ಪ ರವರನ್ನು ಬೇಟಿ ಮಾಡಿದ ಎ.ಎಸ್ ಪೊನ್ನಣ್ಣ..

ಗೌರವಾನ್ವಿತ ನ್ಯಾಯಮೂರ್ತಿಗಳು ಹಾಗು ಉಪ ಲೋಕಾಯುಕ್ತರಾದ ಶ್ರೀ ಬಿ. ವೀರಪ್ಪ ರವರನ್ನು ಬೇಟಿ ಮಾಡಿದ ಎ.ಎಸ್ ಪೊನ್ನಣ್ಣ..

https://www.youtube.com/watch?v=1mlC4BzAl-w

Browse by Category

  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada

Welcome Back!

OR

Login to your account below

Forgotten Password?

Retrieve your password

Please enter your username or email address to reset your password.

Log In
error: Content is protected !!
No Result
View All Result
  • {TEST_TITLE}
  • About Us
  • Blog
  • Company Ethical Policies
  • Fact Checking Policy
  • Home
  • Home 2
  • Home 3
  • Home 4
  • Home 5
  • Home 6
  • Pratidhvani
  • Pratidhvani.com
  • Privacy Policy

© 2024 www.pratidhvani.com - Analytical News, Opinions, Investigative Stories and Videos in Kannada